ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ 2025 ಟೂರ್ನಿಯ ಹೈ ವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ 146 ರನ್ ಗಳಿಗೆ ಆಲೌಟ್ ಆಗಿದೆ. ಭಾರತ ಗೆಲ್ಲಲು 147 ರನ್ ಗಳ ಗುರಿ ನೀಡಿದೆ.
ಟಾಸ್ ಗೆದ್ದರೂ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ ಇನ್ನೂ 5 ಎಸೆತಗಳು ಬಾಕಿ ಇರುವಂತೆಯೇ 146 ರನ್ ಗಳಿಗೆ ಪಾಕಿಸ್ತಾನ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
ಭಾರತದ ಪರ ಕುಲದೀಪ್ ಯಾದವ್ ಒಂದೇ ಓವರ್ ನಲ್ಲಿ ಮೂರು ವಿಕೆಟ್ ಸೇರಿದಂತೆ ಒಟ್ಟಾರೇ 4 ವಿಕೆಟ್ ಪಡೆದರು. ಉಳಿದಂತೆ ಅಕ್ಷರ್ ಪಟೇಲ್ , ವರುಣ್ ಚಕ್ರವರ್ತಿ, ಬೂಮ್ರಾ ತಲಾ 2 ವಿಕೆಟ್ ಕಬಳಿಸುವ ಮೂಲಕ ಪಾಕಿಸ್ತಾನ ತಂಡ 150 ರ ಗಡಿ ದಾಟದಂತೆ ಅತ್ಯುತ್ತಮ ಬೌಲಿಂಗ್ ಮಾಡಿದರು.
ಇದಕ್ಕೂ ಮುನ್ನ ಪಾಕಿಸ್ತಾನ ಪರ ಆರಂಭಿಕ ಆಟಗಾರರಾದ ಸಾಹಿಬ್ಜಾದ ಫರ್ಹನ್ 57, ಫಾಕರ್ ಜಮಾನ್ 46 ರನ್ ಗಳಿಸುವ ಮೂಲಕ ತಂಡ 140 ರ ಗಡಿ ದಾಟುವಂತೆ ಮಾಡಿದರು. ಸಾಯಿಬ್ ಅಯುಬ್ 14 ರನ್ ಗಳಿಸಿದದ್ದು ಹೊರತುಪಡಿಸಿದರೆ ಉಳಿದಂತೆ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಭಾರತದ ಬೌಲರ್ ಗಳ ವೇಗಕ್ಕೆ ತತ್ತರಿಸಿ ಬೇಗನೆ ಫೆವಿಲಿಯನ್ ಸೇರಿದರು.