ಭಾರತ ತಂಡ 
ಕ್ರಿಕೆಟ್

ಪಾಕ್ ಮಣಿಸಿ ಏಷ್ಯಾಕಪ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ BCCI ಭರ್ಜರಿ ಗಿಫ್ಟ್

ಈ ಬಹುಮಾನವು ತಂಡದ ಮನೋಸ್ಥೈರ್ಯವನ್ನು ಹೆಚ್ಚಿಸುವುದಲ್ಲದೆ, ಭವಿಷ್ಯದಲ್ಲಿ ಯುವ ಆಟಗಾರರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಸ್ಫೂರ್ತಿ ನೀಡುತ್ತದೆ.

ನವದೆಹಲಿ: ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳಲ್ಲೂ ಪ್ರಾಬಲ್ಯ ಸಾಧಿಸಿ ಗಮನಾರ್ಹ ವಿಜಯ ದಾಖಲಿಸಿರುವ ಟೀಮ್ ಇಂಢಿಯಾಗೆ ಬಿಸಿಸಿಐ ಗಿಫ್ಟ್ ಘೋಷಣೆ ಮಾಡಿದೆ.

ಏಷ್ಯಾ ಕಪ್ ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯ ಸಿಬ್ಬಂದಿಗೆ ಬಿಸಿಸಿಐ ಬರೋಬ್ಬರಿ ರೂ.21 ಕೋಟಿ ನಗದು ಬಹುಮಾನ ಘೋಷಿಸಿದೆ. ಇದು ಏಷ್ಯಾಕಪ್ ಆಯೋಜಕರಾದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿಂದ ಚಾಂಪಿಯನ್ ತಂಡಕ್ಕೆ ಸಿಗುವ ಮೊತ್ತಕ್ಕಿಂತ ಶೇ.10ಪಟ್ಟು ಹೆಚ್ಚಾಗಿದೆ.

ಟೂರ್ನಿ ಬಹುಮಾನ ಮೊತ್ತವಾಗಿ ಭಾರತಕ್ಕೆ 2.3 ಕೋಟಿ ಲಭಿಸಿತ್ತು. ರನ್ನರ್ ಅಪ್ ಪಾಕಿಸ್ತಾನಕ್ಕೆ ಏಷ್ಯಾ ಕ್ರಿಕೆಟ್ ಮಂಡಳಿಯಿಂದ 1.3 ಕೋಟಿ ರೂ. ಬಹುಮಾನ ದೊರೆಯಿತು. ಅಭಿಷೇಕ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಈ ಬಹುಮಾನವು ತಂಡದ ಮನೋಸ್ಥೈರ್ಯವನ್ನು ಹೆಚ್ಚಿಸುವುದಲ್ಲದೆ, ಭವಿಷ್ಯದಲ್ಲಿ ಯುವ ಆಟಗಾರರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಸ್ಫೂರ್ತಿ ನೀಡುತ್ತದೆ. ಇದೀಗ ಬಿಸಿಸಿಐ ನಡೆಗೆ ಕ್ರಿಕೆಟ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್