ಹೆನ್ರಿಚ್ ಕ್ಲಾಸನ್ 
ಕ್ರಿಕೆಟ್

IPL 2026: ಅಭಿಷೇಕ್, ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ SRH ಭರ್ಜರಿ ಗೆಲುವು

ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್(SRH) ತಂಡ ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್(KKR) ವಿರುದ್ಧ 65 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲ ಬ್ಯಾಟಿಂಗ್‌ ಮಾಡಿದ ಹೈದರಾಬಾದ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 226 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು.

ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ(48) ಹಾಗೂ ಟ್ರಾವಿಸ್ ಹೆಡ್(46) ಸ್ಫೋಟಕ ಬ್ಯಾಟಿಂಗ್ ಮಾಡಿ, 81 ರನ್ ಗಳ ಜೊತೆಯಾಟ ಆಡಿದರು. ನಂತರ ಹೆನ್ರಿಚ್ ಕ್ಲಾಸನ್ ಅವರ ಅರ್ಧ ಶತಕ(52)ದ ನೆರವಿನಿಂದ ಹೈದರಾಬಾದ್ ತಂಡ 226 ರನ್ ಸೇರಿಸಿತು.

ಕೋಲ್ಕತ್ತಾ ಪರ ಬ್ಲೆಸ್ಸಿಂಗ್ ಮುಜರಬಾನಿ ಅವರು ಅದ್ಭುತ ಬೌಲಿಂಗ್ ಮಾಡಿ 4 ವಿಕೆಟ್‌ಗಳನ್ನು ಪಡೆದು ಮಿಂಚಿದರು.

ಗೆಲುವಿಗೆ 227 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಕೋಲ್ಕತ್ತಾ ನೈಟ್ ರೈಡರ್ಸ್, 16 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 161 ರನ್ ಗಳಿಸುವ ಮೂಲಕ ಹೀನಾಯ ಸೋಲು ಅನುಭವಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!