ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

IPL 2026: RCB ವಿರುದ್ಧದ ಹೈ-ವೋಲ್ಟೇಜ್‌ ಪಂದ್ಯಕ್ಕೂ ಮೊದಲೇ ಧೋನಿ ಕಮ್‌ಬ್ಯಾಕ್‌?

ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಆರ್ ಸಿಬಿ ವಿರುದ್ಧದ ಹೈ-ವೋಲ್ಟೇಜ್‌ ಪಂದ್ಯಕ್ಕೂ ಮೊದಲೇ ಎಂಎಸ್ ಧೋನಿ ತಂಡಕ್ಕೆ ಮರಳುವ ಸುಳಿವು ನೀಡಿದ್ದಾರೆ.

ಎಂಎಸ್‌ ಧೋನಿ
Lingaraj Badiger
Updated On : 2 Apr 2026, 9:13 pm

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕ್ಯಾಪ್ಟನ್‌ ಕೂಲ್‌ ಖ್ಯಾತಿಯ ಎಂಎಸ್‌ ಧೋನಿ ಅವರು ಈಗ ಚೇತರಿಸಿಕೊಂಡಿದ್ದು, ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಆರ್ ಸಿಬಿ ವಿರುದ್ಧದ ಹೈ-ವೋಲ್ಟೇಜ್‌ ಪಂದ್ಯಕ್ಕೂ ಮೊದಲೇ ತಂಡಕ್ಕೆ ಮರಳುವ ಸುಳಿವು ನೀಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಧೋನಿ ಕಮ್‌ಬ್ಯಾಕ್‌ಗಾಗಿ ಕಾಯುತ್ತಿದ್ದು, ಪಂಜಾಬ್ ಕಿಂಗ್ಸ್ ವಿರುದ್ಧದ ಮುಂಬರುವ ಪಂದ್ಯದಲ್ಲಿ CSKಗೆ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಆರಂಭಿಕ ಪಂದ್ಯದಿಂದ ಹೊರಗುಳಿದಿರುವ ಧೋನಿ ಈಗ ಸಂಪೂರ್ಣ ಚೇತರಿಸಿಕೊಂಡಿರುವಂತೆ ಕಂಡುಬಂದಿದ್ದು, ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ನೆಟ್ ಅಭ್ಯಾಸಕ್ಕೆ ಮರಳಿದ್ದಾರೆ.

Advertisement

Advertisement

Also Read

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

ಕೈಯಲ್ಲಿ ಕಿಟ್‌ಬ್ಯಾಗ್‌ನೊಂದಿಗೆ ಅಭ್ಯಾಸಕ್ಕೆ ಆಗಮಿಸಿದ ಧೋನಿ, ನೆಟ್ಸ್‌ನಲ್ಲಿ ಕೆಲವು ಚೆಂಡುಗಳನ್ನು ಎದುರಿಸಿದರು. ಇದು ಅವರ ಗಾಯದ ಸಮಸ್ಯೆ ಮತ್ತು ಫಿಟ್ನೆಸ್‌ ಬಗ್ಗೆ ಇದ್ದ ಆತಂಕವನ್ನು ಕಡಿಮೆ ಮಾಡಿದೆ.

44 ವರ್ಷದ ಅನುಭವಿ ಆಟಗಾರ ಧೋನಿ, ರಾಜಸ್ಥಾನ್ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ಎರಡು ವಾರಗಳ ಕಾಲ ಹೊರಗುಳಿಯಬೇಕಾಗಿತ್ತು ಎಂದು ವರದಿಯಾಗಿತ್ತು. ಇದರಿಂದ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು. ಆದರೆ ಈಗ ಅವರು ಮತ್ತೆ ಅಭ್ಯಾಸಕ್ಕೆ ಮರಳಿರುವುದು ಸೂಪರ್‌ ಕಿಂಗ್ಸ್‌ ತಂಡಕ್ಕೆ ಧೈರ್ಯ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments