ಸೂರ್ಯಕುಮಾರ್ ಯಾದವ್ - ಅಕ್ಷರ್ ಪಟೇಲ್ 
ಕ್ರಿಕೆಟ್

IPL 2026, DC vs MI: ಹಾರ್ದಿಕ್ ಪಾಂಡ್ಯ ಔಟ್, ಸೂರ್ಯಕುಮಾರ್ ಯಾದವ್‌ಗೆ ಮುಂಬೈ ನಾಯಕತ್ವ; ಡೆಲ್ಲಿ ಬೌಲಿಂಗ್ ಆಯ್ಕೆ!

ಹಾರ್ದಿಕ್ ಅನುಪಸ್ಥಿತಿಯಲ್ಲಿ, ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ದೀಪಕ್ ಚಾಹರ್ ಸ್ಟಾರ್ ಆಲ್‌ರೌಂಡರ್ ಬದಲಿಗೆ ತಂಡಕ್ಕೆ ಆಯ್ಕೆಯಾಗಿದ್ದಾರೆ.

ನವದೆಹಲಿ: ಶನಿವಾರ ಇಲ್ಲಿ ನಡೆಯುತ್ತಿರುವ ಐಪಿಎಲ್‌ 2026ನೇ ಆವೃತ್ತಿಯ ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ನಾಯಕ ಅಕ್ಷರ್ ಪಟೇಲ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ.

ಹಾರ್ದಿಕ್ ಅನುಪಸ್ಥಿತಿಯಲ್ಲಿ, ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ದೀಪಕ್ ಚಾಹರ್ ಸ್ಟಾರ್ ಆಲ್‌ರೌಂಡರ್ ಬದಲಿಗೆ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದಲ್ಲದೆ, ಟ್ರೆಂಟ್ ಬೌಲ್ಟ್ ಮತ್ತು ಅಲ್ಲಾ ಗಜನ್‌ಫರ್ ಬದಲಿಗೆ ಕಾರ್ಬಿನ್ ಬಾಷ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಮುಂದುವರಿಸಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಡೆಲ್ಲಿ ಕ್ಯಾಪಿಟಲ್ಸ್: ಕೆಎಲ್ ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ನಿತೀಶ್ ರಾಣಾ, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ವಿಪ್ರಜ್ ನಿಗಮ್, ಲುಂಗಿ ಎಂಗಿಡಿ, ಕುಲದೀಪ್ ಯಾದವ್, ಟಿ ನಟರಾಜನ್, ಮುಕೇಶ್ ಕುಮಾರ್.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ನಮನ್ ಧೀರ್, ಶೆರ್ಫೇನ್ ರುದರ್‌ಫೋರ್ಡ್, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ': ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!

‘ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು’: 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ

ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ವೇಳೆ 'One8' ಬ್ರ್ಯಾಂಡ್‌ ಶೂ ತೋರಿಸಿದ ಅಭಿಮಾನಿ! ಕೊಹ್ಲಿ ರಿಯಾಕ್ಷನ್ ಹೇಗಿತ್ತು ಗೊತ್ತಾ? Video

'ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು: SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'