ಪಂಜಾಬ್ vs ಚೆನ್ನೈ ಪಂದ್ಯ 
ಕ್ರಿಕೆಟ್

IPL 2026: Shreyas Iyer ಗೆ ಮತ್ತೆ ದಂಡ; ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಪಂಜಾಬ್ ತಂಡದ ಎಲ್ಲ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ.

ಚೆನ್ನೈ: ಐಪಿಎಲ್ 2026 ಟೂರ್ನಿಯ ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಮತ್ತೆ ದಂಡ ಬಿದ್ದಿದ್ದು, ಈ ಬಾರಿ ಕೇವಲ ನಾಯಕ ಶ್ರೇಯಸ್ ಅಯ್ಯರ್ ಮಾತ್ರವಲ್ಲ.. ಬದಲಿಗೆ ಇಡೀ ತಂಡಕ್ಕೆ ಮ್ಯಾಚ್ ರೆಫರಿ ದಂಡ ಹೇರಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪಂಜಾಬ್ ತಂಡದ ಎಲ್ಲ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು, ಹೀಗಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್​ಗೆ ದಂಡ ವಿಧಿಸಲಾಗಿದೆ.

2ನೇ ಬಾರಿಗೆ ಶಿಸ್ತುಕ್ರಮ

ಇನ್ನು ಈ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಗೆ ದಂಡ ಹೇರುತ್ತಿರುವುದು ಇದೇ ಮೊದಲೇನಲ್ಲ.. ಈ ಹಿಂದೆಯೂ ಶ್ರೇಯಸ್ ಅಯ್ಯರ್ ಇದೇ ಸ್ಲೋ ಓವರ್ ರೇಟ್ ವಿಚಾರವಾಗಿ ದಂಡತೆತ್ತಿದ್ದರು. ಇದೀಗ ಅವರಿಗೆ ಬರೊಬ್ಬರಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಇದೀಗ ಮತ್ತದೇ ತಪ್ಪು ಪುನರಾವರ್ತಿಸಿದ ಕಾರಣ 24 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಆಟಗಾರರಿಗೂ ದಂಡ

ನಾಯಕ ಶ್ರೇಯಸ್ ಅಯ್ಯರ್ ಮಾತ್ರವಲ್ಲದೇ ಪಂಜಾಬ್ ನ ಎಲ್ಲ ಆಟಗಾರರಿಗೂ ಮ್ಯಾಚ್ ರೆಫರಿ ಶಾಕ್ ನೀಡಿದ್ದು, ಪ್ಲೇಯಿಂಗ್ ಇಲೆವೆನ್​ನಲ್ಲಿದ್ದ (ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ) ಪ್ರತಿಯೊಬ್ಬ ಆಟಗಾರನಿಗೂ 6 ಲಕ್ಷ ರೂಪಾಯಿ ಅಥವಾ ಅವರ ಪಂದ್ಯದ ಸಂಭಾವನೆಯ 25% ರಷ್ಟು ದಂಡ ಹಾಕಲಾಗಿದೆ.

ನಿಯಮವೇನು?

ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.

ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಅಂತೆಯೇ ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ