ಸಂಜೀವ್ ಗೊಯೆಂಕಾ ಮತ್ತು ರಿಷಬ್ ಪಂತ್ 
ಕ್ರಿಕೆಟ್

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSG ಭರ್ಜರಿ ಜಯ; ಮೈದಾನದಲ್ಲೇ Rishabh Pant ಬಿಗಿದಪ್ಪಿದ Sanjiv Goenka

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026)ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಿದ ಲಕ್ನೋ ಸೂಪರ್​ಜೈಂಟ್ಸ್ ತನ್ನ ಮೊದಲ ಗೆಲುವು ದಾಖಲಿಸಿತು.

ಹೈದರಾಬಾದ್: ಐಪಿಎಲ್ 2026ರ ಟೂರ್ನಿಯಲ್ಲಿ ಮೊದಲ ಗೆಲುವು ಕಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ತಂಡದ ನಾಯಕ ರಿಷಬ್ ಪಂತ್ ರನ್ನು ಬಿಗಿದಪ್ಪಿದ ಘಟನೆ ನಡೆದಿದೆ.

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026)ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಿದ ಲಕ್ನೋ ಸೂಪರ್​ಜೈಂಟ್ಸ್ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವು ದಾಖಲಿಸಿತು.

ಸನ್‌ರೈಸರ್ಸ್ ನೀಡಿದ 157 ರನ್​ಗಳ ಗುರಿಯನ್ನು ಬೆನ್ನಟ್ಟಲು ಸಾಕಷ್ಟು ಕಷ್ಟಪಟ್ಟ ಲಕ್ನೋ, ನಾಯಕ ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದಾಗಿ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತು.

ಕೊನೆಯ ಓವರ್​ ವರೆಗೂ ರೋಚಕತೆಯಿಂದ ಕೂಡಿದ ಈ ಪಂದ್ಯವನ್ನು ಲಕ್ನೋ ತಂಡ ಗೆಲ್ಲುತ್ತಿದ್ದಂತೆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ತುಂಬಾ ಭಾವುಕರಾಗಿ ಆನಂದಭಾಷ್ಪ ಹರಿಸಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ತಂಡದ ಗೆಲುವನ್ನು ಚಪ್ಪಾಳೆ ತಟ್ಟುತ್ತ ಸಂಜೀವ್ ಗೋಯೆಂಕಾ ಸಂಭ್ರಮಿಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೈದಾನದಲ್ಲೇ ರಿಷಬ್ ಪಂತ್ ಬಿಗಿದಪ್ಪಿದ ಸಂಜೀವ್ ಗೋಯೆಂಕಾ

ಇನ್ನು ಪಂದ್ಯ ಮುಕ್ತಾಯವಾಗುತ್ತಲೇ ಮೈದಾನಕ್ಕೆ ಧಾವಿಸಿದ ಸಂಜೀವ್ ಗೋಯೆಂಕಾ, ಲಕ್ನೋ ತಂಡದ ನಾಯಕ ರಿಷಬ್ ಪಂತ್ ರನ್ನು ಆಲಂಗಿಸಿಕೊಂಡು ಅವರ ಆಟವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ವೇಳೆ ಪಂತ್‌ ಕೂಡ ಗೋಯೆಂಕಾ ಅವರ ಮಾತಿಗೆ ನಕ್ಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದಕ್ಕೂ ಮೊದಲು ಅಂದರೆ ಲಕ್ನೋ ತಂಡದ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಪಂದ್ಯ ಸೋತ ಬಳಿಕ ಮೈದಾನದಲ್ಲಿ ನಾಯಕ ರಿಷಭ್‌ ಪಂತ್‌ ಅವರನ್ನು ಸಂಜಯ್‌ ಗೋಯೆಂಕಾ ತರಾಟೆಗೆ ತೆಗೆದುಕೊಂಡಿದ್ದರು. ಈ ವಿಚಾರಕ್ಕೆ ನೆಟ್ಟಿಗರು ಗೋಯೆಂಕಾ ವಿರುದ್ಧ ಸಿಟ್ಟು ಹೊರಹಾಕಿದ್ದರು. ಇದು ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋನೇಷ್ಯಾ ಸಂಸತ್ತಿನಲ್ಲಿ ಒಡಿಶಾದ ಮಾಜಿ ಸಿಎಂ ಬಿಜು ಪಟ್ನಾಯಕ್ ಪರಾಕ್ರಮ ಬಣ್ಣಿಸಿದ ಪ್ರಧಾನಿ ಮೋದಿ!

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಅರ್ಜೆಂಟೀನಾ ಲಗ್ಗೆ!

E20 ಪೆಟ್ರೋಲ್‌ನಿಂದಾಗಿ ಎಂಜಿನ್‌ ಹಾಳಾದ ಒಂದೇ ಒಂದು ಕಾರನ್ನು ತೋರಿಸಿ: ಗಡ್ಕರಿ ಬಹಿರಂಗ ಸವಾಲು

ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು - Video

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!