ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 
ಕ್ರಿಕೆಟ್

IPL 2026 Points Table: CSK ವಿರುದ್ಧ ಗೆದ್ದು ಬೀಗಿದ RCB; ಅಂಕಪಟ್ಟಿಯಲ್ಲಿ ಮೊದಲ ಸ್ಥಾನ; ಕೊನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡ ಚೆನ್ನೈ!

ಆರ್‌ಸಿಬಿ ವಿರುದ್ಧದ ಸೋಲಿನ ನಂತರ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಆವೃತ್ತಿಯಲ್ಲಿ ಸತತ ಮೂರನೇ ಸೋಲು ಕಂಡಿತು.

ಟಿಮ್ ಡೇವಿಡ್, ನಾಯಕ ರಜತ್ ಪಾಟಿದಾರ್ ಮತ್ತು ದೇವದತ್ ಪಡಿಕ್ಕಲ್ ಅವರ ಅದ್ಭುತ ಬ್ಯಾಟಿಂಗ್ ಮತ್ತು ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಪಡಿಕ್ಕಲ್ (29 ಎಸೆತಗಳಲ್ಲಿ 50) ಮತ್ತು ಟಿಮ್ ಡೇವಿಡ್ (25 ಎಸೆತಗಳಲ್ಲಿ 70) ಮತ್ತು ರಜತ್ ಪಾಟೀದಾರ್ 19 ಎಸೆತಗಳಲ್ಲಿ ಅಜೇಯ 48 ರನ್ ಗಳಿಸಿ ಸಿಎಸ್‌ಕೆ ಬೌಲರ್‌ಗಳ ಬೆವರಿಳಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಮೂರು ವಿಕೆಟ್‌ ನಷ್ಟಕ್ಕೆ ಭರ್ಜರಿ 250 ರನ್ ಕಲೆಹಾಕಿತು.

ಈ ಮೂಲಕ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಆವೃತ್ತಿಯಲ್ಲಿ ಸತತ ಮೂರನೇ ಸೋಲು ಕಂಡಿತು. ಸಂಜು ಸ್ಯಾಮ್ಸನ್, ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಆಯುಷ್ ಮ್ಹಾತ್ರೆ ಕೇವಲ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದ ನಂತರ, ಸಿಎಸ್‌ಕೆ ತಂಡ ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ವೇಗಿ ಜೇಕಬ್ ಡಫಿ (2/58) ಸಿಎಸ್‌ಕೆಗೆ ಹೆಚ್ಚಿನ ಹಾನಿಯನ್ನುಂಟುಮಾಡಿದರು. ಆರಂಭದಲ್ಲಿಯೇ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಅವರ ವಿಕೆಟ್ ಕಬಳಿಸಿದರು. ಅನುಭವಿ ವೇಗಿ ಭುವನೇಶ್ವರ್ ಕುಮಾರ್ 3, ಅಭಿನಂದನ್ ಸಿಂಗ್ ಮತ್ತು ಕೃನಾಲ್ ಪಾಂಡ್ಯಾ ತಲಾ 2 ಹಾಗೂ ಸುಯಾಶ್ ಶರ್ಮಾ ಒಂದು ವಿಕೆಟ್ ಪಡೆದು ಆರ್‌ಸಿಬಿ ಗೆಲುವಿಗೆ ನೆರವಾದರು.

ಟಾಸ್ ಗೆದ್ದ ಸಿಎಸ್‌ಕೆ ನಾಯಕ ರುತುರಾಜ್ ಬೌಲಿಂಗ್ ಆಯ್ದುಕೊಂಡರು. ಆರ್‌ಸಿಬಿ ನೀಡಿದ 251 ರನ್ ಗುರಿ ಬೆನ್ನತ್ತಿದ ಸಿಎಸ್‌ಕೆ 19.4 ಓವರ್‌ಗಳಲ್ಲಿ 207 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಅಂತಿಮವಾಗಿ ಆರ್‌ಸಿಬಿ ಸಿಎಸ್‌ಕೆ ವಿರುದ್ಧ 43 ರನ್‌ಗಳ ಭರ್ಜರಿ ಜಯ ಸಾಧಿಸಿತು.

ಈ ಗೆಲುವಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿರುವ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಉತ್ತಮ ನೆಟ್ ರನ್‌ ರೇಟ್‌ನೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ. ಟೂರ್ನಿಯಲ್ಲಿ ಸತತ ಮೂರು ಸೋಲು ಕಂಡಿರುವ ಚೆನ್ನೈ 10ನೇ ಸ್ಥಾನಕ್ಕೆ ಕುಸಿದಿದೆ.

ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ ಎರಡನೇ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸುವ ಮೂಲಕ ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಲೆಕ್ಕಾಚಾರವೇ ತಲೆಕೆಳಗೆ: Iran ನಿಂದ ವೇಗವಾಗಿ ಶಸ್ತ್ರಾಸ್ತ್ರ ನೆಲೆಗಳ ಪುನರ್‌ನಿರ್ಮಾಣ, ಈಗಾಗಲೇ ಡ್ರೋನ್ ಉತ್ಪಾದನೆ ಆರಂಭ: ವರದಿ

No police, No court: ಅಕ್ರಮ ಬಾಂಗ್ಲಾ ವಲಸಿಗರು ಇನ್ನು ಮುಂದೆ ನೇರ BSF ವಶಕ್ಕೆ: CM ಸುವೇಂದು ಅಧಿಕಾರಿ ಸೂಚನೆ

'ಗೃಹಲಕ್ಷ್ಮಿ ಹಣ ಕೊಡಿಸಿ'; ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆಯರು, ಸರ್ಕಾರಕ್ಕೆ ನೋಟಿಸ್ ಜಾರಿ

IPL 2026: 'ಹಾರ್ದಿಕ್ ಪಾಂಡ್ಯ ತಂಡದ ವಾತಾವರಣ ಹಾಳು ಮಾಡಿದರು, ರೋಹಿತ್ ಶರ್ಮಾರ ಗೌರವ ಮರಳಿಸಿ': ಮುಂಬೈ ಇಂಡಿಯನ್ಸ್ ಗೆ ಸಲಹೆ

IPL 2026: ಕೊನೆಗೂ 13 ವರ್ಷಗಳ ಹಳೆಯ Chris Gayle ದಾಖಲೆ ಮುರಿದ Sai Sudharsan

SCROLL FOR NEXT