ಡೇವಿಡ್ ವಾರ್ನರ್  
ಕ್ರಿಕೆಟ್

Drink and Drive Case: ಆಸ್ಟ್ರೇಲಿಯಾದ ಲೆಜೆಂಡ್ ಡೇವಿಡ್ ವಾರ್ನರ್ ಬಂಧನ! ಕರಾಚಿ ಕಿಂಗ್ಸ್ ಗೆ ಹೊಡೆತ!

ತಪಾಸಣೆ ವೇಳೆಯಲ್ಲಿ ನ್ಯೂ ಸೌತ್ ವೇಲ್ಸ್ ಪೊಲೀಸರು ಡೇವಿಡ್ ವಾರ್ನರ್ ಅವರನ್ನು ಬಂಧಿಸಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ.

ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಕುಡಿದು ವಾಹನ ಚಾಲನೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಸಿಡ್ನಿಯ ಮರೂಬ್ರಾದಲ್ಲಿ ನಡೆದ ಘಟನೆಯ ನಂತರ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಕೇಳಿಬಂದಿದೆ. ಪ್ರಸ್ತುತ ಅವರು ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಕರಾಚಿ ಕಿಂಗ್ಸ್‌ ಪರ ಆಡುತ್ತಿದ್ದಾರೆ.

ತಪಾಸಣೆ ವೇಳೆಯಲ್ಲಿ ನ್ಯೂ ಸೌತ್ ವೇಲ್ಸ್ ಪೊಲೀಸರು ಡೇವಿಡ್ ವಾರ್ನರ್ ಅವರನ್ನು ಬಂಧಿಸಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ತಪಾಸಣೆ ಮಾಡುತ್ತಿದ್ದ ಸ್ಥಳ ತಲುಪುವ ಮುನ್ನ ವಾರ್ನರ್ ತನ್ನ ಕಾರನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಅಧಿಕಾರಿಗಳು ಕಾರನ್ನು ಎತ್ತಿಕೊಂಡು ಹೋಗಿದ್ದಾರೆ.

ಬಳಿಕ ಅವರನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಮಿತಿ ಮೀರಿ ಆಲ್ಕೋಹಾಲ್ ಸೇವಿಸಿರುವುದು ಕಂಡುಬಂದಿದೆ. ಬಳಿಕ ಪೊಲೀಸರು ವಾರ್ನರ್ ಅವರನ್ನು ಬಂಧಿಸಿ, ಮಾರೂಬ್ರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮುಂದಿನ ತಿಂಗಳು ಮೇ 7 ರಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗುವಂತೆ ಡೇವಿಡ್ ವಾರ್ನರ್ ಅವರಿಗೆ ಆದೇಶಿಸಲಾಗಿದೆ.

ಈ ಘಟನೆಯು PSL ನಲ್ಲಿ ಕರಾಚಿ ಕಿಂಗ್ಸ್‌ ತಂಡಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ಡೇವಿಡ್ ವಾರ್ನರ್ ಈ ತಂಡದ ನಾಯಕರಾಗಿದ್ದಾರೆ. ಕುಟುಂಬವನ್ನು ಭೇಟಿ ಮಾಡಲು ಪಂದ್ಯಾವಳಿಯಿಂದ ಸ್ವಲ್ಪ ದಿನಗಳವರೆಗೆ ವೈಯಕ್ತಿಕ ರಜೆಯನ್ನು ನೀಡಲಾಗಿತ್ತು.

ಕರಾಚಿ ಕಿಂಗ್ಸ್ ಸತತ ಮೂರು ಗೆಲುವಿನೊಂದಿಗೆ PSL ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದರಲ್ಲಿ ವಾರ್ನರ್ ಅವರ ಪಾತ್ರ ಪ್ರಮುಖವಾಗಿದೆ. ರಾವಲ್ಪಿಂಡಿಜ್ ವಿರುದ್ಧ ನಿರ್ಣಾಯಕ ಅರ್ಧಶತಕ ಸೇರಿದಂತೆ ಇದುವರೆಗೆ 93 ರನ್ ಗಳಿಸಿದ್ದಾರೆ.

ಏಪ್ರಿಲ್ 9 ರಂದು ಗುರುವಾರ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ vs ಪೇಶಾವರ್ ಝಲ್ಮಿ ವಿರುದ್ಧ ಪಂದ್ಯ ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್