ಪೆವಿಲಿಯನ್ ನಲ್ಲಿ ಮೊಬೈಲ್ ಬಳಸುತ್ತಿರುವ ಸಿಬ್ಬಂದಿ 
ಕ್ರಿಕೆಟ್

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ; BCCI ಶಿಕ್ಷೆ..! Video

ಆರ್ ಸಿಬಿ ಮತ್ತು ಆರ್ ಆರ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 202 ರನ್ ಗಳ ಗುರಿ ಬೆನ್ನು ಹತ್ತಿದ್ದ ರಾಜಸ್ತಾನ ತಂಡ 18 ಓವರ್ ನಲ್ಲೇ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು.

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ಟೂರ್ನಿಯಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸೋಲಿಸಿದ್ದ ರಾಜಸ್ತಾನ ರಾಯಲ್ಸ್ (RR) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

ಹೌದು, ನಿನ್ನೆ ನಡೆದ ಆರ್ ಸಿಬಿ ಮತ್ತು ಆರ್ ಆರ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 202 ರನ್ ಗಳ ಗುರಿಯನ್ನು ಬೆನ್ನು ಹತ್ತಿದ್ದ ರಾಜಸ್ತಾನ ರಾಯಲ್ಸ್ ತಂಡ 18 ಓವರ್ ನಲ್ಲೇ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು.

ರಾಜಸ್ತಾನ ಪರ ವೈಭವ್ ಸೂರ್ಯವಂಶಿ (78) ಮತ್ತು ಧ್ರುವ್ ಜುರೆಲ್ (ಅಜೇಯ 81) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಜಯ ಸಾಧಿಸಿತು. ಇನ್ನು ಇದೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಮಾಡಿದ ಒಂದು ಎಡವಟ್ಟು ಇದೀಗ ಇಡೀ ತಂಡವನ್ನು ಸಂಕಷ್ಟಕ್ಕೆ ಸಿಲುಕಿದೆ.

ಆಗಿದ್ದೇನು?

ಆರ್‌ಸಿಬಿ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ರಾಜಸ್ತಾನ ರಾಯಲ್ಸ್ ತಂಡದ ಸಹಾಯಕ ಸಿಬ್ಬಂದಿಯೊಬ್ಬರು ಮೊಬೈಲ್ ಫೋನ್ ಬಳಸಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವೈಭವ್ ಸೂರ್ಯವಂಶಿ ಪಕ್ಕದಲ್ಲಿ ಕುಳಿತಿರುವ ಬೆಂಬಲ ಸಿಬ್ಬಂದಿಯೊಬ್ಬರು ಮೊಬೈಲ್ ಬಳಸುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲವನ್ನು ಸೃಷ್ಟಿಸುತ್ತಿದೆ.

ಐಪಿಎಲ್ ಮಾರ್ಗಸೂಚಿಗಳ ಪ್ರಕಾರ, ಭ್ರಷ್ಟಾಚಾರ ವಿರೋಧಿ ಸಮಸ್ಯೆಗಳನ್ನು ತಡೆಗಟ್ಟಲು ಡಗೌಟ್ ಮತ್ತು ಡ್ರೆಸ್ಸಿಂಗ್ ರೂಮ್ ಸೇರಿದಂತೆ ಆಟಗಾರ ಮತ್ತು ಪಂದ್ಯದ ಅಧಿಕೃತ ಪ್ರದೇಶದಲ್ಲಿ (ಪಿಎಂಒಎ) ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಆಟಗಾರ ಮತ್ತು ಪಂದ್ಯದ ಅಧಿಕೃತ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಗೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಐಪಿಎಲ್ ನ ಈ ನಿಯಮಗಳನ್ನು ಉಲ್ಲಂಘಿಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ.

ಆರ್ ಆರ್ ಮೇಲೆ ಶಿಸ್ತುಕ್ರಮದ ತೂಗುಗತ್ತಿ

ಇನ್ನು ಐಪಿಎಲ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಕ್ರೀಡಾಂಗಣದಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪಕ್ಕಾಗಿ ರಾಜಸ್ತಾನ ರಾಯಲ್ಸ್ ತಂಡದ ಮೇಲೆ ಬಿಸಿಸಿಐ ಶಿಸ್ತುಕ್ರಮ ಜರುಗಿಸುವ ಸಾಧ್ಯತೆ ಇದೆ.

ಬಿಸಿಸಿಐ ಮೇಲೆ ಎಲ್ಲರ ಕಣ್ಣು!

ಇದು ಬಿಸಿಸಿಐ ಭ್ರಷ್ಟಾಚಾರ ವಿರೋಧಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಮತ್ತು ಫ್ರಾಂಚೈಸಿಗೆ ಭಾರೀ ದಂಡ ವಿಧಿಸಬಹುದು. ಈ ವಿಡಿಯೋ ಬಗ್ಗೆ ಬಿಸಿಸಿಐ ಇನ್ನೂ ಪ್ರತಿಕ್ರಿಯಿಸಿಲ್ಲ, ಆದರೂ ಬಿಸಿಸಿಐ ಅಧಿಕಾರಿಗಳು ಖಂಡಿತವಾಗಿಯೂ ತನಿಖೆ ನಡೆಸಿ ಮುಂದಿನ ಕ್ರಮವನ್ನು ನಿರ್ಧರಿಸುತ್ತಾರೆ.

ಸಹಾಯಕ ಸಿಬ್ಬಂದಿ ಫೋನ್ ಬಳಸಿದ್ದರಿಂದ, ಬಿಸಿಸಿಐ ಉಲ್ಲಂಘನೆಯನ್ನು ಎಷ್ಟು ತೀವ್ರವೆಂದು ಪರಿಗಣಿಸುತ್ತದೆ ಎಂಬುದರ ಆಧಾರದ ಮೇಲೆ ಅವರಿಗೆ ದಂಡ ವಿಧಿಸಬಹುದು ಅಥವಾ PMOA ಪ್ರವೇಶಿಸುವುದನ್ನು ನಿಷೇಧಿಸಬಹುದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್