When and where to watch CSK vs DC, know all details 
ಕ್ರಿಕೆಟ್

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಭರ್ಜರಿ ಜಯ

ಆರಂಭದಿಂದಲೂ ಬೌಲರ್ ಗಳ ಮೇಲೆ ಹಿಡಿತ ಸಾಧಿಸಿದ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಎಂಎಸ್ ಧೋನಿ ದಾಖಲೆಯನ್ನು ಮುರಿದಿದ್ದಾರೆ.

ಚೆನ್ನೈ: ಚೆನ್ನೈ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆದ ಡೆಲ್ಲಿ-ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ತಂಡ ಡೆಲ್ಲಿ ತಂಡದ ವಿರುದ್ಧ 23 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ಸಂಜು ಸ್ಯಾಮ್ಸನ್ (115 ರನ್) ಹಾಗೂ ಆಯುಷ್ ಮಾತ್ರೆ (59) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಗಳ ಬೃಹತ್ ಮೊತ್ತ ದಾಖಲಿಸಿತು.

ಆರಂಭದಿಂದಲೂ ಬೌಲರ್ ಗಳ ಮೇಲೆ ಹಿಡಿತ ಸಾಧಿಸಿದ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಎಂಎಸ್ ಧೋನಿ ದಾಖಲೆಯನ್ನು ಮುರಿದಿದ್ದಾರೆ.

ಬೃಹತ್ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಪಾತುಮ್ ನಿಸ್ಸಂಕ 41 ರನ್, ಕೆಎಲ್ ರಾಹುಲ್ 18 ರನ್ ಗಳಿಸಿ ಭರವಸೆ ಮೂಡಿಸಿದರಾದರೂ ವೇಗವಾಗಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕ ಕುಸಿತ ಕಂಡಿದ್ದರ ಪರಿಣಾಮ ಡೆಲ್ಲಿ ತಂಡದ ರನ್ ಚೇಸಿಂಗ್ ನಿಧಾನವಾಯಿತು. ಬಳಿಕ ಟ್ರಿಸ್ಟಾನ್ ಸ್ಟಬ್ಸ್ 38 ಎಸೆತಗಳಲ್ಲಿ 60 ರನ್ ಗಳಿಸಿ ತಂಡಕ್ಕೆ ನೆರವಾದರಾದರೂ ಏಕಾಂಗಿ ಹೋರಾಟ ಫಲಿಸಲಿಲ್ಲ. ಉಳಿದ ಬ್ಯಾಟ್ಸ್ ಮನ್ ಗಳು ಒಂದು ಅಂಕಿ ಸ್ಕೋರ್ ಗಳಿಸಿ ಪೆವಿಲಿಯನ್ ಗೆ ನಡೆದರು.

ಬ್ಯಾಟಿಂಗ್ ವೈಫಲ್ಯದ ಪರಿಣಾಮ ಡೆಲ್ಲಿ ತಂಡ ನಿಗದಿತ 20 ಓವರ್ ಗಳಲ್ಲಿ 189 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಸಿಎಸ್ ಕೆ ಪರ ಅನ್ಶುಲ್ ಕಾಂಬೋಜ್ 35 ರನ್ ನೀಡಿ 3 ವಿಕೆಟ್ ಗಳಿಸಿದರೆ, ಜೇಮೀ ಓವರ್ಟನ್ 18 ರನ್ ನೀಡಿ 4 ವಿಕೆಟ್ ಗಳಿಸಿ ಅತ್ಯುತ್ತಮ ಬೌಲರ್ ಗಳೆನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!