ಕಾರಿನಲ್ಲಿ ಚಹಲ್ ಧೂಮಪಾನ 
ಕ್ರಿಕೆಟ್

ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಪ್ರಸ್ತುತ ಹಾಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಚಹಲ್ ಇದರ ನಡುವೆಯೇ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ನವದೆಹಲಿ: ಇತ್ತೀಚೆಗೆ ತನ್ನ ವಿವಾಹ ವಿಚ್ಚೇದನ ವಿಚಾರವಾಗಿ ಭಾರಿ ಸುದ್ದಿಗೆ ಗ್ರಾಸಾವಾಗಿದ್ದ ಭಾರತ ಕ್ರಿಕೆಟ್ ತಂಡದ ಆಟಗಾರ ಯಜುವೇಂದ್ರ ಚಹಲ್ ಇದೀಗ ಬೇಡದ ಕಾರಣಕ್ಕಾಗಿ ಮತ್ತೆ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದಾರೆ.

ಪ್ರಸ್ತುತ ಹಾಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಚಹಲ್ ಇದರ ನಡುವೆಯೇ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದು ವಿಡಿಯೋ ಹರಿದಾಡುತ್ತಿದೆ.

ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರನ್ನು ಹೋಲುವ ವ್ಯಕ್ತಿಯೊಬ್ಬರು ಧೂಮಪಾನ ಮಾಡಿ, ಸಿಗರೇಟ್ ತುಂಡನ್ನು ರಸ್ತೆಗೆ ಎಸೆದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಭಾರೀ ಟೀಕೆ ಮಾಡುತ್ತಿದ್ದಾರೆ.

ವೈರಲ್ ವಿಡಿಯೋ, ನೈಜತೆ ಏನು?

ಟೀಮ್ ಇಂಡಿಯಾದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಚಾಲನೆ ಮಾಡುವಾಗ ಸಿಗರೇಟ್ ಸೇದುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ಚಾಹಲ್ ಅವರನ್ನು ಹೋಲುವ ವ್ಯಕ್ತಿಯೊಬ್ಬರು ಕಾರಿನಲ್ಲಿ ಧೂಮಪಾನ ಮಾಡುತ್ತಾ ಸಿಗರೇಟ್ ತುಂಡುಗಳನ್ನು ರಸ್ತೆಗೆ ಎಸೆಯುವುದನ್ನು ಸ್ಪಷ್ಟವಾಗಿ ಕಾಣಬಹುದು.

ಆದಾಗ್ಯೂ, ಈ ವಿಡಿಯೋ ನಿಜವೋ ಅಥವಾ ಮಾರ್ಫ್ ಮಾಡಲಾದದ್ದೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶುಕ್ರವಾರ ರಾತ್ರಿಯಿಂದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದು ವಿಡಿಯೋ ಹರಿದಾಡುತ್ತಿದೆ. ಆದರೆ ವೈರಲ್ ಆಗುತ್ತಿರುವ ವಿಡಿಯೋ ಬಗ್ಗೆ ಈ ವರೆಗೂ ಚಹಲ್ ಸ್ಪಷ್ಟನೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್