ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಆರ್ ಸಿಬಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ, 38 ಎಸೆತಗಳನ್ನು ಎದುರಿಸಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 50 ರನ್ ಗಳಿಸಿದರು.

ಮುಂಬೈ: ಐಪಿಎಲ್ ಟೂರ್ನಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ RCB ಪರ ಭರ್ಜರಿ ಬ್ಯಾಟಿಂಗ್ ಮಾಡಿದ ರನ್ ಮೆಷಿನ್ ವಿರಾಟ್ ಕೊಹ್ಲಿ ಪಾಕಿಸ್ತಾನದ ಬಾಬರ್ ಆಜಂ ಮತ್ತು ವೆಸ್ಟ್ ಇಂಡೀಸ್ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಯ್ಲ್ ಅವರ ದಾಖಲೆ ಮುರಿದಿದ್ದಾರೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ, 38 ಎಸೆತಗಳನ್ನು ಎದುರಿಸಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 50 ರನ್ ಗಳಿಸಿದರು. ಅರ್ಧಶತಕದ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು.

ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಧ್ವಂಸ

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫಿಲ್ ಸಾಲ್ಟ್ ಜೊತೆಗೂಡಿ 120 ರನ್ ಗಳ ದಾಖಲೆಯ ಜೊತೆಯಾಟವಾಡಿದ್ದು ತಂಡಕ್ಕೆ ಭರ್ಜರಿ ಆರಂಭ ಒದಗಿಸಿತು.

ಅಂತೆಯೇ ಕೊಹ್ಲಿ ಈ ಜೊತೆಯಾಟದ ಮೂಲಕ ದಾಖಲೆ ನಿರ್ಮಿಸಿದ್ದು, ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಕೊಹ್ಲಿ ಈ ವರೆಗೂ ಬರೊಬ್ಬರಿ 47 ಬಾರಿ ಶತಕದ ಜೊತೆಯಾಟವಾಡಿದ್ದು, ಆ ಮೂಲಕ ಕೊಹ್ಲಿತಲಾ 46 ಬಾರಿ ಈ ಸಾಧನೆ ಮಾಡಿದ್ದ ಕ್ರಿಸ್ ಗೇಯ್ಲ್ ಮತ್ತು ಪಾಕಿಸ್ತಾನದ ಬಾಬರ್ ಆಜಂ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಐಪಿಎಲ್ ನಲ್ಲಿ ಗರಿಷ್ಟ ರನ್

ಅಂತೆಯೇ ಇಂದಿನ ಅರ್ಧಶತಕದೊಂದಿಗೆ ಕೊಹ್ಲಿ ಐಪಿಎಲ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಮುಂದುವರೆಸಿದ್ದು, ಕೊಹ್ಲಿ ಈ ವರೆಗೂ ಐಪಿಎಲ್ ನಲ್ಲಿ 8840 ರನ್ ಗಳನ್ನು ಪೇರಿಸಿದ್ದಾರೆ. ಅದೂ ಕೂಡ ಒಂದೇ ತಂಡದ ಪರವಾಗಿ ಎನ್ನುವುದು ವಿಶೇಷ. ರೋಹಿತ್ ಶರ್ಮಾ ಮುಂಬೈ ಪರ 6002 ರನ್ ಕಲೆಹಾಕಿ 2ನೇ ಸ್ಥಾನದಲ್ಲಿದ್ದಾರೆ.

Most runs for a team in IPL

  • 8840 - Virat Kohli (RCB)

  • 6002* - Rohit Sharma (MI)**

  • 4865 - MS Dhoni (CSK)

  • 4687 - Suresh Raina (CSK)

  • 4491 - AB de Villiers (RCB)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!