ಬಾಬರ್ ಅಜಮ್ 
ಕ್ರಿಕೆಟ್

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್: ಕೊಹ್ಲಿ ದಾಖಲೆ ಉಡೀಸ್; ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3!

31 ವರ್ಷದ ಬಾಬರ್ ಅಜಮ್ ಅವರು ಡೇವಿಡ್ ವಾರ್ನರ್(ಆಸ್ಟ್ರೇಲಿಯಾ), ವಿರಾಟ್ ಕೊಹ್ಲಿ(ಭಾರತ) ಅವರ ನಂತರ ಮೂರನೇ ಸ್ಥಾನದಲ್ಲಿದ್ದು, ಜೋಸ್ ಬಟ್ಲರ್ (ಇಂಗ್ಲೆಂಡ್) ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇಸ್ಲಾಮಾಬಾದ್: ಪ್ರಸ್ತುತ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಟಿ20 ಲೀಗ್‌ನಲ್ಲಿ ಆಡುತ್ತಿರುವ ಪಾಕ್ ಕ್ರಿಕೆಟ್ ತಂಡದ ಮಾಜಿ ನಾಯಕ ಬಾಬರ್ ಆಜಮ್ ಅವರು ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಪಾಕಿಸ್ತಾನ ಸೂಪರ್ ಲೀಗ್ ಪಂದ್ಯದಲ್ಲಿ ಬಾಬರ್ ಅಜಮ್ ನೇತೃತ್ವದ ಪೇಶಾವರ್ ಝಲ್ಮಿ ತಂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಇದುವರೆಗಿನ ಏಳು ಪಂದ್ಯಗಳಲ್ಲಿ ಆರರಲ್ಲಿ ಜಯಗಳಿಸಿ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಅಲ್ಲದೆ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಪೇಶಾವರ್ ಝಲ್ಮಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಬಾಬರ್ ಅಜಮ್, ಕ್ವೆಟ್ಟಾ ಗ್ಲಾಡಿಯೇಟರ್ಸ್ ವಿರುದ್ಧದ ಪಂದ್ಯದಲ್ಲಿ 51 ಎಸೆತಗಳಲ್ಲಿ 71 ರನ್​ ಗಳಿಸಿದರು. ಇದರೊಂದಿಗೆ ಬಾಬರ್ ಆಜಮ್ ಟಿ20ಯಲ್ಲಿ ಅತ್ಯಂತ ವೇಗದ 100 ನೇ ಅರ್ಧಶತಕ ದಾಖಲಿಸಿದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಪಾಕಿಸ್ತಾನಿ ಆಟಗಾರ ಎಂಬ ದಾಖಲೆ ಬರೆದರು. ಅಲ್ಲದೆ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದರು.

ಬಾಬರ್ ಅವರು ಒಟ್ಟು 354 ಟಿ20 ಪಂದ್ಯಗಳ 341 ಇನ್ನಿಂಗ್ಸ್‌ಗಳಲ್ಲಿ 100 ಅರ್ಧಶತಕಗಳನ್ನು ಗಳಿಸಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಪಾಕಿಸ್ತಾನದ ನಂಬರ್ 1, ಏಷ್ಯಾದ ನಂಬರ್ 2 ಮತ್ತು ವಿಶ್ವದ ನಂಬರ್ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

31 ವರ್ಷದ ಬಾಬರ್ ಅಜಮ್ ಅವರು ಡೇವಿಡ್ ವಾರ್ನರ್(ಆಸ್ಟ್ರೇಲಿಯಾ), ವಿರಾಟ್ ಕೊಹ್ಲಿ(ಭಾರತ) ಅವರ ನಂತರ ಮೂರನೇ ಸ್ಥಾನದಲ್ಲಿದ್ದು, ಜೋಸ್ ಬಟ್ಲರ್ (ಇಂಗ್ಲೆಂಡ್) ನಾಲ್ಕನೇ ಸ್ಥಾನದಲ್ಲಿದ್ದಾರೆ.

ಬಾಬರ್ ಅಜಮ್ ಗಿಂತ ಮೊದಲು ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 100 ಅರ್ಧಶತಕಗಳ ಗಡಿ ದಾಟಿದ್ದರು. ವಿರಾಟ್ ಪ್ರಸ್ತುತ 419 ಟಿ20 ಪಂದ್ಯಗಳಲ್ಲಿ 402 ಇನ್ನಿಂಗ್ಸ್‌ಗಳಲ್ಲಿ 107 ಅರ್ಧಶತಕಗಳನ್ನು ಗಳಿಸಿದ್ದಾರೆ. ಹೀಗಾಗಿ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕ ಬಾರಿಸಿದ ಏಷ್ಯಾದ ಮೊದಲ ಬ್ಯಾಟರ್ ಎಂಬ ದಾಖಲೆ ಕೊಹ್ಲಿ ಪಾಲಾಗಿದ್ದರೆ, ಇದೀಗ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಬಾರಿಸಿದ ಏಷ್ಯಾದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಬಾಬರ್ ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!