ಕಾವ್ಯ ಮಾರನ್ 
ಕ್ರಿಕೆಟ್

IPL 2026: ರೋಚಕ ಪಂದ್ಯದಲ್ಲಿ CSK ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್! ಕಾವ್ಯ ಮಾರನ್ ಸೆಲೆಬ್ರೆಷನ್ ಹೇಗಿತ್ತು ಗೊತ್ತಾ? Video

195 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ CSK ಉತ್ತಮವಾಗಿ ಆಡುತಿತ್ತು. ಆದರೆ ಸನ್ ರೈಸರ್ಸ್ ಬೌಲರ್ ಗಳಾದ ನಿತೀಶ್ ಕುಮಾರ್ ರೆಡ್ಡಿ ಮತ್ತು ಎಶಾನ್ ಮಾಲಿಂಗ ಅತ್ಯುತ್ತಮ ವಿಕೆಟ್‌ಗಳನ್ನು ಪಡೆದು ಸೋಲಿನ ದವಡೆಯಿಂದ ಗೆಲುವನ್ನು ಕಸಿದುಕೊಂಡರು.

ಹೈದರಾಬಾದ್‌: ಶನಿವಾರ ಹೈದರಾಬಾದ್‌ನಲ್ಲಿ ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅದ್ಭುತ ಗೆಲುವು ಸಾಧಿಸಿತು.

195 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ CSK ಉತ್ತಮವಾಗಿ ಆಡುತಿತ್ತು. ಆದರೆ ಸನ್ ರೈಸರ್ಸ್ ಬೌಲರ್ ಗಳಾದ ನಿತೀಶ್ ಕುಮಾರ್ ರೆಡ್ಡಿ ಮತ್ತು ಎಶಾನ್ ಮಾಲಿಂಗ ಅತ್ಯುತ್ತಮ ವಿಕೆಟ್‌ಗಳನ್ನು ಪಡೆದು ಸೋಲಿನ ದವಡೆಯಿಂದ ಗೆಲುವನ್ನು ಕಸಿದುಕೊಂಡರು.

ಸನ್ ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸುತ್ತಿದ್ದಂತೆ ತಂಡದ ಒಡತಿ ಕಾವ್ಯ ಮಾರನ್ ಸಾಕಷ್ಟು ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹರ್ಷೋದ್ಘಾರದೊಂದಿಗೆ ಎದ್ದುನಿಂತು ಚಪ್ಪಾಳೆ ತಟ್ಟುವ ಮೂಲಕ ಆಟಗಾರರನ್ನು ಪ್ರೋತ್ಸಾಹಿಸಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಇಶಾನ್ ಕಿಶನ್ ಯುವ ವೇಗಿಗಳ ಬೆನ್ನುತಟ್ಟಿ ಅವರನ್ನು ಅಭಿನಂದಿಸಿದ್ದಾರೆ.

195 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್‌ಗಳಿಗೆ 184 ರನ್‌ಗಳಿಗೆ ಸೀಮಿತಗೊಳಿಸಲಾಯಿತು.

ವೇಗಿಗಳಾದ ಎಶಾನ್ ಮಾಲಿಂಗ (4 ಓವರ್‌ಗಳಲ್ಲಿ 3/29), ಸಕಿಬ್ ಹುಸೇನ್ (4 ಓವರ್‌ಗಳಲ್ಲಿ 1/32), ನಿತೀಶ್ ರೆಡ್ಡಿ (4 ಓವರ್‌ಗಳಲ್ಲಿ 2/31) ಮತ್ತು ಸ್ಪಿನ್ನರ್ ಶಿವಾಂಗ್ ಕುಮಾರ್ (3 ಓವರ್‌ಗಳಲ್ಲಿ 1/18) ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಸನ್ ರೈಸನ್ ಹೈದರಾಬಾದ್ ತಂಡ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!