ವೈಭವ್ ಸೂರ್ಯವಂಶಿ 
ಕ್ರಿಕೆಟ್

Video: ಸೋಲಿನ ನಂತರ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ; ಓಡಿ ಬಂದ KKR ಆಟಗಾರ!

ನಿನ್ನೆ ಐಕಾನಿಕ್ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಒಂದು ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು.

ಕೋಲ್ಕತ್ತಾ: ಆಧುನಿಕ ಕ್ರಿಕೆಟ್ ಅನ್ನು ಹೆಚ್ಚಾಗಿ ಅಂಕಿ-ಸಂಖ್ಯೆಗಳು ಅಂದರೆ ರನ್ ಮತ್ತು ಅವರು ಪಡೆಯುವ ವಿಕೇಟ್ ಗಳಿಂದ ನಿರ್ಣಯಿಸಲಾಗುತ್ತದೆ. ಆದರೆ ಆಟಗಾರರ ಸ್ಪಷ್ಟವಾದ ಭಾವನೆಗಳು ಆಟದ ಸಾರವನ್ನು ನಿಜವಾಗಿಯೂ ವ್ಯಾಖ್ಯಾನಿಸುತ್ತವೆ. ಮೈದಾನದಲ್ಲಿ ಭಾವನೆಗಳನ್ನು ವ್ಯಕ್ತಪಡಿಸುವುದು ಅವರನ್ನು ಮನುಷ್ಯರನ್ನಾಗಿ ಮಾಡುತ್ತದೆ ಮತ್ತು ಮುಂದಿನ ಹೆಜ್ಜೆ ಇಡಲು ಸಹಾಯ ಮಾಡುತ್ತದೆ.

ನಿನ್ನೆ ಐಕಾನಿಕ್ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಒಂದು ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು.

RRನ ಎರಡನೇ ಸೋಲನ್ನು ತಡೆಯಲು ತನ್ನ ಪ್ರಯತ್ನ ಸಾಕಾಗಲಿಲ್ಲ ಎಂದು ವೈಭವ್ ಸೂರ್ಯವಂಶಿ ಕಣ್ಣೀರಿಟ್ಟ ಘಟನೆ ಭಾನುವಾರ ನಡೆದಿದ್ದು, KKR ಆಟಾಗಾರ ಓಡಿ ಬಂದು ಸಾಂತ್ವನ ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮ ಮೊದಲ ನಾಲ್ಕು ಪಂದ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದ ರಾಜಸ್ಥಾನ್ ರಾಯಲ್ಸ್, ಆ ಬಳಿಕ ಸತತ ಎರಡು ಪಂದ್ಯಗಳಲ್ಲಿ ಸೋಲುಂಡಿದೆ.

ಕೋಲ್ಕತ್ತದ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್​ಆರ್​ ತಂಡ ನಾಲ್ಕು ವಿಕೆಟ್‌ಗಳಿಂದ ಸೋಲು ಅನುಭವಿಸಿದೆ. ಇದು ಈ ಸೀಸನ್​ನಲ್ಲಿ ಕೆಕೆಆರ್ ತಂಡ ಪಡೆದ ಮೊದಲ ಗೆಲುವು ಅನ್ನೋದು ಗಮನಾರ್ಹ. ಈ ಪಂದ್ಯದ ನಂತರ ಟೀಮ್​ ಇಂಡಿಯಾದ ಯುವ ಸೆನ್ಸೇಷನ್​ ವೈಭವ್ ಸೂರ್ಯವಂಶಿ ಕಣ್ಣೀರು ಹಾಕಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ ಆರ್ ಯುವ ಆಟಗಾರ ವೈಭವ್ ಸೂರ್ಯವಂಶಿ ಹಾಗೂ ಯಶ್ವಿ ಜೈಸ್ವಾಲ್ ಮೊದಲ ವಿಕೆಟ್ ಗೆ 81 ರನ್ ಗಳ ಉತ್ತಮ ಆರಂಭ ನೀಡಿದರು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್ ಗಳ ವೈಫಲ್ಯದಿಂದ ಆರ್ ಆರ್ ಕೇವಲ 155 ರನ್ ಗಳಿಸಲಷ್ಟೇ ಶಕ್ತವಾಯಿತು.

ಗೆಲುವಿಗೆ ಆರ್​ಆರ್​ನೀಡಿದ ಸಾಧಾರಣ ಗುರಿಯನ್ನು ಬೆನ್ನತ್ತಿದ ಕೋಲ್ಕತ್ತ ನೈಟ್ ರೈಡರ್ಸ್ ತಂಡ, 19.4 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 156 ರನ್‌ ಗಳಿಸುವ ಮೂಲಕ ಗೆದ್ದು ಬೀಗಿತು.

ಸೋಲಿನಿಂದ ಬೇಸರಗೊಂಡ ಆರ್‌ಆರ್ ತಂಡದ ವೈಭವ್ ಸೂರ್ಯವಂಶಿ ಮೈದಾನದಲ್ಲಿ ಕಣ್ಣೀರಿಟ್ಟರು. ಪಂದ್ಯ ಮುಗಿದ ಬಳಿಕ ಮೈದಾನದ ಒಂದು ಮೂಲೆಯಲ್ಲಿ ಕುಳಿತು ವೈಭೂವ್​ ಅಳುತ್ತಿದ್ದರು. ಇದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ