ಅರ್ಶದೀಪ್ ಸಿಂಗ್, ಪ್ರೀತಿ ಜಿಂಟಾ 
ಕ್ರಿಕೆಟ್

IPL 2026: ಪ್ರೀತಿ ಜಿಂಟಾ 'ಅಪ್ಪುಗೆ'ಯಿಂದ ಕುಣಿದು ಕುಪ್ಪಳಿಸಿದ ಅರ್ಶದೀಪ್ ಸಿಂಗ್! ಹೊಟ್ಟೆ ಉರಿದುಕೊಂಡ ಶಮಿ; Video

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಅವರ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಭಾನುವಾರ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್‌ ಗಳ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿತು.

ಪಂಜಾಬ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದೆ. ಇದುವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು ಬೀರಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಅವರ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಭಾನುವಾರ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್‌ ಗಳ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿತು.

ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿತು. ಇದು ಈ ಬಾರಿ ತಂಡದ ಅತ್ಯಧಿಕ ಸ್ಕೋರ್ ಆಗಿದೆ. ಈ ಗುರಿ ಬೆನ್ನಟ್ಟಿದ್ದ ಲಕ್ನೋ ಸೂಪರ್ ಜೈಂಟ್ಸ್ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಗೆಲುವಿನ ನಗೆ ಬೀರಿತು.

ಪಂದ್ಯದ ನಂತರ, ಫ್ರಾಂಚೈಸಿ ಸಹ-ಮಾಲೀಕರಾದ ಪ್ರೀತಿ ಜಿಂಟಾ, ವೇಗಿ ಅರ್ಶ್‌ದೀಪ್ ಸಿಂಗ್ ಅವರನ್ನು ಅಪ್ಪಿಕೊಳ್ಳುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದರಿಂದ ತುಂಬಾ ಖುಷಿಗೊಂಡ ಅರ್ಶದೀಪ್ ಸಿಂಗ್ ಕುಣಿದು ಕುಪ್ಪಳಿಸಿದ್ದಾರೆ.

ಅರ್ಶ್ ದೀಪ್ ಸಿಂಗ್ ಪಕ್ಕದಲ್ಲೇ ನಿಂತು ಇದೆಲ್ಲಾವನ್ನು ನೋಡುತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ, ಹೊಟ್ಟೆ ಉರಿದುಕೊಂಡಂತೆ ನಕ್ಕಿದ್ದಾರೆ. ಬಾಲಿವುಡ್‌ನ ಪ್ರಸಿದ್ಧ ನಟಿಯೂ ಆಗಿರುವ ಪ್ರೀತಿ ಜಿಂಟಾ ನಮ್ರತೆ ಮತ್ತು ಟೂರ್ನಿಯುದ್ದಕ್ಕೂ ಪಂಜಾಬ್ ಕಿಂಗ್ಸ್ ಆಟಗಾರರಿಗೆ ನೀಡುವ ಬೆಂಬಲದಿಂದಾಗಿ ಆಗಾಗ್ಗೆ ಪ್ರಶಂಸಿಸಲ್ಪಡುತ್ತಾರೆ.

ಪ್ರೀತಿ ಜಿಂಟಾ ಹಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!