ವೈಭವ್ ಸೂರ್ಯವಂಶಿ 
ಕ್ರಿಕೆಟ್

IPL 2026: ವೈಭವ್ ಸೂರ್ಯವಂಶಿ ಸಿಕ್ಸರ್​ಗಳ ಸುರಿಮಳೆ; ವೇಗದ ಶತಕ ಸಿಡಿಸಿ ದಾಖಲೆ ಬರೆದ 15ರ ಪೋರ!

15 ವರ್ಷ ವಯಸ್ಸಿನಲ್ಲೇ ಕ್ರಿಕೆಟ್ ರಂಗದಲ್ಲಿ ಸಂಚಲನ ಸೃಷ್ಟಿಸುತ್ತಿರುವ ವೈಭವ್ ಸೂರ್ಯವಂಶಿ 2026ರ ಐಪಿಎಲ್ ಸೀಸನ್ ನಲ್ಲಿ ತಮ್ಮ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ್ದಾರೆ.

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 36ನೇ ಪಂದ್ಯದಲ್ಲಿ ಶನಿವಾರ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ.

15 ವರ್ಷ ವಯಸ್ಸಿನಲ್ಲೇ ಕ್ರಿಕೆಟ್ ರಂಗದಲ್ಲಿ ಸಂಚಲನ ಸೃಷ್ಟಿಸುತ್ತಿರುವ ವೈಭವ್ ಸೂರ್ಯವಂಶಿ 2026ರ ಐಪಿಎಲ್ ಸೀಸನ್ ನಲ್ಲಿ ತಮ್ಮ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ್ದಾರೆ.

ಇಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಪರ ವೈಭವ್ ಸೂರ್ಯವಂಶಿ ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ ಸುರಿಸಿದರು. ಸನ್‌ರೈಸರ್ಸ್ ವೇಗಿ ಪ್ರಫುಲ್ ಹಿಂಗೆ ವಿರುದ್ಧ ಸತತ 4 ಸಿಕ್ಸರ್​ಗಳನ್ನು ಬಾರಿಸಿ ತನ್ನ ಹಳೆಯ ಸೇಡನ್ನು ತೀರಿಸಿಕೊಂಡರು.

ಈ ಹಿಂದೆ ಎಸ್ಆರ್ ಎಚ್ ವಿರುದ್ಧದ ಮೊದಲ ಪಂದ್ಯದಲ್ಲಿ ಪ್ರಫುಲ್ ಹಿಂಗೆ ಅವರ ಮೊದಲ ಬಾಲ್ಗೆ ಔಟ್ ಆಗಿದ್ದ ವೈಭವ್ ಸೂರ್ಯವಂಶಿ ಇಂದು ಅದೇ ಬೌಲರ್ಗೆ ಓವರ್ ಗೆ ನಾಲ್ಕು ಸಿಕ್ಸರ್ ಬಾರಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಹಿಂದಿನ ಪಂದ್ಯದಲ್ಲಿ ವೈಭವ್ ಅವರನ್ನು ಔಟ್ ಮಾಡುವ ಮೂಲಕ ಸುದ್ದಿ ಮಾಡಿದ್ದ ಪ್ರಫುಲ್ ಹಿಂಗೆ, ಈ ಬಾರಿ ಯುವ ಬ್ಯಾಟ್ಸ್‌ಮನ್ ವಿರುದ್ಧ ಸಾಕಷ್ಟು ದುಬಾರಿಯಾಗಿ ಪರಿಣಮಿಸಿದರು. ವೈಭವ್ ಸೂರ್ಯವಂಶಿ ಕೇವಲ ಐದು ಎಸೆತಗಳಲ್ಲಿ 24 ರನ್ ಚಚ್ಚಿದರು. 37 ಎಸೆತಗಳಲ್ಲಿ 5 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್ ಸಹಿತ 103 ರನ್ ಗಳಿಸುವ ಮೂಲಕ ಐಪಿಎಲ್ ನಲ್ಲಿ ಎರಡನೇ ಅತ್ಯಂತ ವೇಗದ ಶತಕ ದಾಖಲಿಸಿದರು.

ಐಪಿಎಲ್ ಇತಿಹಾಸದಲ್ಲಿ ಒಬ್ಬ ಬ್ಯಾಟ್ಸ್‌ಮನ್ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದ್ದು ಇದೇ ಮೊದಲು. ವೈಭವ್ ಸೂರ್ಯವಂಶಿಗಿಂತ ಮೊದಲು ಯಾವುದೇ ಬ್ಯಾಟ್ಸ್‌ಮನ್ ಈ ಸಾಧನೆ ಮಾಡಿರಲಿಲ್ಲ. ಇದಕ್ಕೂ ಮೊದಲು, 2009 ರಲ್ಲಿ, ನಮನ್ ಓಜಾ ಕೆಕೆಆರ್ ವಿರುದ್ಧದ ಮೊದಲ ಓವರ್‌ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕೋಲಾಹಲ: TMC ಬಂಡಾಯ ಗುಂಪು ಕಾಕೋಲಿ ಘೋಷ್ ನೇತೃತ್ವದಲ್ಲಿ NCP ಜೊತೆ ವಿಲೀನ!

ಜ್ವಾಲಾಮುಖಿ ಕುಳಿಗೆ ಬಿದ್ದ 'ಯೆಮೆನ್‌ನ ಸ್ಪೈಡರ್-ಮ್ಯಾನ್': ದುರಂತ ಕ್ಯಾಮೆರಾದಲ್ಲಿ ಸೆರೆ! Video

Women's T20 World Cup 2026: 'ಹನುಮಾನ್‌ ಜಿ ಮಹಾನ್'.. ಪಾಕ್ ವಿರುದ್ಧ ಗೆಲುವಿನ ಬಳಿಕ ವಾಯುಪುತ್ರನ ನೆನೆದ Deepti Sharma

Women's T20 World Cup 2026: ಪ್ರೇಕ್ಷಕರ ಸಂಖ್ಯೆಯಲ್ಲೂ ಐತಿಹಾಸಿಕ ದಾಖಲೆ ಬರೆದ India vs Pakistan ಪಂದ್ಯ!

ಉಡುಪಿ: ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಮುಖೇಶ್ ಅಂಬಾನಿ ಪುತ್ರ ಅನಂತ್ ಭೇಟಿ

SCROLL FOR NEXT