ಸುಯಾಶ್ ಶರ್ಮಾ 
ಕ್ರಿಕೆಟ್

IPL 2026: ಶುಭ್ ಮನ್ ಗಿಲ್ ಗೆ ಸಖತ್ತಾಗಿ ಟಾಂಟ್ ಕೊಟ್ಟ ಸ್ಪಿನ್ನರ್ ಸುಯಾಶ್ ಶರ್ಮಾ! ನೆಟ್ಟಿಗರು ಫಿದಾ!

ಶುಭ್ ಮನ್ ಗಿಲ್ ವಿಕೆಟ್ ಕಿತ್ತ ನಂತರ ಸುಯಾಶ್ ಶರ್ಮಾ ವಿಶಿಷ್ಟ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿದರು.

ಬೆಂಗಳೂರು: ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 2026 ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ಪಿನ್ನರ್ ಸುಯಾಶ್ ಶರ್ಮಾ ಗುಜರಾತ್ ಟೈಟಾನ್ಸ್ ನಾಯಕ ಶುಭ್ ಮನ್ ಗಿಲ್ ಅವರನ್ನು ಔಟ್ ಮಾಡಿದರು. ವಿಕೆಟ್ ಪಡೆದ ನಂತರ ಲೆಗ್ ಸ್ಪಿನ್ನರ್ ಮಾಡಿದ ಸಂಭ್ರಮ ಎಲ್ಲರ ಗಮನ ಸೆಳೆಯಿತು.

ಗುಜರಾತ್ ಬ್ಯಾಟಿಂಗ್ ಮಾಡುವಾಗ 13 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಸುಯಾಶ್ ಶಾರ್ಟ್ ಗೂಗ್ಲಿ ಎಸೆದರು ಮತ್ತು ಗಿಲ್ ಅದನ್ನು ಲಾಂಗ್-ಆನ್‌ನಲ್ಲಿ ವಿಕೆಟ್ ಕೀಪರ್ ದೇವದತ್ ಪಡಿಕ್ಕಲ್ ಅವರ ಕೈಗೆ ಕೊಟ್ಟರು.

ಹೀಗಾಗಿ 24 ಎಸೆತಗಳಲ್ಲಿ 32 ರನ್ ಗಳಿಸಿದ ಶುಭ್ ಮನ್ ಗಿಲ್ ಔಟ್ ಆದರು. ಇದನ್ನು ಸುಯಾಶ್ 'ಬಾಗಿ ಸಂಭ್ರಮಿಸಿದ್ದಾರೆ. ಇದು ಗಿಲ್ ಶತಕ ಬಾರಿಸಿದಾಗ ಮಾಡುವ ಟ್ರೇಡ್‌ಮಾರ್ಕ್ ಆಗಿದೆ.

ನೆಟ್ಟಿಗರು ಸುಶಾಯ್ ಶರ್ಮಾ ಅವರ ಸಂಭ್ರಮಾಚರಣೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಬೇಕಿತ್ತು. ಆದರೆ ಅದನ್ನು ಮಾಡದ ಗುಜರಾತ್ ಟೈಟಾನ್ಸ್ ತಂಡವನ್ನು ಮನಬಂದಂತೆ ದಂಡಿಸಿದರು. ಆರ್ ಸಿಬಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸುವಂತೆ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video