ಫಿಲ್ ಸಾಲ್ಟ್ 
ಕ್ರಿಕೆಟ್

IPL 2026: RCBಗೆ ದೊಡ್ಡ ಆಘಾತ; ಡೆಲ್ಲಿ ವಿರುದ್ಧದ ಪಂದ್ಯಕ್ಕೂ ಫಿಲ್ ಸಾಲ್ಟ್​ ಅಲಭ್ಯ

ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಇನ್ನೂ ಗಾಯದಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಆಯ್ಕೆಗೆ ಲಭ್ಯವಿಲ್ಲ ಎಂದು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಅವರು ದೃಢಪಡಿಸಿದ್ದಾರೆ.

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡಕ್ಕೆ ಗಾಯದ ಆಘಾತ ಎದುರಾಗಿದ್ದು, ಸ್ಟಾರ್ ಓಪನರ್ ಫಿಲ್ ಸಾಲ್ಟ್ ಅವರು ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ.

ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಇನ್ನೂ ಗಾಯದಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಆಯ್ಕೆಗೆ ಲಭ್ಯವಿಲ್ಲ ಎಂದು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಅವರು ದೃಢಪಡಿಸಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮುಂದಿನ ಐಪಿಎಲ್ ಪಂದ್ಯಕ್ಕೆ ಫಿಲ್ ಸಾಲ್ಟ್ ಇಲ್ಲದೆ ಆಡಲಿದೆ.

ಫಿಲ್ ಸಾಲ್ಟ್ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಆಡಲಿರಲಿಲ್ಲ. ಆದರೆ ಅವರು ಡೆಲ್ಲಿ ವಿರುದ್ಧದ ಪಂದ್ಯದ ವೇಳೆಗೆ ಚೇತರಿಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೀಗ ಅದು ಸುಳ್ಳಾಗಿದೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಫಿಲ್ ಸಾಲ್ಟ್ ಆಡುವುದಿಲ್ಲ.

ಯಾರಿಗೆ ಅವಕಾಶ?

ಫಿಲ್ ಸಾಲ್ಟ್ ಅಲಭ್ಯತೆ ಆರ್‌ಸಿಬಿಗೆ ದೊಡ್ಡ ಹಿನ್ನಡೆಯಾಗಿದ್ದರೂ, ವಿರಾಟ್ ಕೊಹ್ಲಿ ತಂಡದಲ್ಲಿರುವುದು ತಂಡವನ್ನು ಕೊಂಚ ನಿರಾಳವಾಗಿಸಿದೆ. ಕಳೆದ ಪಂದ್ಯದಂತೆ ಈ ಪಂದ್ಯದಲ್ಲೂ ಜಾಕೋಬ್ ಬೆಥೆಲ್ ಅವರು ವಿರಾಟ್ ಕೊಹ್ಲಿ ಜೊತೆ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್