ರಿಯಾನ್ ಪರಾಗ್ 
ಕ್ರಿಕೆಟ್

IPL 2026: ಡ್ರೆಸಿಂಗ್ ರೂಮ್‌ನಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ರಿಯಾನ್ ಪರಾಗ್​​ಗೆ ದಂಡ ಫಿಕ್ಸ್!

ಪಂದ್ಯಕ್ಕೆ "ಅಪಖ್ಯಾತಿ" ತಂದ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಅವರಿಗೆ ಪಂದ್ಯದ ಸಂಭಾವನೆಯ ಶೇಕಡಾ 25 ರಷ್ಟು ದಂಡ ವಿಧಿಸಲಾಗುವುದು ಎಂದು ಐಪಿಎಲ್ ಮೂಲಗಳು ತಿಳಿಸಿವೆ.

ಕಳೆದ ಮಂಗಳವಾರ ಮುಲ್ಲನ್‌ಪುರದಲ್ಲಿ ನಡೆದ ಪಂಜಾಬ್ ಕಿಂಗ್ಸ್(ಪಿಬಿಕೆಎಸ್) ವಿರುದ್ಧದ ಪಂದ್ಯದ ವೇಳೆ ರಾಜಸ್ಥಾನ ರಾಯಲ್ಸ್(ಆರ್‌ಆರ್) ತಂಡದ ನಾಯಕ ರಿಯಾನ್ ಪರಾಗ್ ಅವರು ಡ್ರೆಸ್ಸಿಂಗ್ ರೂಮ್ ಒಳಗೆ ವೇಪಿಂಗ್(ಇ-ಸಿಗರೇಟ್) ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಪಂದ್ಯಕ್ಕೆ "ಅಪಖ್ಯಾತಿ" ತಂದ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಅವರಿಗೆ ಪಂದ್ಯದ ಸಂಭಾವನೆಯ ಶೇಕಡಾ 25 ರಷ್ಟು ದಂಡ ವಿಧಿಸಲಾಗುವುದು ಎಂದು ಐಪಿಎಲ್ ಮೂಲಗಳು ತಿಳಿಸಿವೆ.

ಫೀಲ್ಡ್ ಅಂಪೈರ್‌ಗಳಾದ ತನ್ಮಯ್ ಶ್ರೀವಾಸ್ತವ ಮತ್ತು ನಿತಿನ್ ಮೆನನ್ ಅವರು ಪಂದ್ಯದ ನಂತರ ಮ್ಯಾಚ್ ರೆಫರಿ ಅಮಿತ್ ಶರ್ಮಾ ಅವರಿಗೆ ಈ ವಿಷಯವನ್ನು ವರದಿ ಮಾಡಿರಲಿಲ್ಲ. ಆದರೆ ರಿಯಾನ್ ಇ-ಸಿಗರೇಟ್ ಸೇದುತ್ತಿರುವ ವಿಡಿಯೋ ನೋಡಿದ ನಂತರವೇ ಅವರು ಮ್ಯಾಚ್ ರೆಫರಿ ಗಮನಕ್ಕೆ ತಂದಿದ್ದಾರೆ. ಇದೀಗ ಶರ್ಮಾ ಅವರು ಐಪಿಎಲ್ ಮಾರ್ಗಸೂಚಿಗಳ ಪ್ರಕಾರ ನೀತಿ ಸಂಹಿತೆ ಉಲ್ಲಂಘನೆಗಾಗಿ ಪರಾಗ್ ತಪ್ಪಿತಸ್ಥರೆಂದು ಕಂಡುಬಂದಿದ್ದು, ದಂಡ ವಿಧಿಸಲು ಮುಂದಾಗಿದ್ದಾರೆ.

ಲೆವೆಲ್ 1 ಅಪರಾಧಗಳು ಪಂದ್ಯದ ಸಂಭಾವನೆಯ ಶೇಕಡಾ 25 ರಷ್ಟು ಕಡಿತ ಮತ್ತು ಒಂದು ಡಿಮೆರಿಟ್ ಪಾಯಿಂಟ್ ಅನ್ನು ಹೊಂದಿದೆ.

ಎಲೆಕ್ಟ್ರಾನಿಕ್ ಸಿಗರೇಟ್ ನಿಷೇಧ ಕಾಯ್ದೆ(ಪಿಇಸಿಎ) 2019ರ ಅಡಿಯಲ್ಲಿ ಭಾರತದಲ್ಲಿ ಇ-ಸಿಗರೇಟ್ ಅಥವಾ ವೇಪಿಂಗ್ ಸಾಧನದ ಬಳಕೆಯನ್ನು ನಿಷೇಧಿಸಲಾಗಿದೆ. ಪಂದ್ಯದ ಸ್ವಲ್ಪ ಸಮಯದ ನಂತರ ಆರ್‌ಆರ್‌ನ ರಿಯಾನ್ ಪರಾಗ್ ವೇಪ್/ಇ-ಸಿಗರೇಟ್ ಬಳಸುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಆಟಗಾರ ಮತ್ತು ತಂಡದ ನಿರ್ವಹಣೆ ಕುರಿತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಲ್ಲನ್‌ಪುರದಲ್ಲಿ ನಡೆದ ಪಿಬಿಕೆಎಸ್ ವಿರುದ್ಧದ ಪಂದ್ಯದಲ್ಲಿ ಆರ್‌ಆರ್‌ನ ರನ್-ಚೇಸ್‌ನ 15ನೇ ಓವರ್‌ ವೇಳೆ ಈ ಘಟನೆ ಸಂಭವಿಸಿದೆ. ವೈರಲ್ ಆಗಿರುವ ಘಟನೆಯ ದೃಶ್ಯಗಳಲ್ಲಿ, ಪರಾಗ್ ಡ್ರೆಸ್ಸಿಂಗ್ ಕೋಣೆಯಲ್ಲಿ ಕುಳಿತು ವೇಪ್ ಸಾಧನವನ್ನು ಬಳಸುತ್ತಿರುವುದು ಮತ್ತು ಅವರ ತಂಡದ ಸದಸ್ಯರು ಕೂಡ ಅವರು ಸುತ್ತಲೂ ಕುಳಿತಿರುವುದನ್ನು ಕಾಣಬಹುದಾಗಿದೆ.

ಭಾರತದಲ್ಲಿ ಇ-ಸಿಗರೇಟ್‌ಗಳ ಉತ್ಪಾದನೆ, ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ, ಮೊದಲ ಬಾರಿಗೆ ಅಪರಾಧ ಎಸಗಿದರೆ ಆ ಅಪರಾಧಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಮತ್ತು/ಅಥವಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!