ವಿನಯ್ ಕುಮಾರ್ 
ಕ್ರಿಕೆಟ್

ಕರ್ನಾಟಕ ಪುರುಷರ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ವಿನಯ್ ಕುಮಾರ್ ನೇಮಕ

ವಿನಯ್ ಕುಮಾರ್ 2010ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. 31 ಏಕದಿನ, 9 ಟಿ20 ಹಾಗೂ 1 ಟೆಸ್ಟ್ ಪಂದ್ಯವನ್ನಾಡಿದ್ದಾರೆ.

ಬೆಂಗಳೂರು: ಕರ್ನಾಟಕ ಪುರುಷರ ಕ್ರಿಕೆಟ್​ ತಂಡದ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾ ಮಾಜಿ ವೇಗಿ, ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿಯ ಆರ್ ವಿನಯ್ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೇಮಕ ಮಾಡಿದೆ.

2026-27ರ ದೇಶೀಯ ಕ್ರಿಕೆಟ್ ಋತುವಿಗಾಗಿ ರಾಜ್ಯದ ಪುರುಷರ ಮತ್ತು ಮಹಿಳೆಯರ ವಿವಿಧ ವಯೋಮಾನದ ತಂಡಗಳಿಗೆ ಕ್ರಿಕೆಟ್ ಸಲಹಾ ಸಮಿತಿಯ (CAC) ಶಿಫಾರಸಿನ ಮೇರೆಗೆ KSCA ನೂತನ ಕೋಚ್ ಗಳನ್ನು ನೇಮಕ ಮಾಡಿದೆ. ಇನ್ನು ಕರ್ನಾಟಕದ ಮಾಜಿ ಬ್ಯಾಟ್ಸ್‌ಮನ್ ದೀಪಕ್ ಚೌಗುಲೆ ಅವರನ್ನು ಫೀಲ್ಡಿಂಗ್ ಕೋಚ್ ಆಗಿ ನೇಮಿಸಲಾಗಿದೆ.

ವಿನಯ್ ಕುಮಾರ್ 2010ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. 31 ಏಕದಿನ, 9 ಟಿ20 ಹಾಗೂ 1 ಟೆಸ್ಟ್ ಪಂದ್ಯವನ್ನಾಡಿದ್ದಾರೆ. 2004ರಿಂದ 2019ರವರೆಗೂ ಕರ್ನಾಟಕ ತಂಡ ಪ್ರತಿನಿಧಿಸಿದ್ದ ವಿನಯ್ ಕುಮಾರ್ ನಾಯಕತ್ವದಲ್ಲಿ ಸತತ 2 ರಣಜಿ ಟ್ರೋಫಿ ಹಾಗೂ ವಿಜಯ್ ಹಜಾರೆ ಟ್ರೋಫಿಯನ್ನು ಕರ್ನಾಟಕ ಗೆದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ': ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!

‘ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು’: 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ

ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ವೇಳೆ 'One8' ಬ್ರ್ಯಾಂಡ್‌ ಶೂ ತೋರಿಸಿದ ಅಭಿಮಾನಿ! ಕೊಹ್ಲಿ ರಿಯಾಕ್ಷನ್ ಹೇಗಿತ್ತು ಗೊತ್ತಾ? Video

'ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು: SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'