ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶಕ್ಕೆ ಜಯ 
ಕ್ರಿಕೆಟ್

1st Test: ಆಸಿಸ್ ನೆಲದಲ್ಲೇ ಕಾಂಗರೂಗಳ ಬಗ್ಗು ಬಡಿದು ಇತಿಹಾಸ ಬರೆದ ಬಾಂಗ್ಲಾದೇಶ

ಡಾರ್ವಿನ್‌ನಲ್ಲಿ ಭಾನುವಾರ ಮುಕ್ತಾಯವಾಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ದೊಡ್ಡ ಅಚ್ಚರಿಯ ಫಲಿತಾಂಶ...

ಡಾರ್ವಿನ್: ಜಾಗತಿಕ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ತಂಡ ಭಾನುವಾರ ಇತಿಹಾಸ ಸೃಷ್ಟಿ ಮಾಡಿದ್ದು ಆಸಿಸ್ ನೆಲದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಮೂಲಕ ದಾಖಲೆ ನಿರ್ಮಿಸಿದೆ.

ಹೌದು.. ಡಾರ್ವಿನ್‌ನಲ್ಲಿ ಭಾನುವಾರ ಮುಕ್ತಾಯವಾಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ದೊಡ್ಡ ಅಚ್ಚರಿಯ ಫಲಿತಾಂಶಗಳಲ್ಲಿ ಒಂದನ್ನು ದಾಖಲಿಸಿದೆ.

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಎಲೈಟ್ ತಂಡಗಳ ಪಟ್ಟಿಗೆ ಇದೀಗ ಬಾಂಗ್ಲಾದೇಶ ಸೇರ್ಪಡೆಯಾಗಿದೆ. ಭಾರತ ಮತ್ತು ಪಾಕಿಸ್ತಾನದ ಬಳಿಕ ಅಲ್ಲದೆ ಈ ಸಾಧನೆ ಮಾಡಿದ ಮೂರನೇ ಏಷ್ಯಾ ತಂಡ ಎಂಬ ಹೆಗ್ಗಳಿಕೆಗೂ ಬಾಂಗ್ಲಾದೇಶ ಪಾತ್ರವಾಗಿದೆ.

ಕುತೂಹಲ ಕೆರಳಿಸಿದ್ದ ಪಂದ್ಯ

ಗೆಲುವಿಗೆ ಬಾಂಗ್ಲಾದೇಶಕ್ಕೆ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಕೇವಲ 57 ರನ್‌ಗಳ ಅಗತ್ಯವಿತ್ತು. ನಾಲ್ಕನೇ ದಿನದ ಎರಡನೇ ಸೆಷನ್‌ನಲ್ಲೇ ಪ್ರವಾಸಿ ತಂಡ ಸುಲಭವಾಗಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿತು. ಮೊಮಿನುಲ್ ಹಕ್ 30 ರನ್‌ಗಳೊಂದಿಗೆ ಅಜೇಯರಾಗಿ ಉಳಿದರೆ, ಶಾದ್ಮಾನ್ ಇಸ್ಲಾಂ 25 ರನ್‌ಗಳೊಂದಿಗೆ ಅಜೇಯರಾಗಿ ಪಂದ್ಯ ಮುಗಿಸಿದರು.

ಪಂದ್ಯಕ್ಕೆ ಭಾರೀ ಫೇವರಿಟ್ ಆಗಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾ, ಬಾಂಗ್ಲಾದೇಶದ ಬೌಲರ್‌ಗಳು ಇಡೀ ದಿನ ನಿರಂತರ ಒತ್ತಡ ಹೇರಿದ ಪರಿಣಾಮ ಎರಡನೇ ಇನ್ನಿಂಗ್ಸ್‌ನಲ್ಲಿ 284 ರನ್‌ಗಳಿಗೆ ಆಲೌಟ್ ಆಯಿತು. ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮೆಹಿದಿ ಹಸನ್ ಮಿರಾಜ್ ಆಸ್ಟ್ರೇಲಿಯಾದ ಕುಸಿತದ ಪ್ರಮುಖ ಶಿಲ್ಪಿಯಾಗಿದ್ದರು.

ಆಫ್ ಸ್ಪಿನ್ನರ್ ಮೆಹಿದಿ ಹಸನ್ ಮಿರಾಜ್ ಐದು ವಿಕೆಟ್‌ಗಳನ್ನು ಕಬಳಿಸಿದರು. ಇದರೊಂದಿಗೆ ಅವರ ಟೆಸ್ಟ್ ವೃತ್ತಿಜೀವನದಲ್ಲಿ ಐದು ವಿಕೆಟ್‌ಗಳ ಗೊಂಚಲುಗಳ ಸಂಖ್ಯೆ 15ಕ್ಕೆ ಏರಿದೆ. ಇದಕ್ಕೂ ಮುನ್ನ ಬ್ಯಾಟಿಂಗ್‌ನಲ್ಲೂ ಅವರು ಮಹತ್ವದ ಕೊಡುಗೆ ನೀಡಿದ್ದು, 65 ರನ್ ಗಳಿಸಿ ಬಾಂಗ್ಲಾದೇಶದ ಪರ ನಿರ್ಣಾಯಕ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

Flydubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್, 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!