ಕಪೀಲ್ ದೇವ್, ಪಾಕ್ ತಂಡದ ಸಾಂದರ್ಭಿಕ ಚಿತ್ರ 
ಕ್ರಿಕೆಟ್

T20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಆಡಲು ನಕಾರ: ಪಾಕಿಸ್ತಾನಕ್ಕೆ ಕಪಿಲ್ ದೇವ್ ವಾರ್ನಿಂಗ್ ಏನು?

ಮಂಡಳಿ ಮಟ್ಟದ ಬಲವಂತದ ನಿರ್ಧಾರಗಳು ಆಟಗಾರರ ಮೇಲೆ ಧೀರ್ಘಾವಧಿಯ ಪರಿಣಾಮ ಉಂಟುಮಾಡಲಿದೆ ಎಂದು ಕಪಿಲ್ ದೇವ್ ಕಳವಳ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಮುಂಬರುವ ಟಿ-20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧದ ಗುಂಪು ಹಂತದ ಪಂದ್ಯವನ್ನು ಬಹಿಷ್ಕರಿಸುವ ಪಾಕಿಸ್ತಾನಕ್ಕೆ ನಿರ್ಧಾರದ ಬಗ್ಗೆ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಬಲವಾದ ಎಚ್ಚರಿಕೆ ನೀಡಿದ್ದಾರೆ.

ಫೆಬ್ರವರಿ 15 ರಂದು ಭಾರತ ವಿರುದ್ಧದ ಪಂದ್ಯ ಆಡದಿದ್ದರೆ ಪಾಕಿಸ್ತಾನ ಕ್ರಿಕೆಟಿಗೆ ಭಾರಿ ಹೊಡೆತ ಬೀಳಲಿದೆ. ದೇಶದ ವರ್ಚಸ್ಸು ಕುಸಿಯುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ವಿಶ್ವ ಕಪ್ ನಲ್ಲಿ ಆಡಲು ಹಾತೊರೆಯುತ್ತಿರುವ ಪಾಕಿಸ್ತಾನದ ಯುವ ಆಟಗಾರರ ಭವಿಷ್ಯದ ಮೇಲೂ ತೀವ್ರ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ಮಂಡಳಿ ಮಟ್ಟದ ಬಲವಂತದ ನಿರ್ಧಾರಗಳು ಆಟಗಾರರ ಮೇಲೆ ಧೀರ್ಘಾವಧಿಯ ಪರಿಣಾಮ ಉಂಟುಮಾಡಲಿದೆ ಎಂದು ಕಪಿಲ್ ದೇವ್ ಕಳವಳ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಆಟಗಾರರು ಅಂತಹ ನಿರ್ಧಾರ ತೆಗೆದುಕೊಂಡರೆ, ಅವರು ಹೊರಗೆ ಬಂದು ಹಾಗೆ ಹೇಳಬಹುದು. ಆದರೆ ಆಟಗಾರರು ಆಡುವುದಿಲ್ಲ ಎಂದು ಮಂಡಳಿಯು ನಿರ್ಧರಿಸಿದಾಗ, ದೇಶದ ಖ್ಯಾತಿ ಕುಸಿಯುತ್ತದೆ. ಇದು ಪಾಕಿಸ್ತಾನಕ್ಕೆ ಸರಿಯಲ್ಲ. ಪಾಕಿಸ್ತಾನ ಅನೇಕ ಅದ್ಬುತ ಪ್ರತಿಭೆಗಳನ್ನು ಕ್ರಿಕೆಟಿಗೆ ನೀಡಿದೆ. ಆದರೆ ಅಂತಹ ಆಟಗಾರರನ್ನು ವಿಶ್ವಕಪ್ ಆಡಲು ಅನುಮತಿಸದಿದ್ದರೆ, ಆಟಕ್ಕೆ ಹಾಗೂ ಸ್ವಂತ ಆಟಗಾರರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲಿರುವ ಪಾಕಿಸ್ತಾನ, ಕೊಲಂಬೊದಲ್ಲಿ ಭಾರತದ ವಿರುದ್ಧ ಪಂದ್ಯವನ್ನಾಡುವುದಿಲ್ಲ ಎಂದು ಭಾನುವಾರ ಘೋಷಿಸಿದೆ. ಭದ್ರತಾ ಕಾರಣಗಳನ್ನುಉಲ್ಲೇಖಿಸಿ ಭಾರತದಿಂದ ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸಲು ಬಾಂಗ್ಲಾದೇಶದ ಮನವಿಯನ್ನು ICC ತಿರಸ್ಕರಿಸಿದ ನಂತರ ಪಾಕಿಸ್ತಾನ ಈ ನಿರ್ಧಾರವನ್ನು ತೆಗೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT