ಹರಾರೆ: ಇಂಗ್ಲೆಂಡ್ ವಿರುದ್ಧದ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಪರ ಉದಯೋನ್ಮುಖ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಜಿಂಬಾಬ್ವೆಯ ಹರಾರೆಯಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅಂಡರ್ 19 ತಂಡ ವೈಭವ್ ಸೂರ್ಯವಂಶಿ ಅವರ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದರು.
ಆರಂಭಿಕರಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧ 80 ಎಸೆತಗಳಲ್ಲಿ 175 ರನ್ ಸಿಡಿಸಿ ದಾಖಲೆ ಬರೆದರು.
55 ಎಸೆತಗಳಲ್ಲಿ ವೇಗದ ಶತಕ ಸಿಡಿಸಿದ ಅವರು ಅತಿ ಹೆಚ್ಚು ಸಿಕ್ಸರ್‌ಗಳು, ಟೂರ್ನಿಯ ಗರಿಷ್ಠ ರನ್ ಸೇರಿದಂತೆ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದರು. ವೈಭವ್ ಅವರ ಅಬ್ಬರದ ಇನ್ನಿಂಗ್ಸ್ ಅಂಡರ್-19 ಕ್ರಿಕೆಟ್ ಇತಿಹಾಸದಲ್ಲಿ ಒಂದು ಸ್ಮರಣೀಯ ಪುಟ ಸೇರಿದರು.
ಈ ಇನ್ನಿಂಗ್ಸ್‌ನಲ್ಲಿ, ಅವರು 15 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಬಾರಿಸಿದರು, 218.75 ರ ಸ್ಟೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ವೈಭವ್ ಅಂಡರ್-19 ವಿಶ್ವಕಪ್‌ನ ಫೈನಲ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ಬರೆದರು.
ದಾಖಲೆಗಳ ಪಟ್ಟಿ
ವೇಗದ ಶತಕ
55 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ ಈ ಮೂಲಕ ವೈಭವ್ ಅಂಡರ್-19 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಈ ಶತಕದ ಇನ್ನಿಂಗ್ಸ್ ಮೂಲಕ ವೈಭವ್ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಈ ವಿಶ್ವಕಪ್ನಲ್ಲಿ 7 ಪಂದ್ಯಗಳನ್ನಾಡಿದ ವೈಭವ್ 62.71 ಸರಾಸರಿಯಲ್ಲಿ 439 ರನ್ ಬಾರಿಸಿದರು. ಇದರಲ್ಲಿ 1 ಶತಕ ಮತ್ತು 3 ಅರ್ಧಶತಕಳು ಸೇರಿವೆ. ಈ 7 ಇನ್ನಿಂಗ್ಸ್‌ಗಳಲ್ಲಿ, ವೈಭವ್ 41 ಬೌಂಡರಿಗಳು ಮತ್ತು 30 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದು ಕೂಡ ದಾಖಲೆಯಾಗಿದೆ.
ಫೈನಲ್ ನಲ್ಲಿ ಶತಕ ಸಿಡಿಸಿದ ಕಿರಿಯ ಆಟಗಾರ
ಫೈನಲ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ವೈಭವ್ ಸೂರ್ಯವಂಶಿ ಅಂಡರ್ -19 ವಿಶ್ವಕಪ್ ಫೈನಲ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ಅಂಡರ್-19 ವಿಶ್ವಕಪ್‌ನ ಫೈನಲ್‌ನಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ವಿಶ್ವ ದಾಖಲೆಯೂ ವೈಭವ್ ಪಾಲಾಗಿದೆ.
ಇದರ ಜೊತೆಗೆ ಇಂಗ್ಲೆಂಡ್ ವಿರುದ್ಧ 19 ವರ್ಷದೊಳಗಿನವರ ಏಕದಿನ ಪಂದ್ಯಗಳಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರ ವೈಭವ್. ಇಂಗ್ಲೆಂಡ್ ವಿರುದ್ಧ ಸರಾಗವಾಗಿ ರನ್ ಕಲೆಹಾಕಿರುವ ವೈಭವ್ ಇದೇ ಇಂಗ್ಲೆಂಡ್ ವಿರುದ್ಧ ತಮ್ಮ ವೇಗದ ಶತಕವನ್ನೂ ಸಿಡಿಸಿದ್ದಾರೆ.
ಅತೀ ಹೆಚ್ಚು ಸಿಕ್ಸರ್
ವೈಭವ್ ಸೂರ್ಯವಂಶಿ ಅಂಡರ್ 19 ವಿಶ್ವಕಪ್ ಫೈನಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ 19 ವರ್ಷದೊಳಗಿನವರ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯೂ ವೈಭವ್ ಪಾಲಾಗಿದೆ. ಇದರೊಂದಿಗೆ ವೈಭವ್ ಅಂಡರ್-19 ಏಕದಿನ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
ಗರಿಷ್ಟ ಸ್ಕೋರ್
2023 ರಲ್ಲಿ ಸೌತಾಂಪ್ಟನ್‌ನಲ್ಲಿ ಭಾರತ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟ್ರಾವಿಸ್ ಹೆಡ್ 174 ಎಸೆತಗಳಲ್ಲಿ 163 ರನ್ ಗಳಿಸಿದ್ದು ಹಿಂದಿನ ಅತ್ಯುತ್ತಮ ಮೊತ್ತವಾಗಿತ್ತು. ಟೂರ್ನಿಯಲ್ಲಿ ಸೂರ್ಯವಂಶಿ ಒಟ್ಟು 439 ರನ್ ಹೊಡೆದಿದ್ದಾರೆ. ಇಂಗ್ಲೆಂಡ್ ಬೆನ್ ಮೇಸ್ 399 ರನ್ ಹೊಡೆದಿದ್ದರೆ ಶ್ರೀಲಂಕಾದ ವಿರನ್ ಚಮುದಿತ 310 ರನ್ ಬಾರಿಸಿದ್ದಾರೆ.
ಭಾರತದ ಪರ ವೇಗದ ಶತಕ ಹೊಡೆದ ದಾಖಲೆಯನ್ನು ಸೂರ್ಯವಂಶಿ ನಿರ್ಮಿಸಿದ್ದಾರೆ. ಸೂರ್ಯವಂಶಿ 55 ಎಸೆತಗಳಲ್ಲಿ ಶತಕ ಹೊಡೆದರೆ ರಾಜ್ ಅಂಗಡ ಬಾವ 2022 ರಲ್ಲಿ ಉಗಾಂಡ ವಿರುದ್ಧ 69 ಎಸೆತಗಳಲ್ಲಿ ಶತಕ ಹೊಡೆದಿದ್ದರು. ಆರಂಭಿಕ ಆಟಗಾರನಾಗಿ ಕಣಕ್ಕೆ ಇಳಿದ ಸೂರ್ಯವಂಶಿ ತಂಡದ ಮೊತ್ತ 251 ರನ್ ಆಗಿದ್ದಾಗ 175 ರನ್ (80 ಎಸೆತ, 15 ಬೌಂಡರಿ, 15 ಸಿಕ್ಸ್) ಸಿಡಿಸಿ ಔಟಾದರು.