ಟಾಸ್ ಗೆದ್ದ ಯುಎಸ್ಎ ಬೌಲಿಂಗ್ ಆಯ್ಕೆ 
ಕ್ರಿಕೆಟ್

T20 ವಿಶ್ವಕಪ್ 2026: ಟಾಸ್ ಗೆದ್ದ USA ಬೌಲಿಂಗ್ ಆಯ್ಕೆ, ಭಾರತಕ್ಕೆ ಡಬಲ್ ಆಘಾತ!

ಟಾಸ್ ಗೆದ್ದ ಯುಎಸ್ಎ ನಾಯಕ ಗುಜರಾತ್‌ ಮೂಲದ ಮೋನಾಂಕ್ ಪಟೇಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಮುಂಬೈ: ಬಹು ನಿರೀಕ್ಷಿತ ಐಸಿಸಿ ಟಿ20 ನವಿಶ್ವಕಪ್ 2026 ಟೂರ್ನಿಯಲ್ಲಿ ಭಾರತ ತನ್ನ ಪಯಣ ಆರಂಭಿಸಿದ್ದು ಅಮೆರಿಕ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದೆ.

ಮುಂಬೈನ ವಾಂಖೆಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್ಎ ನಾಯಕ ಗುಜರಾತ್‌ ಮೂಲದ ಮೋನಾಂಕ್ ಪಟೇಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿದೆ.

ಮೊದಲ ಎಸೆತದಲ್ಲೇ ಭಾರತ ತಂಡದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಡಕೌಟ್ ಆಗಿದ್ದಾರೆ. ಅಲಿಖಾನ್ ಬೌಲಿಂಗ್ ನಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿದ ಅಭಿಷೇಕ್ ಶರ್ಮಾ, ಯುಎಸ್ಎ ಫೀಲ್ಡರ್ ಸಂಜಯ್ ಕೃಷ್ಣಮೂರ್ತಿಗೆ ಕ್ಯಾಚ್ ನೀಡಿ ಔಟಾದರು.

ಬಳಿಕ ಇಶಾನ್ ಕಿಶನ್ ಜೊತೆಗೂಡಿದ ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್ ಮಾಡುತ್ತಿದ್ದು 5.2 ಓವರ್ ಗೆ 2 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿದೆ. ತಿಲಕ್ ವರ್ಮಾ 25 ರನ್ ಗಳಿಸಿದ್ದರೆ, ಇಶಾನ್ ಕಿಶನ್ 20 ರನ್ ಗಳಿಸಿ ಅಮೆರಿಕದ ವ್ಯಾನ್ ಶಾಲ್ಕ್‌ವಿಕ್ ಬೌಲಿಂಗ್ ನಲ್ಲಿ ಔಟಾದರು. ಔಟಾಗಿದ್ದಾರೆ.

ಆ ಮೂಲಕ ಭಾರತ ಪವರ್ ಪ್ಲೇ ಮುಕ್ತಾಯಕ್ಕೂ ಮುನ್ನವೇ ಡಬಲ್ ಆಘಾತ ಎದುರಿಸಿದೆ.

ಭಾರತ ತಂಡದಲ್ಲಿ 3 ಬದಲಾವಣೆ

ಟಾಸ್ ವೇಳೆ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಇಂದಿನ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್ ಹಾಗೂ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ ಎಂದರು.

ಬುಮ್ರಾ ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಹರ್ಷಿತ್ ರಾಣಾ ಬದಲಿಗೆ ಬಂದಿರುವ ಮೊಹಮ್ಮದ್ ಸಿರಾಜ್ ಪ್ಲೇಯಿಂಗ್​ 11 ನಲ್ಲಿ ಸ್ಥಾನ ಪಡೆದಿದ್ದಾರೆ.

ತಂಡಗಳು ಇಂತಿದೆ

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್.

ಯುಎಸ್​ಎ ತಂಡ: ಸೈತೇಜ ಮುಕ್ಕಮಲ್ಲ, ಆಂಡ್ರೀಸ್ ಗಾಸ್ (ವಿಕೆಟ್ ಕೀಪರ್), ಮೊನಾಂಕ್ ಪಟೇಲ್ (ನಾಯಕ), ಮಿಲಿಂದ್ ಕುಮಾರ್, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ಶುಭಂ ರಂಜನೆ, ಮೊಹಮ್ಮದ್ ಮೊಹ್ಸಿನ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ