ಗೃಹ ಸಚಿವರನ್ನು ಭೇಟಿಯಾದ ವೆಂಕಟೇಶ್‌ ಪ್ರಸಾದ್‌, RCB 
ಕ್ರಿಕೆಟ್

ಗೃಹ ಸಚಿವರನ್ನು ಭೇಟಿಯಾದ ವೆಂಕಟೇಶ್‌ ಪ್ರಸಾದ್‌, RCB; ಶೀಘ್ರದಲ್ಲೇ ಗುಡ್‌ ನ್ಯೂಸ್‌?

ಗೃಹ ಸಚಿವ ಜಿ ಪರಮೇಶ್ವರ ಭೇಟಿ ಬಳಿಕ ಮಾತನಾಡಿದ ವೆಂಕಟೇಶ್ ಪ್ರಸಾದ್, ಫೆಬ್ರವರಿ 12 ರಂದು ರಾಜ್ಯ ಸರ್ಕಾರ ನೇಮಿಸಿದ ಸಮಿತಿಯೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡುವ ಬಗ್ಗೆ ಚರ್ಚಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಪ್ರತಿನಿಧಿಗಳು ಸೋಮವಾರ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಭೇಟಿ ಮಾಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ಪಡೆಯುವ ಸಂಬಂಧ ಇಂದು ಕೆಎಸ್‌ಸಿಎ ಹಾಗೂ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳನ್ನು ನಡೆಸುವ ಕುರಿತು ಚರ್ಚೆ ನಡೆಯಿತು.

ಗೃಹ ಸಚಿವ ಜಿ ಪರಮೇಶ್ವರ ಭೇಟಿ ಬಳಿಕ ಮಾತನಾಡಿದ ವೆಂಕಟೇಶ್ ಪ್ರಸಾದ್, ಫೆಬ್ರವರಿ 12 ರಂದು ರಾಜ್ಯ ಸರ್ಕಾರ ನೇಮಿಸಿದ ಸಮಿತಿಯೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.

ನಾವು ನಮ್ಮ ನಿರ್ಧಾರವನ್ನು ಬಿಸಿಸಿಐಗೆ ತಿಳಿಸಬೇಕಿದೆ. ಹೀಗಾಗಿ ನಮ್ಮ ತಂಡ ಗೃಹ ಸಚಿವರನ್ನು ಭೇಟಿಯಾಯಿತು. ಫೆ.12 ರಂದು ಸಭೆಯನ್ನು ನಡೆಸಿ ಆದಷ್ಟು ಶೀಘ್ರದಲ್ಲಿ ಒಂದು ನಿರ್ಧಾರಕ್ಕೆ ಬರುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಕೆಎಸ್‌ಸಿಎ ಅಧ್ಯಕ್ಷರು ತಿಳಿಸಿದರು.

ನಾವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಮಾತು ಕೊಟ್ಟಿದ್ದೇವೆ. ನಿಮ್ಮ ಸಲಹೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ ಎಂದು ಈಗಾಗಲೇ ತಿಳಿಸಿದ್ದೇವೆ. ಈ ನಿಟ್ಟಿನಲ್ಲಿ ಕಾರ್ಯಗಳ ನಡೆದಿವೆ. ಇನ್ನು ಎರಡು ಮೂರು ದಿನಗಳಲ್ಲಿ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದು ವೆಂಕಟೇಶ್‌ ಪ್ರಸಾದ್ ತಿಳಿಸಿದ್ದಾರೆ.

ಐಪಿಎಲ್ ಪಂದ್ಯಗಳಿಗೆ ಕೆಎಸ್‌ಸಿಎ ಮತ್ತು ಆರ್‌ಸಿಬಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಹೇಳಿದ್ದಾರೆ. ಆದರೆ ಬಿಬಿಎಂಪಿ, ಪೊಲೀಸ್ ಮತ್ತು ಕಾನೂನು ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಬುಧವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಎಲ್ಲಾ ಸಾಧಕ-ಬಾಧಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದ ಬಲಿಷ್ಠ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ವಿಮಾನದಿಂದ ಧುಮುಕಿದ ಪೈಲಟ್‌ ಗಾಗಿ ಶೋಧ; ಬಹುಮಾನ ಘೋಷಣೆ

ಚುನಾವಣೆಗೂ ಮುನ್ನವೇ TVK ವಿಜಯ್‌ಗೆ ಸಂಕಷ್ಟ? ಎರಡು ಕಡೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತ ಸಾಧ್ಯತೆ!

ಗಗನಯಾನಿಗಳು ಅಂತರಿಕ್ಷದಲ್ಲಿ S*x ಮಾಡಬಹುದಾ? ಭಾರಿ ಚರ್ಚೆಗೆ ಕಾರಣವಾಯ್ತು PornHub ಕಟೆಂಟ್!

Iran-Israel war: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ 'ಕಚ್ಚಾ ತೈಲ, LNG ಸರಬರಾಜು ಹೆಚ್ಚಿಸಲು ಸಿದ್ಧ': ರಷ್ಯಾ

ಕೊಡಗು: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಕೇರಳ ಮೂಲದ ಮಹಿಳೆ ನಾಪತ್ತೆ!

SCROLL FOR NEXT