ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಮತ್ತಿತರರು 
ಕ್ರಿಕೆಟ್

T20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸದಿರಲು ICC ಮುಂದೆ ಪಾಕಿಸ್ತಾನ ಮೂರು ಬೇಡಿಕೆ?

ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಪಂದ್ಯವನ್ನು ಆಡಲು ಕೆಲವು ಪಿಸಿಬಿ ಅಧಿಕಾರಿಗಳು ಮುಕ್ತವಾಗಿದ್ದರೆ, ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಈ ವಿಷಯದಲ್ಲಿ ಅಸಹಕಾರ ಹೊಂದಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.

ನವದೆಹಲಿ: ಇದೇ 15 ರಂದು ನಿಗದಿಯಾಗಿರುವ ಭಾರತ ವಿರುದ್ಧದ ಟಿ-20 ವಿಶ್ವಕಪ್ ಗುಂಪು ಹಂತದ ಪಂದ್ಯವನ್ನು ಬಹಿಷ್ಕರಿಸದಿರಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಲಾಹೋರ್‌ನಲ್ಲಿ ನಡೆದ ಐಸಿಸಿ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಬಾಂಗ್ಲಾದೇಶಕ್ಕೆ ಪರಿಹಾರವನ್ನು ಹೆಚ್ಚಿಸಬೇಕು. ಟಿ-20 ವಿಶ್ವಕಪ್ ನಿಂದ ಹೊರಹಾಕಿದರೂ ಭಾಗವಹಿಸುವ ಶುಲ್ಕವನ್ನು ಹೆಚ್ಚಿಸಬೇಕು. ಭವಿಷ್ಯದ ಐಸಿಸಿ ಟೂರ್ನಿಗಳ ಅತಿಥ್ಯದ ಹಕ್ಕುಗಳನ್ನು ನೀಡಬೇಕು ಎಂಬ ಬೇಡಿಕೆಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇಟ್ಟಿರುವುದಾಗಿ ತಿಳಿದುಬಂದಿದೆ.

ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಪಂದ್ಯವನ್ನು ಆಡಲು ಕೆಲವು ಪಿಸಿಬಿ ಅಧಿಕಾರಿಗಳು ಮುಕ್ತವಾಗಿದ್ದರೆ, ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಈ ವಿಷಯದಲ್ಲಿ ಅಸಹಕಾರ ಹೊಂದಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.

ನಖ್ವಿ ಇಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭೇಟಿಯಾಗಲಿದ್ದು, ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಒಂದು ವೇಳೆ ಪಾಕಿಸ್ತಾನ, ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡರೆ ಭಾರಿ ದಂಡ, ಪಾಯಿಂಟ್ ಕಡಿತ, ಸಂಭಾವ್ಯ ಸದಸ್ಯತ್ಯ ಅಮಾನತು, ಮುಂಬರುವ ಅಂತಾರಾಷ್ಟ್ರೀಯ ಟೂರ್ನಿಗಳ ಅತಿಥ್ಯದ ಹಕ್ಕು ಕಡಿತ ಸೇರಿದಂತೆ ಅನೇಕ ನಿರ್ಬಂಧಗಳನ್ನು ಎದುರಿಸಬೇಕಾದ ಎಚ್ಚರಿಕೆಯನ್ನು ಐಸಿಸಿ ಈಗಾಗಲೇ ಪತ್ರದ ಮೂಲಕ ನೀಡಿದೆ ಎನ್ನಲಾಗಿದೆ.

ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಈಗಾಗಲೇ T20 ವಿಶ್ವಕಪ್ ಅಭಿಯಾನವನ್ನು ಆರಂಭಿಸಿವೆ. ಕೊಲಂಬೊದಲ್ಲಿ ನಡೆದ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನ ಮೂರು ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಭೀತಿಯಿಂದ ಹೊರಬಂದಿತು. ಮತ್ತೊಂದೆಡೆ, ಹಿಂದಿನ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದಿದ್ದ ಅಮೆರಿಕದ ವಿರುದ್ಧ ಭಾರತ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

IPL 2026 ಪಂದ್ಯದಲ್ಲೂ ವಿಜಯ್ ಫೀವರ್! ಫಿಫ್ಟಿ ಬಳಿಕ ವೆಂಕಟೇಶ್ ಅಯ್ಯರ್ ಸೆಲೆಬ್ರೇಶನ್ ಹೇಗಿತ್ತು ಗೊತ್ತಾ? Video

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

SCROLL FOR NEXT