ಕೆನಡಾ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ 
ಕ್ರಿಕೆಟ್

T20 ವಿಶ್ವಕಪ್ 2026: ಕೆನಡಾ ವಿರುದ್ಧ ದಕ್ಷಿಣ ಆಫ್ರಿಕಾಗೆ 57 ರನ್ ಜಯ

ಅಹ್ಮದಾಬಾದ್ ನಲ್ಲಿ ಇಂದು ನಡೆದ ಪಂದ್ಯದಲ್ಲಿ ಕೆನಡಾ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಪೇರಿಸಿ ಬಳಿಕ ಕೆನಡಾ ವಿರುದ್ಧ 57 ರನ್ ಅಂತರದಲ್ಲಿ ಜಯಬೇರಿ ಬಾರಿಸಿತು.

ಅಹ್ಮದಾಬಾದ್: ಐಸಿಸಿ ಟಿ20 ವಿಶ್ವಕಪ್ 2026ರ ಟೂರ್ನಿಯ ಕೆನಡಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 57 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಅಹ್ಮದಾಬಾದ್ ನಲ್ಲಿ ಇಂದು ನಡೆದ ಪಂದ್ಯದಲ್ಲಿ ಕೆನಡಾ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಪೇರಿಸಿ ಬಳಿಕ ಕೆನಡಾ ವಿರುದ್ಧ 57 ರನ್ ಅಂತರದಲ್ಲಿ ಜಯಬೇರಿ ಬಾರಿಸಿತು.

ದಕ್ಷಿಣ ಆಫ್ರಿಕಾ ನೀಡಿದ್ದ 214 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಕೆನಡಾ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಗಳನ್ನಷ್ಟೇ ಪೇರಿಸಲು ಶಕ್ತವಾಯಿತು. ಆ ಮೂಲಕ 57 ರನ್ ಗಳ ಅಂತರದ ಭರ್ಜರಿ ಜಯ ದಾಖಲಿಸಿತು.

ಕೆನಡಾ ಪರ ನವನೀತ್ ಧಲಿವಾಲ್ 64 ರನ್, ಹರ್ಶ್ ಥಾಕರ್ 33 ರನ್ ಗಳಿಸಿದ್ದು ಬಿಟ್ಟರೆ ಉಳಿದಾವ ಆಟಗಾರರಿಂದ ಉತ್ತಮ ಬ್ಯಾಟಿಂಗ್ ಮೂಡಿಬರಲಿಲ್ಲ. ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್ಗಿಡಿ 4 ವಿಕೆಟ್ ಪಡೆದರೆ, ಮಾರ್ಕೋ ಜೇನ್ಸನ್ 2 ಮತ್ತು ಕಾಗಿಸೋ ರಬಾಡ ಮತ್ತು ಕಾರ್ಬಿನ್ ಬಾಷ್ ತಲಾ 1 ವಿಕೆಟ್ ಪಡೆದರು.

ದಕ್ಷಿಣ ಆಫ್ರಿಕಾ ಭರ್ಜರಿ ಬ್ಯಾಟಿಂಗ್

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಭರ್ಜರಿ ಬ್ಯಾಟಿಂಗ್ ಮೂಲಕ 213 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಆಫ್ರಿಕಾ ಪರ ಮಾರ್ಕ್ರಾಮ್ (59)ಅರ್ಧಶತಕ ಸಿಡಿಸಿದರೆ, ಕ್ವಿಂಟನ್ ಡಿಕಾಕ್ 25, ರ್ಯಾನ್ ರಿಕಲ್ಟನ್ 33, ಡೇವಿಡ್ ಮಿಲ್ಲರ್ ಅಜೇಯ 39, ಟ್ರಿಸ್ಟಾನ್ ಸ್ಟಬ್ಸ್ ಅಜೇಯ 34 ರನ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್