ಸಲ್ಮಾನ್ ಅಲಿ ಅಘಾ ಮತ್ತು ಸೂರ್ಯಕುಮಾರ್ ಯಾದವ್ 
ಕ್ರಿಕೆಟ್

T20 World Cup 2026: 'ಭಾರತ ಮಾತ್ರ ಭಾರತವನ್ನು ಸೋಲಿಸಲು ಸಾಧ್ಯ'; IND vs PAK ಪಂದ್ಯಕ್ಕೂ ಮುನ್ನ ಪಾಕ್ ಮಾಜಿ ಕ್ರಿಕೆಟಿಗ ಹೇಳಿಕೆ

ಭಾರತವು ಸೂಪರ್ ಎಂಟಕ್ಕೆ ಅರ್ಹತೆ ಪಡೆಯಲು ಮುಂದಿನ ಎರಡು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆಲುವು ಮಾತ್ರ ಅಗತ್ಯವಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಫೆಬ್ರುವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಟಿ20 ವಿಶ್ವಕಪ್ 2026ರ ಗ್ರೂಪ್ ಎ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಇದುವರೆಗೆ ಆಡಿದ ಹಲವು ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಎರಡು ಗೆಲುವುಗಳನ್ನು ದಾಖಲಿಸಿದ್ದು, ಗ್ರೂಪ್ ಎ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿವೆ.

ಪಾಕಿಸ್ತಾನ ಆರಂಭಿಕ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಜಯ ಸಾಧಿಸುವ ಮೊದಲು ಯುಎಸ್ಎಯನ್ನು 32 ರನ್‌ಗಳಿಂದ ಸೋಲಿಸಿತು. ಮತ್ತೊಂದೆಡೆ, ಭಾರತವು ಯುಎಸ್ಎ ವಿರುದ್ಧ 29 ರನ್‌ಗಳ ಜಯ ಸಾಧಿಸಿತು. ನಂತರ ಸೂರ್ಯಕುಮಾರ್ ಯಾದವ್ ಮತ್ತು ತಂಡವು ನಮೀಬಿಯಾವನ್ನು 93 ರನ್‌ಗಳಿಂದ ಸೋಲಿಸಿತು. ಉತ್ತಮ ನೆಟ್ ರನ್‌ ರೇಟ್‌ನೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.

ಭಾರತ ಮತ್ತು ಪಾಕಿಸ್ತಾನ ಸೆಣಸಾಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪಾಕಿಸ್ತಾನದ ಮಾಜಿ ಆಟಗಾರ ಬಸಿತ್ ಅಲಿ, ಸೂರ್ಯಕುಮಾರ್ ನೇತೃತ್ವದ ತಂಡದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. 'ಭಾರತ ಮಾತ್ರ ಭಾರತವನ್ನು ಸೋಲಿಸಲು ಸಾಧ್ಯ' ಎಂದು ಅವರು ತಮ್ಮ ಯೂಟ್ಯೂಬ್ ಚಾನೆಲ್ 'ಕ್ರಿಕೆಟ್ ಇನ್ಸೈಟ್ ವಿತ್ ಬಸಿತ್ ಅಲಿ' ನಲ್ಲಿನ ವಿಡಿಯೋದಲ್ಲಿ ಹೇಳಿದ್ದಾರೆ. ನಮೀಬಿಯಾ ವಿರುದ್ಧ ತಂಡದ ಭರ್ಜರಿ ಗೆಲುವನ್ನು ಶ್ಲಾಘಿಸಿದ್ದಾರೆ.

ನಮೀಬಿಯಾ ವಿರುದ್ಧ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಇಶಾನ್ ಕಿಶನ್ ಮತ್ತೊಮ್ಮೆ ಭರ್ಜರಿ ಪ್ರದರ್ಶನ ನೀಡಿದರು. ನಂತರ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾದರು. ಗುರುವಾರ ದೆಹಲಿಯಲ್ಲಿ ನಡೆದ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಭಾರತ 93 ರನ್‌ಗಳ ಗೆಲುವು ಸಾಧಿಸಿತು.

ಭಾರತವು ತಮ್ಮ ಅತಿದೊಡ್ಡ T20 ವಿಶ್ವಕಪ್ ಗೆಲುವನ್ನು ದಾಖಲಿಸಿದ್ದರೂ, ಈ ಗೆಲುವು ಸಂಪೂರ್ಣ ಪ್ರಾಬಲ್ಯಕ್ಕಿಂತ ಹೆಚ್ಚಾಗಿ ಪಾಕಿಸ್ತಾನದೊಂದಿಗೆ ಮುಂದಿನ ಬಿರುಗಾಳಿಗೂ ಮುನ್ನ ತಾತ್ಕಾಲಿಕ ಶಾಂತತೆಯಂತೆ ಭಾಸವಾಯಿತು. ಇಶಾನ್ ಕಿಶನ್ (24 ಎಸೆತಗಳಲ್ಲಿ 61) ಮತ್ತು ಹಾರ್ದಿಕ್ ಪಾಂಡ್ಯ (28 ಎಸೆತಗಳಲ್ಲಿ 52) ಅವರ ಸ್ಫೋಟಕ ಇನಿಂಗ್ಸ್ ಹೊರತಾಗಿಯೂ, ನಮೀಬಿಯಾದ ನಾಯಕ ಗೆರ್ಹಾರ್ಡ್ ಎರಾಸ್ಮಸ್ 20 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆಯುವ ಮೂಲಕ ಪ್ರಭಾವ ಬೀರಿದರು.

ಇದಕ್ಕೆ ಉತ್ತರವಾಗಿ, ನಮೀಬಿಯಾದ ಬ್ಯಾಟಿಂಗ್ ಘಟಕವು ಆರಂಭದಲ್ಲೇ ಕುಸಿತ ಕಂಡಿತು. ಇನಿಂಗ್ಸ್ 18.2 ಓವರ್‌ಗಳಲ್ಲಿ 116 ರನ್‌ಗಳಿಗೆ ಕೊನೆಗೊಂಡಿತು. ವರುಣ್ ಚಕ್ರವರ್ತಿ (2 ಓವರ್‌ಗಳಲ್ಲಿ 3/7) ಮತ್ತು ಪಾಂಡ್ಯ (4 ಓವರ್‌ಗಳಲ್ಲಿ 2/21) ತಂಡಕ್ಕೆ ಉತ್ತಮ ಪ್ರದರ್ಶನ ನೀಡಿದರು. ಭಾರತವು ಸೂಪರ್ ಎಂಟಕ್ಕೆ ಅರ್ಹತೆ ಪಡೆಯಲು ಮುಂದಿನ ಎರಡು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆಲುವು ಮಾತ್ರ ಅಗತ್ಯವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT