ಇಶಾನ್ ಕಿಶನ್-ಅಭಿಷೇಕ್ ಶರ್ಮಾ 
ಕ್ರಿಕೆಟ್

T20 World Cup 2026: ಅಭಿಷೇಕ್ ಲತ್ತೆ ಇಶಾನ್ ಕಿಶನ್‌ಗೆ; ಸ್ಟ್ರೈಕ್ ನಲ್ಲಿ ಬ್ಯಾಟಿಂಗ್ ಆರಂಭಿಸಿ ಶೂನ್ಯಕ್ಕೆ ಔಟ್!

ಸ್ಟ್ರೈಕ್ ನಲ್ಲಿ ಅಭಿಷೇಕ್ ಶರ್ಮಾ ಬ್ಯಾಟಿಂಗ್ ಮಾಡುತ್ತಿದ್ದು ಸತತ ಮೂರು ಪಂದ್ಯಗಳಲ್ಲೂ ಡಕೌಟ್ ಆಗಿದ್ದರು. ಹೀಗಾಗಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಬದಲಿಗೆ ಇಶಾನ್ ಕಿಶನ್ ಸ್ಟ್ರೈಕ್ ನಲ್ಲಿ ಬ್ಯಾಟಿಂಗ್ ಮಾಡಿದ್ದರು.

ಟಿ20 ವಿಶ್ವಕಪ್ 2026ರ ಸೂಪರ್ 8 ಹಂತ ಪಂದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 187 ರನ್ ಪೇರಿಸಿದೆ. ಆಫ್ರಿಕಾ ನೀಡಿದ 188 ರನ್ ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. ಈ ಮೊದಲು ಸ್ಟ್ರೈಕ್ ನಲ್ಲಿ ಅಭಿಷೇಕ್ ಶರ್ಮಾ ಬ್ಯಾಟಿಂಗ್ ಮಾಡುತ್ತಿದ್ದು ಸತತ ಮೂರು ಪಂದ್ಯಗಳಲ್ಲೂ ಡಕೌಟ್ ಆಗಿದ್ದರು. ಹೀಗಾಗಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಬದಲಿಗೆ ಇಶಾನ್ ಕಿಶನ್ ಸ್ಟ್ರೈಕ್ ನಲ್ಲಿ ಬ್ಯಾಟಿಂಗ್ ಮಾಡಿದ್ದರು.

ಟೂರ್ನಿಯೂದ್ದಕ್ಕೂ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದ ಕಿಶನ್ ಗೆ ಅಭಿಷೇಕ್ ಲತ್ತೆ ಬಡಿದಂತಿದೆ. ಹೌದು... ಮೊದಲ ಓವರ್ ನ ನಾಲ್ಕನೇ ಎಸೆತದಲ್ಲಿ ರನ್ ಗಳಿಸದೆ ಕಿಶನ್ ಔಟಾಗಿದ್ದಾರೆ. ಸದ್ಯ ಭಾರತ ರನ್ ಗಳಿಸಲು ಪರದಾಡುತ್ತಿದೆ. ಇಶಾನ್ ಕಿಶನ್ ಬೆನ್ನಲ್ಲೇ ತಿಲಕ್ ವರ್ಮಾ 1 ರನ್ ಔಟಾಗಿ ಪೆಲಿವಿಯನ್ ಸೇರಿದರು. ಇನ್ನು ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ್ದ ಅಭಿಷೇಕ್ ಶರ್ಮಾ ಈ ಬಾರಿಯೂ ನಿರಾಸೆ ಮೂಡಿಸಿದರು. 15 ರನ್ ಗಳಿಸಿ ಔಟಾದರು. ಒಟ್ಟಾರೆ ಭಾರತ 8 ಓವರ್ ಮುಕ್ತಾಯಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ