ಕ್ರಿಕೆಟ್

ಆಫ್ರಿಕಾ ವಿರುದ್ಧ ಹೀನಾಯ ಸೋಲು: ಸ್ಯಾಮ್ಸನ್ ಬದಲಿಗೆ ತಿಲಕ್ ವರ್ಮಾ ಕೈಬಿಡಬೇಕಾ ಎಂದು ನಕ್ಕಿದ್ದ ಸೂರ್ಯಗೆ ತೀವ್ರ ಮುಖಭಂಗ!

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಹೀನಾಯ ಸೋಲು ಅನುಭವಿಸುತ್ತಿದ್ದಂತೆ ಪಂದ್ಯ ಆರಂಭಕ್ಕೂ ಮುನ್ನ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಬದಲಾವಣೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಉತ್ತರಿಸುವಾಗ ನೀಡಿದ ಹೇಳಿಕೆ ವೈರಲ್ ಆಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್ 8 ಸುತ್ತಿನ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮಣಿಸಿ ದಕ್ಷಿಣ ಆಫ್ರಿಕಾ ಅಮೋಘ 76 ರನ್ ಗಳಿಂದ ಜಯ ಸಾಧಿಸಿತ್ತು.

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದು ದಕ್ಷಿಣ ಆಫ್ರಿಕಾ 187 ರನ್ ಪೇರಿಸಿತ್ತು. 188 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 111 ರನ್ ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಅನುಭವಿಸಿತ್ತು. ಹೀಗೆ ಭಾರತ ಹೀನಾಯ ಸೋಲು ಅನುಭವಿಸುತ್ತಿದ್ದಂತೆ ಪಂದ್ಯ ಆರಂಭಕ್ಕೂ ಮುನ್ನ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಬದಲಾವಣೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಉತ್ತರಿಸುವಾಗ ನೀಡಿದ ಹೇಳಿಕೆ ವೈರಲ್ ಆಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡುತ್ತೀರಾ ಎಂಬ ಪತ್ರಕರ್ತರೊಬ್ಬರು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನಾಯಕ ಸೂರ್ಯಕುಮಾರ್ ಯಾದವ್ ಸಂಜು ಸ್ಯಾಮ್ಸನ್ ಅವರನ್ನು ಆಡಿಸಲು ಅಭಿಷೇಕ್ ಶರ್ಮರನ್ನು ಕೂರಿಸಬೇಕ? ಅಥವಾ ತಿಲಕ್ ವರ್ಮಾ ಅವರನ್ನು ಕೈಬಿಡಬೇಕಾ? ಎಂದು ನಕ್ಕಿದ್ದರು. ಆದರೆ ಪಂದ್ಯದಲ್ಲಿ ರನ್ ಕಲೆಹಾಕಲು ಇಬ್ಬರು ಪರದಾಡಿದ್ದರು. ತಿಲಕ್ ವರ್ಮಾ ಕೇವಲ 1 ರನ್ ಗಳಿಸಿ ಔಟಾಗದೇ ಅಭಿಷೇಕ್ ಶರ್ಮಾ ಪರದಾಡಿ 15 ರನ್ ಗಳಿಸಿ ಔಟಾದರು. ಇದು ಪತ್ರಿಕಾಗೋಷ್ಠಿಯಲ್ಲಿ ಅತಿಯಾದ ವಿಶ್ವಾಸ ವ್ಯಕ್ತಪಡಿಸಿದ್ದ ಸೂರ್ಯಕುಮಾರ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗಳಿಗೆ ಗುರಿಯಾಗುವಂತೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್