ಕೆಎಲ್ ರಾಹುಲ್ 
ಕ್ರಿಕೆಟ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆ.ಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ತಂಡಕ್ಕೆ ಸದ್ಯ ಮಯಾಂಕ್ ಅಗರ್ವಾಲ್ ಆಸರೆಯಾಗಿದ್ದಾರೆ. ಮಯಾಂಕ್ ಅವರಿಗೆ ಶ್ರೇಯಸ್ ಗೋಪಾಲ್ ಸಾಥ್ ನೀಡಿದ್ದಾರೆ.

ದೇಶೀಯ ಕ್ರಿಕೆಟ್‌ ಅನ್ನು ಅಬ್ಬರದಿಂದ ಆರಂಭಿಸಿದ ಔಕಿಬ್ ನಬಿ, ದುಲೀಪ್ ಟ್ರೋಫಿಯಲ್ಲಿ ಚೊಚ್ಚಲ ಪಂದ್ಯದಲ್ಲಿ ಡಬಲ್ ಹ್ಯಾಟ್ರಿಕ್ ವಿಕೆಟ್ ಪಡೆದು ಹೆಸರಾದರು. ಹೊಸ ಬಾಲ್‌ನೊಂದಿಗೆ ಅದ್ಭುತವಾಗಿ ಬೌಲಿಂಗ್ ಮಾಡುವ ಸಾಮರ್ಥ್ಯ ಮತ್ತು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಸಾಮರ್ಥ್ಯ ಹೊಂದುವ ಮೂಲಕ, ನಬಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಕಾಶ್ಮೀರಿ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಉದಯೋನ್ಮುಖ ಕ್ರಿಕೆಟಿಗನಿಗೆ ₹8.40 ಕೋಟಿ ನೀಡಿ ಖರೀದಿಸಿದೆ.

ಇದೀಗ, ತಮ್ಮ ಚೊಚ್ಚಲ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ಆಡುತ್ತಿರುವ ನಬಿ, ಬೌಲಿಂಗ್‌ನಲ್ಲಿ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರಿಸಿದ್ದಾರೆ. ಅವರು ಜಮ್ಮು ಮತ್ತು ಕಾಶ್ಮೀರದ ಪರವಾಗಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ರಣಜಿ ಟ್ರೋಫಿ ಫೈನಲ್‌ನ ಮೂರನೇ ದಿನದಂದು ಕರ್ನಾಟಕದ ಅತಿದೊಡ್ಡ ವಿಕೆಟ್ ಅನ್ನು ನಬಿ ಪಡೆದರು. ಅವರು ಕೆಎಲ್ ರಾಹುಲ್ ಅವರನ್ನು ಔಟ್ ಮಾಡಿದರು. ಕೆಎಲ್ ರಾಹುಲ್ ಮತ್ತು ನಬಿ ಮಾರ್ಚ್ 26 ರಿಂದ ಪ್ರಾರಂಭವಾಗುವ ಐಪಿಎಲ್ 2026ನೇ ಆವೃತ್ತಿಯಲ್ಲಿ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳಲಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವು ಮೊದಲ ಇನಿಂಗ್ಸ್‌ನಲ್ಲಿ 584 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ನಂತರ, ಕರ್ನಾಟಕ ತಂಡವು ಆರಂಭದಲ್ಲಿಯೇ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಕರುಣ್ ನಾಯರ್ ಮತ್ತು ಸ್ಮರಣ್ ರವಿಚಂದ್ರನ್ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಈ ಪೈಕಿ ಔಕಿಬ್ ನವಿ ಅವರು ಮೂರು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು.

2025/26ರ ರಣಜಿ ಟ್ರೋಫಿಯಲ್ಲಿ ಭಾರತದ ಟೆಸ್ಟ್ ಆರಂಭಿಕ ಆಟಗಾರ ಕೆಎಲ್ ರಾಹುಲ್, ನಬಿ ಅವರ 56ನೇ ವಿಕೆಟ್. ಇಡೀ ರಣಜಿ ಟ್ರೋಫಿ ಆವೃತ್ತಿಯಲ್ಲಿ ಪೇಸ್ ಬೌಲರ್ ಆಗಿ ನಬಿ 13ಕ್ಕಿಂತ ಕಡಿಮೆ ಸರಾಸರಿ ಹೊಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರ ತಮ್ಮ ಚೊಚ್ಚಲ ಕಿರೀಟವನ್ನು ಎತ್ತಿ ಹಿಡಿದರೆ, ನಬಿ ಅದರ ಹಿಂದಿನ ದೊಡ್ಡ ಶಕ್ತಿಯಾಗಬಹುದು.

ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ತಂಡಕ್ಕೆ ಸದ್ಯ ಮಯಾಂಕ್ ಅಗರ್ವಾಲ್ ಆಸರೆಯಾಗಿದ್ದಾರೆ. ಮಯಾಂಕ್ ಅವರಿಗೆ ಶ್ರೇಯಸ್ ಗೋಪಾಲ್ ಸಾಥ್ ನೀಡಿದ್ದಾರೆ. ಸದ್ಯ ಮಯಾಂಕ್ ಶತಕದತ್ತ ಹೊರಟಿದ್ದರೆ, ಗೋಪಾಲ್ ಅರ್ಧಶತಕ ಗಳಿಸುವತ್ತ ಬ್ಯಾಟಿಂಗ್ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ; ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT