ಕ್ರಿಕೆಟ್

ಆಕ್ರೋಶಕ್ಕೆ ಮಣಿದ BCCI: ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್ ಕೈಬಿಟ್ಟ KKR

ನಟ ಶಾರುಖ್ ಖಾನ್ ಒಡೆತನದ KKR ತಂಡಕ್ಕೆ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ನನ್ನು ತಂಡದಿಂದ ಕೈಬಿಡುವಂತೆ BCCI ಸೂಚಿಸಿದ ಬೆನ್ನಲ್ಲೇ ಮುಸ್ತಾಫಿಜುರ್ ರೆಹಮಾನ್ ಗೆ KKR ಗೇಟ್ ಪಾಸ್ ಕೊಟ್ಟಿದೆ.

ನಟ ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ನನ್ನು ತಮ್ಮ ತಂಡದಿಂದ ಕೈಬಿಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ KKR ಫ್ರಾಂಚೈಸಿ ಮುಸ್ತಾಫಿಜುರ್ ರೆಹಮಾನ್ ನನ್ನು ತಂಡದಿಂದ ಕೈಬಿಟ್ಟಿದೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಸಾಲು ಸಾಲು ಹತ್ಯೆಗಳು ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಪ್ರಮುಖ ಚರ್ಚೆಯ ವಿಷಯವಾಯಿತು. ಇದು ಗಡಿಯಾಚೆಗಿನ ಭಾವನೆಗಳನ್ನು ಕೆರಳಿಸಿತು. ಹೀಗಾಗಿ ಬಿಸಿಸಿಐ ಕೆಕೆಆರ್ ತಂಡಕ್ಕೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ತಿಳಿಸಿತ್ತು.

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾತನಾಡಿ, "ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಕೆಕೆಆರ್ ಫ್ರಾಂಚೈಸಿಗೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಮ್ಮ ತಂಡದಿಂದ ಕೈಬಿಡುವಂತೆ ನಿರ್ದೇಶಿಸಿತ್ತು. ಇದಲ್ಲದೆ, ಆತನ ಬದಲಿ ಆಟಗಾರನಿಗಾಗಿ ಕೆಕೆಆರ್ ವಿನಂತಿಸಿದರೆ, ಬಿಸಿಸಿಐ ಆ ಬದಲಿ ಆಟಗಾರನಿಗೆ ಅವಕಾಶ ನೀಡುತ್ತದೆ ಎಂದು ಬಿಸಿಸಿಐ ಹೇಳಿದೆ.

ಮುಸ್ತಾಫಿಜುರ್ ರೆಹಮಾನ್ ಹಲವು ಲೀಗ್‌ಗಳಲ್ಲಿ ಆಡುತ್ತಿದ್ದಾರೆ. ಮುಸ್ತಾಫಿಜುರ್ ರೆಹಮಾನ್ 2016ರಿಂದ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಇಲ್ಲಿಯವರೆಗೆ, ಬಾಂಗ್ಲಾದೇಶದ ಆಟಗಾರ ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ರಾಜಸ್ಥಾನ ರಾಯಲ್ಸ್, ದೆಹಲಿ ಕ್ಯಾಪಿಟಲ್ಸ್ ಮತ್ತು ಸಿಎಸ್‌ಕೆ ಪರ ಆಡಿದ್ದಾರೆ. ಮುಸ್ತಾಫಿಜುರ್ ರೆಹಮಾನ್ 60 ಐಪಿಎಲ್ ಪಂದ್ಯಗಳಲ್ಲಿ 65 ವಿಕೆಟ್‌ಗಳನ್ನು ಪಡೆದಿದ್ದಾರೆ. ಇತ್ತೀಚಿನ ಐಪಿಎಲ್ 2026 ರ ಹರಾಜಿನಲ್ಲಿ ಕೆಕೆಆರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ₹9.20 ಕೋಟಿಗೆ ಖರೀದಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ವೆನೆಜುವೆಲಾದಿಂದ ಮಾರುಕಟ್ಟೆ ಬೆಲೆಗೆ 30 ರಿಂದ 50 ಮಿಲಿಯನ್ ಬ್ಯಾರೆಲ್ ತೈಲ ಪಡೆಯಲಿದೆ: Donald Trump

ಎಷ್ಟು ದಿನ ಕುರ್ಚಿ ಮೇಲೆ ಕೂತಿದ್ದರು ಎನ್ನುವುದಕ್ಕಿಂತ ಆ ಸ್ಥಾನದಲ್ಲಿ ಕುಳಿತು ಮಾಡಿದ ಕೆಲಸಗಳಿಗೆ ಮಹತ್ವ ಹೆಚ್ಚು..!

ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪರಿಷತ್ ಚುನಾವಣೆ: ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ ಇಂಗಿತ, ಕೋರ್ ಕಮಿಟಿಯಲ್ಲಿ ಚರ್ಚೆ

India–US trade row: 'ಎಲ್ಲವೂ ಬದಲಾಗಿದೆ.. ಪ್ರಧಾನಿ ಮೋದಿ ಕೋಪಗೊಂಡಿದ್ದಾರೆ..': ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್! Video

'ವಿಶ್ವವಿದ್ಯಾಲಯ ದ್ವೇಷದ ಪ್ರಯೋಗಾಲಯವಾಗಲು ಸಾಧ್ಯವಿಲ್ಲ': ಮೋದಿ ವಿರೋಧಿ ಘೋಷಣೆ ಕೂಗುವ ವಿದ್ಯಾರ್ಥಿಗಳಿಗೆ JNU ಎಚ್ಚರಿಕೆ!

SCROLL FOR NEXT