ಹಾರ್ದಿಕ್ ಪಾಂಡ್ಯಾ ಸ್ಫೋಟಕ ಬ್ಯಾಟಿಂಗ್ 
ಕ್ರಿಕೆಟ್

Vijay Hazare Trophy: 9 ಸಿಕ್ಸರ್, 2 ಬೌಂಡರಿ: ಚಂಡೀಗಢ ವಿರುದ್ಧ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್!

ಭಾರತ ಕ್ರಿಕೆಟ್ ತಂಡದ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಅಮೋಘ ಲಯವನ್ನು ಮುಂದುವರೆಸಿದ್ದಾರೆ.

ರಾಜ್ ಕೋಟ್: ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿರುವ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಚಂಡೀಗಢ ವಿರುದ್ಧ ರನ್ ಮಳೆಯನೇ ಹರಿಸಿದ್ದಾರೆ.

ಹೌದು.. ಭಾರತ ಕ್ರಿಕೆಟ್ ತಂಡದ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಅಮೋಘ ಲಯವನ್ನು ಮುಂದುವರೆಸಿದ್ದು, ವಿದರ್ಭ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಅವರು, ಇಂದು ಚಂಡೀಗಢ ವಿರುದ್ಧದ ಪಂದ್ಯದಲ್ಲೂ ಸ್ಫೋಟಕ ಬ್ಯಾಟಿಂಗ್ ನಡೆಸಿದರು.

ಇಂದು ರಾಜ್ ಕೋಟ್ ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಚಂಡೀಗಢ ವಿರುದ್ಧದ ಪಂದ್ಯದಲ್ಲಿ ಬರೋಡಾ ಪರ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಕೇವಲ 31 ಎಸೆತಗಳಲ್ಲಿ 9 ಸಿಕ್ಸರ್ ಮತ್ತು 2 ಬೌಂಡರಿಗಳ ನೆರವಿನಿಂದ 75 ರನ್ ಪೇರಿಸಿ ತಂಡದ ಬೃಹತ್ ಮೊತ್ತದಲ್ಲಿ ಮಹತ್ತರ ಪಾತ್ರವಹಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ಆರಂಭಿಕ ಆಘಾತದ ಹೊರತಾಗಿಯೂ ಪ್ರಿಯಾಂಶು ಮೋಲಿಯಾ (113 ರನ್) ಶತಕ, ವಿಷ್ಣು ಸೋಲಂಕಿ (54 ರನ್), ಹಾರ್ದಿಕ್ ಪಾಂಡ್ಯ (75 ರನ್) ಮತ್ತು ಜಿತೇಶ್ ಶರ್ಮಾ (73 ರನ್) ಅರ್ಧಶತಕಗಳ ನೆರವಿನಿಂದ 49.1ಓವರ್ ನಲ್ಲಿ 391 ರನ್ ಗಳಿಸಿ ಆಲೌಟ್ ಆಯಿತು.

ಈ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಚಂಡೀಗಢ 40 ಓವರ್ ನಲ್ಲಿ 242 ರನ್ ಗಳಿಸಿ ಆಲೌಟ್ ಆಗುವ ಮೂಲಕ 149 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಚಂಡೀಗಢ ಪರ ಶಿವಂ ಬಾಂಬ್ರಿ (100) ಶತಕ ಸಿಡಿಸಿದರೆ, ತರಣ್ ಪ್ರೀತ್ ಸಿಂಗ್ 44 ರನ್ ಬರೋಡಾಕ್ಕೆ ಪ್ರತಿರೋಧ ತೋರಿದರು.

ಆದರೆ ಉಳಿದಾವ ಬ್ಯಾಟರ್ ಗಳಿಂದ ಉತ್ತಮ ಇನ್ನಿಂಗ್ಸ್ ಮೂಡಿಬರಲಿಲ್ಲ. ಪರಿಣಾಮ 40 ಓವರ್ ನಲ್ಲಿ 242 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಬರೋಡ ತಂಡ 149 ರನ್‌ಗಳ ಬೃಹತ್ ಗೆಲುವು ದಾಖಲಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT