ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ 
ಕ್ರಿಕೆಟ್

2nd ODI: ನ್ಯೂಜಿಲೆಂಡ್ ಗೆ ಗೆಲ್ಲಲು 285 ರನ್ ಗುರಿ ನೀಡಿದ ಭಾರತ; ಕೆ.ಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್!

ರಾಜ್ ಕೋಟ್ ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ರಾಜ್ ಕೋಟ್: 2ನೇ ಏಕದಿನ ಪಂದ್ಯದಲ್ಲಿ ಭಾರತ ಪ್ರವಾಸಿ ನ್ಯೂಜಿಲೆಂಡ್ ಗೆ ಗೆಲ್ಲಲು 285 ರನ್ ಗಳ ಸವಾಲಿನ ಗುರಿ ನೀಡಿದೆ.

ರಾಜ್ ಕೋಟ್ ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 50 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 284 ರನ್ ಗಳಿಸಿತು. ಆ ಮೂಲಕ ನ್ಯೂಜಿಲೆಂಡ್ ಗೆ ಗೆಲ್ಲಲು 285 ರನ್ ಗುರಿ ನೀಡಿದೆ.

ಕುಸಿದ ಮಧ್ಯಮ ಕ್ರಮಾಂಕ

ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಉತ್ತಮ ಆರಂಭವೇ ದೊರೆತಿತ್ತು. ಇನ್ನಿಂಗ್ಸ್ ಆರಂಭಿಸಿದ ನಾಯಕ ಶುಭ್ ಮನ್ ಗಿಲ್ ಮತ್ತು ರೋಹಿತ್ ಶರ್ಮಾ ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿದರೂ ಬಳಿಕ ಕಿವೀಸ್ ಬೌಲರ್ ಗಳ ಮೇಲೆ ಸವಾರಿ ಮಾಡಿದರು.

ಮೊದಲ ವಿಕೆಟ್ ಗೆ ಈ ಜೋಡಿ 70ರನ್ ಪೇರಿಸಿತು. ಈ ಹಂತದಲ್ಲಿ 24 ರನ್ ಗಳಿಸಿದ್ದ ರೋಹಿತ್ ಶರ್ಮಾ ಕ್ಲಾರ್ಕೆ ಬೌಲಿಂಗ್ ನಲ್ಲಿ ಅನಗತ್ಯ ಹೊಡೆತಕ್ಕೆ ಮುಂದಾಗಿ ವಿಲ್ ಯಂಗ್ ಗೆ ಕ್ಯಾಚ್ ನೀಡಿ ಔಟಾದರು. ಬಳಿಕ ಕ್ರೀಸ್ ಗೆ ಬಂದ ವಿರಾಟ್ ಕೊಹ್ಲಿ ಇಂದೂ ಕೂಡ ಉತ್ತಮ ಬ್ಯಾಟಿಂಗ್ ನಡೆಸುವ ಮುನ್ಸೂಚನೆ ನೀಡಿದರು.

ಗಿಲ್ ಜೊತೆಗೂಡಿ 3ನೇ ವಿಕೆಟ್ ಗೆ 29 ರನ್ ಕಲೆಹಾಕಿದರು. ಈ ಹಂತದಲ್ಲಿ ಅರ್ಧಶತಕ ಗಳಿಸಿದ್ದ ಗಿಲ್ (56 ರನ್) ಜೇಮಿಸನ್ ಬೌಲಿಂಗ್ ನಲ್ಲಿ ಔಟಾದರು. ಬಳಿಕ ಕ್ರೀಸ್ ಗೆ ಬಂದ ಶ್ರೇಯಸ್ ಅಯ್ಯರ್ 8 ರನ್ ಗಳಿಸಿ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ದೊಡ್ಡ ಇನ್ನಿಂಗ್ಸ್ ಕಟ್ಟುವ ಮುನ್ಸೂಚನೆ ನೀಡಿದ್ದ ಕೊಹ್ಲಿ ಕೂಡ ಕೇವಲ 23 ರನ್ ಗಳಿಸಿ ಔಟಾಗಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದರು. 29 ಎಸೆತಗಳಲ್ಲಿ 2 ಬೌಂಡರಿ ಸಹಿತ 23 ರನ್ ಗಳಿಸಿ ಮತ್ತೆ ಕ್ಲಾರ್ಕೆ ಬೌಲಿಂಗ್ ನಲ್ಲಿ ಔಟಾದರು.

2 ಜೊತೆಯಾಟ

ಬಳಿಕ ಕ್ರೀಸ್ ಗೆ ಬಂದ ಕನ್ನಡಿಗ ಕೆಎಲ್ ರಾಹುಲ್, ರವೀಂದ್ರ ಜಡೇಜಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಜೊತೆ 2 ಉತ್ತಮ ಜೊತೆಯಾಟವಾಡಿದರು. ಜಡೇಜಾ ಮತ್ತು ರಾಹುಲ್ ಜೋಡಿ 73 ರನ್ ಹಾಕಿ ಭಾರತದ ಇನ್ನಿಂಗ್ಸ್ ಗೆ ಜೀವ ತುಂಬಿತು. ಬಳಿಕ ರಾಹುಲ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಜೋಡಿ 57 ರನ್ ಗಳ ಜೊತೆಯಾಟವಾಡಿ ಭಾರತದ ರನ್ ಗಳಿಕೆಯನ್ನು 250ರ ಗಡಿ ದಾಟಿಸಿತು.

ಕೆಎಲ್ ರಾಹುಲ್ ಆಕರ್ಷಕ ಶತಕ

ರವೀಂದ್ರ ಜಡೇಜಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಔಟಾದ ಬಳಿಕ ಏಕಾಂಗಿ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ನೋಡ ನೋಡುತ್ತಲೇ ಶತಕ ಸಿಡಿಸಿದರು. ಕೇವಲ 92 ಎಸೆತಗಳನ್ನು ಎದುರಿಸಿದ ರಾಹುಲ್ 1 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 112 ರನ್ ಗಳಿಸಿ ಭಾರತದ ಸವಾಲಿನ ಮೊತ್ತದಲ್ಲಿ ಪ್ರಮುಖ ಪಾತ್ರವಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಬಲ ಸ್ಫೋಟ: ಮೂವರು ಸಾವು, ಇಬ್ಬರು ಗಂಭೀರ ಗಾಯ

ಕೂಡಲೇ ಇರಾನ್ ತೊರೆಯಿರಿ: ಭಾರತೀಯ ನಾಗರಿಕರಿಗೆ 2ನೇ ಬಾರಿಗೆ ಸಲಹೆ!

ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ?: ಪ್ರಿಯಾಂಕ್ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ! ಷರತ್ತು ಬದ್ಧ ಜಾಮೀನು ಮಂಜೂರು

BBK 12 : ದೊಡ್ಮನೆಯಿಂದ 'ಧ್ರುವಂತ್' ಮಿಡ್‌ ವೀಕ್‌ ಎಲಿಮಿನೇಟ್?

SCROLL FOR NEXT