ರಾಜ್‌ಕೋಟ್: ಭಾರತ ವಿರುದ್ಧ ಬುಧವಾರ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್‌ವೆಲ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
ವಡೋರಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳಿಂದ ಸೋತಿದ್ದ ಪ್ರವಾಸಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆದಿತ್ಯ ಅಶೋಕ್ ಬದಲಿಗೆ 31 ವರ್ಷದ ಎಡಗೈ ಸ್ಪಿನ್ನರ್ ಜೇಡನ್ ಲೆನಾಕ್ಸ್ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ.
ಟೀಂ ಇಂಡಿಯಾದ ನಾಯಕ ಶುಭಮನ್ ಗಿಲ್ ಕೂಡ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ವಡೋದರಾದಲ್ಲಿ ಮೊದಲನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಟೂರ್ನಿಯಿಂದ ಹೊರಗುಳಿದಿರುವ ವಾಷಿಂಗ್ಟನ್ ಸುಂದರ್ ಬದಲಿಗೆ ವೇಗಿ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.
ಗಾಯಗೊಂಡಿರುವ ವಾಷಿಂಗ್ಟನ್ ಸುಂದರ್ ಬದಲಿಗೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಆಯುಷ್ ಬದೋನಿ ಅವರನ್ನು ಟೀಂ ಇಂಡಿಯಾಗೆ ಹೆಸರಿಸಲಾಗಿದ್ದು, ಈ ನಿರ್ಧಾರಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಬದೋನಿ ಬದಲಿಗೆ ಬೇರೆ ಆಟಗಾರರನ್ನು ಆಯ್ಕೆ ಮಾಡಬೇಕಿತ್ತು ಎಂದು ಹೇಳಲಾಗಿದೆ. ಇದೀಗ ಎರಡನೇ ಏಕದಿನ ಪಂದ್ಯಕ್ಕೆ ವಾಷಿಂಗ್ಟನ್ ಸುಂದರ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಯನ್ನು ಆಯ್ಕೆ ಮಾಡಲಾಗಿದೆ.ಉಭಯ ತಂಡಗಳು
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್ (ನಾಯಕ), ಜ್ಯಾಕ್ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಜೇಡೆನ್ ಲೆನ್ನಾಕ್ಸ್.
ಭಾರತ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಉಭಯ ತಂಡಗಳು