ಕ್ರಿಕೆಟ್

RCB ಅಭಿಮಾನಿಗಳಿಗೆ ಸಿಹಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ಅನುಮತಿ

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು KSCAಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದೆ.

ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.

ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗಿದೆ.

ರಾಜ್ಯ ಸರ್ಕಾರದ ಎಲ್ಲಾ ನಿಗದಿತ ಕ್ರಮಗಳನ್ನು ಜಾರಿಗೆ ತರಲು ಕೆಎಸ್‌ಸಿಎ ಸಿದ್ಧವಾಗಿದೆ ಎಂದು ಕೆಎಸ್‌ಸಿಎ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ದೃಢಪಡಿಸಿದರು. ಕೆಎಸ್‌ಸಿಎ ಅಧ್ಯಕ್ಷ ಬಿ. ಕೆ. ವೆಂಕಟೇಶ್ ಪ್ರಸಾದ್ ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ