ಇಂದೋರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 41 ರನ್‌ಗಳಿಂದ ಸೋಲು ಅನುಭವಿಸಿದೆ.
ಇಂದು ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದೆ ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು 124 ರನ್‌ಗಳ ಆಕರ್ಷಕ ಶತಕ ಬಾರಿಸಿದರು. ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರಿಗೆ 85ನೇ ಶತಕವಾಗಿದೆ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ 54 ನೇ ಶತಕವಾಗಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನ್ಯೂಜಿಲೆಂಡ್ ತಂಡ ನಿಗದಿತ 50 ಓವರ್ ನಲ್ಲಿ ಡರಿಲ್ ಮಿಚೆಲ್ (137) ಮತ್ತು ಗ್ಲೇನ್ ಫಿಲಿಪ್ಸ್ (106) ಅವರ ಅಮೋಘ ಶತಕಗಳ ನೆರವಿನಿಂದ 8 ವಿಕೆಟ್ ಕಳೆದುಕೊಂಡು 337 ರನ್ ಸೇರಿಸಿತು.
ಆರಂಭಿಕ ಆಘಾತದ ಹೊರತಾಗಿಯೂ ನ್ಯೂಜಿಲೆಂಡ್ ಪರ ಡರಿಲ್ ಮಿಚೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಕೇವಲ 131 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 15 ಬೌಂಡರಿಗಳ ಸಹಿತ 137 ರನ್ ಸಿಡಿಸಿದರು.
ಗೆಲುವಿಗೆ 338 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಭಾರತ, 46 ಓವರ್ಗಳಲ್ಲಿ 296 ರನ್ಗಳಿಗೆ ಆಲೌಟ್ ಆಗುವ ಮೂಲಕ 41 ರನ್‌ಗಳಿಂದ ಸೋಲು ಒಪ್ಪಿಕೊಂಡಿತು.