ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

1st T20I: ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು.

ಟೀಂ ಇಂಡಿಯಾ ಆಟಗಾರರು
Lingaraj Badiger
Updated On : 21 Jan 2026, 10:47 pm

ನಾಗ್ಪುರ: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸ್ಫೋಟ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಬುಧವಾರ 48 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಶರ್ಮಾ, ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದು 35 ಎಸೆತಗಳಲ್ಲಿ 84 ರನ್ ಗಳಿಸಿದರು.

ಅಭಿಷೇಕ್ ಶರ್ಮಾ ಒಟ್ಟು ಐದು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳನ್ನು ಬಾರಿಸಿದ್ದು ಶತಕಕ್ಕೆ ಕೇವಲ 16 ರನ್‌ ಇದ್ದಾಗ ಔಟಾದರು. ಸ್ಫೋಟಕ ಬ್ಯಾಟಿಂಗ್ ಮೂಲಕ ಪ್ರಮುಖ ದಾಖಲೆಗಳನ್ನು ಮುರಿದರು.

Advertisement

Advertisement

Also Read

35 ಎಸೆತ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ಇನ್ನು ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್​ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್​ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು.

ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಬಾರಿಸಿ ಅಜೇಯ 44 ರನ್ ಗಳಿಸಿದರು.

ಗೆಲುವಿಗೆ 240 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ನ್ಯೂಜಿಲೆಂಡ್, ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 190 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement