ರಾಯ್ಪುರ: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಟೀಂ ಇಂಡಿಯಾ ಪರ ಇಶಾನ್ ಕಿಶನ್, ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಕಿವೀಸ್ ತಂಡವನ್ನು ಸಮರ್ಥವಾಗಿ ಎದುರಿಸಿದರು.
ಭಾರತ ತಂಡ 15.2 ಓವರ್‌ಗೆ 3 ವಿಕೆಟ್ ನಷ್ಟಕ್ಕೆ 209 ರನ್ ಗಳಿಸುವ ಮೂಲಕ 7 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಈ ಗೆಲುವಿನ ಮೂಲಕ ಭಾರತ ತಂಡ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಕಬಳಿಸಿದರು. ಕುಲ್ದೀಪ್ ಯಾದವ್ 2 ವಿಕೆಟ್ ಪಡೆದರು.