ಸಂಗ್ರಹ ಚಿತ್ರ 
ಕ್ರಿಕೆಟ್

4ನೇ ಟಿ20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 3-0 ಮುನ್ನಡೆ ಸಾಧಿಸಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 3-0 ಮುನ್ನಡೆ ಸಾಧಿಸಿದೆ. ಆದರೆ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ.

ನ್ಯೂಜಿಲ್ಯಾಂಡ್ ಮೊದಲು ಬ್ಯಾಟಿಂಗ್ ಮಾಡಿದ್ದು ಕಿವೀಸ್ ಪರ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದರು. ನ್ಯೂಜಿಲೆಂಡ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 215 ರನ್‌ಗಳ ಬೃಹತ್ ಮೊತ್ತ ಗಳಿಸಿದ್ದು ಭಾರತಕ್ಕೆ ಗೆಲ್ಲಲು 216 ರನ್ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 18.4 ಓವರ್ ನಲ್ಲಿ 165 ರನ್ ಗಳಿಗೆ ಆಲೌಟ್ ಆಗುವ ಮೂಲಕ ನ್ಯೂಜಿಲ್ಯಾಂಡ್ ಗೆ 50 ರನ್ ಗಳಿಂದ ಶರಣಾಯಿತು.

ಕಿವೀಸ್ ಪರ ಟಿಮ್ ಸೀಫರ್ಟ್ 36 ಎಸೆತಗಳಲ್ಲಿ 62 ರನ್ ಗಳಿಸಿದರೆ, ಡೆವೊನ್ ಕಾನ್ವೇ 23 ಎಸೆತಗಳಲ್ಲಿ 44 ರನ್ ಗಳಿಸಿದರು. ಈ ಇಬ್ಬರೂ ಮೊದಲ ವಿಕೆಟ್‌ಗೆ 100 ರನ್ ಜೊತೆಯಾಟ ನೀಡಿದರು. ನಂತರ, ಡ್ಯಾರಿಲ್ ಮಿಚೆಲ್ 18 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿ ಮೊತ್ತವನ್ನು 200 ರನ್​ಗಳ ಗಡಿ ದಾಟಿಸಿದರು. ಭಾರತದ ಪರ, ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು.

ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಶಿವಂ ದುಬೆ 23 ಎಸೆತಗಳಲ್ಲಿ 65 ರನ್ ಬಾರಿಸಿದರು. ಇನ್ನುಳಿದಂತೆ ರಿಂಕು ಸಿಂಗ್ 39 ರನ್ ಬಾರಿಸಿದರೆ ಸಂಜು ಸ್ಯಾಮ್ಸನ್ 24 ರನ್ ಸಿಡಿಸಿದ್ದು ಮತ್ಯಾರೂ ಎರಡಂಕಿ ದಾಟಲಿಲ್ಲ. ನ್ಯೂಜಿಲ್ಯಾಂಡ್ ಪರ ಮಿಚೆಲ್ ಸ್ಯಾಂಟ್ನರ್ 3 ವಿಕೆಟ್, ಇಶ್ ಸೋಧಿ ಮತ್ತು ಜಾಕೋಬ್ ಡಫ್ಫಿ ತಲಾ 2 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

'ಮಹಾ' ಡಿಸಿಎಂ ಅಜಿತ್ ಪವಾರ್ ದುರಂತ ಸಾವು ಬೆನ್ನಲ್ಲೇ ಬಾರಾಮತಿಯಲ್ಲಿ ತುರ್ತು ATC ತಂಡ ನಿಯೋಜಿಸಿದ IAF

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಬೆಂಗಳೂರು: ಸಿಂಗ್ನಲ್ ಜಂಪ್ ಮಾಡಿ, ಕಾರಿಗೆ ಡಿಕ್ಕಿ; ಚಾಲಕನಿಗೆ ಅವಾಚ್ಯ ಶಬ್ಬಗಳಿಂದ ಬೈದಿದ್ದ, ಬೈಕ್ ಸವಾರನ ಬಂಧನ!

ಯುಜಿಸಿ ನಿಯಮಗಳ ವಿವಾದದ ಬಗ್ಗೆ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ವ್ಯಕ್ತಿ

SCROLL FOR NEXT