ಶ್ರೇಯಸ್ ಅಯ್ಯರ್ 
ಕ್ರಿಕೆಟ್

India vs New Zealand 4th T20: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಶ್ರೇಯಸ್ ಅಯ್ಯರ್ ಇನ್, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ?

ಆರಂಭದಲ್ಲಿ ಭಾರತ-ನ್ಯೂಜಿಲೆಂಡ್ ಟಿ20ಐ ತಂಡಕ್ಕೆ ತಿಲಕ್ ವರ್ಮಾ ಅವರ ತಾತ್ಕಾಲಿಕ ಬದಲಿಯಾಗಿ ಮೊದಲ ಮೂರು ಪಂದ್ಯಗಳಿಗೆ ಶ್ರೇಯಸ್ ಅವರನ್ನು ಆಯ್ಕೆ ಮಾಡಲಾಗಿತ್ತು.

ಮುಂಬರುವ ಟಿ20 ವಿಶ್ವಕಪ್‌ನಲ್ಲಿ ತಯಾರಿಯ ಭಾಗವಾಗಿ ಭಾರತವು ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ T20I ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ಅವಕಾಶ ನೀಡಬಹುದು ಎನ್ನಲಾಗಿದ್ದು, ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಿದೆ. ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 3-0 ಮುನ್ನಡೆಯಲ್ಲಿರುವುದರಿಂದ, ಪ್ಲೇಯಿಂಗ್ XI ನಲ್ಲಿ ಬದಲಾವಣೆ ಮಾಡಲು ಅವಕಾಶವಿದೆ. ಇಶಾನ್ ಕಿಶನ್ ತಮ್ಮ ಸ್ಥಿರ ಪ್ರದರ್ಶನದಿಂದ ಆಯ್ಕೆದಾರರ ನಂಬಿಕೆ ಉಳಿಸಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಗಾಯದಿಂದ ಬಳಲುತ್ತಿರುವ ಕಾರಣ ಪಂದ್ಯಾವಳಿಗೂ ಮುನ್ನ ಅವರಿಗೆ ವಿಶ್ರಾಂತಿ ನೀಡಲಿದೆ ಎನ್ನಲಾಗಿದೆ.

ಆರಂಭದಲ್ಲಿ ಭಾರತ-ನ್ಯೂಜಿಲೆಂಡ್ ಟಿ20ಐ ತಂಡಕ್ಕೆ ತಿಲಕ್ ವರ್ಮಾ ಅವರ ತಾತ್ಕಾಲಿಕ ಬದಲಿಯಾಗಿ ಮೊದಲ ಮೂರು ಪಂದ್ಯಗಳಿಗೆ ಶ್ರೇಯಸ್ ಅವರನ್ನು ಆಯ್ಕೆ ಮಾಡಲಾಗಿತ್ತು. ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ತಿಲಕ್ ವರ್ಮಾ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಅವರನ್ನು ಮರಳಿ ಕರೆತರಲು ಬಯಸದ ಕಾರಣ ಶ್ರೇಯಸ್ ಅಯ್ಯರ್ ಅವರಿಗೆ ಈಗ ಆಡಲು ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ, 4ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಯಾಗಿ ಭಾರತದ ಪ್ಲೇಯಿಂಗ್ XI ನಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ಅವಕಾಶ ನೀಡಬಹುದು.

ಭಾರತದ ಟಿ20ಐಗಳಲ್ಲಿ ಅತ್ಯಂತ ವಿಶ್ವಾಸಾರ್ಹ ಬೌಲರ್ ಆಗಿರುವ ಹಾರ್ದಿಕ್, ಈ ಸರಣಿಯಲ್ಲಿ 4 ವಿಕೆಟ್‌ಗಳನ್ನು ಕಬಳಿಸಿದ್ದು, ಕೇವಲ 68 ರನ್‌ಗಳನ್ನು ಮಾತ್ರ ನೀಡಿದ್ದಾರೆ. ಟಿ20 ವಿಶ್ವಕಪ್‌ ದೃಷ್ಟಿಯಿಂದ ಭಾರತ vs ನ್ಯೂಜಿಲೆಂಡ್ 4ನೇ ಟಿ20ಐನಿಂದ ಹೊರಗಿಟ್ಟು, ವಿಶ್ರಾಂತಿ ನೀಡಲು ಮುಂದಾಗಿದೆ ಎನ್ನಲಾಗಿದೆ.

ಅದ್ಭುತ ಫಾರ್ಮ್‌ನಲ್ಲಿ ಇಶಾನ್ ಕಿಶನ್

ಟಿ20ಐ ತಂಡಕ್ಕೆ ಮರಳಿದ ನಂತರ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅವರು ಆಡಿದ ಕೊನೆಯ ಟಿ20ಐಗಳಲ್ಲಿ 8, 76 ಮತ್ತು 28 ರನ್ ಗಳಿಸಿದ್ದಾರೆ ಮತ್ತು ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ತಂಡದ ನಿರ್ವಹಣೆಯ ಬೆಂಬಲವೂ ಅವರಿಗಿದೆ. 2026ರ ಟಿ20 ವಿಶ್ವಕಪ್‌ಗೆ ಅವರನ್ನು ಭಾರತದ ಬ್ಯಾಕಪ್ ಕೀಪರ್-ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿದ್ದರೂ, ಅವರ ಉತ್ತಮ ಫಾರ್ಮ್‌ನಿಂದಾಗಿ ಭವಿಷ್ಯದಲ್ಲಿ ಅವರು ಅವಕಾಶಗಳನ್ನು ಪಡೆಯುವ ಸಾಧ್ಯತೆ ಹೆಚ್ಚಿದೆ.

ಅಕ್ಷರ್ ಪಟೇಲ್ ಟಿ20 ವಿಶ್ವಕಪ್‌ಗೆ ಪ್ರಮುಖ ಆಟಗಾರನಾಗಿರುವುದರಿಂದ ಅವರು ಪ್ಲೇಯಿಂಗ್ XI ಗೆ ಮರಳುವ ಸಾಧ್ಯತೆಯಿದೆ. ಜಸ್ಪ್ರೀತ್ ಬುಮ್ರಾ ಮತ್ತೆ ಆಡಬಹುದು, ಅರ್ಶದೀಪ್ ಮತ್ತು ಶಿವಂ ದುಬೆ ಬೆಂಬಲ ನೀಡುತ್ತಾರೆ. ವರುಣ್ ಚರ್ಕವರ್ತಿ ತಂಡದಲ್ಲಿ ಉಳಿಯಬಹುದು. ಆದರೆ, ಕುಲದೀಪ್ ಯಾದವ್ ಮತ್ತು ರವಿ ಬಿಷ್ಣೋಯ್ ಪ್ರಮುಖ ಸ್ಪಿನ್ನರ್‌ಗಳಾಗುವ ನಿರೀಕ್ಷೆಯಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪ ನಾಯಕ), ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಇಶಾನ್ ಕಿಶನ್ (ವಿಕೆಟ್ ಕೀಪರ್) ರವಿ ಬಿಷ್ಣೋಯ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್; ಲೋಕಾಯುಕ್ತ ಸಲ್ಲಿಸಿದ್ದ 'ಬಿ' ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

Baramati plane crash: ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನಕ್ಕೂ ಮುನ್ನ ಆಗಿದ್ದೇನು? ಸ್ಫೋಟಕ ಮಾಹಿತಿ ಬಹಿರಂಗ!

ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ; ಕೆಲಸ ಎಲ್ಲಿ ಗೊತ್ತಾ?

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ, 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಅತಂತ್ರದಲ್ಲಿ NCP ಭವಿಷ್ಯ?; ರಾಜಕೀಯ ವಿಶ್ಲೇಷಕರು ಹೇಳೋದೇನು?

SCROLL FOR NEXT