ಎಸ್ ಶ್ರೀಶಾಂತ್ 
ಕ್ರಿಕೆಟ್

ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಮೇಲಿನ 3 ವರ್ಷಗಳ ನಿಷೇಧ ತೆರವುಗೊಳಿಸಿದ ಕೇರಳ ಕ್ರಿಕೆಟ್ ಸಂಸ್ಥೆ!

ಕೆಸಿಎ ವಿರುದ್ಧದ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿ ಕ್ರಿಕೆಟಿಗ ಸಲ್ಲಿಸಿದ ಬೇಷರತ್ ಕ್ಷಮೆಯಾಚನೆಯ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ತಿರುವನಂತಪುರಂ: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಿಂದ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ವಿಧಿಸಿದ್ದ ಮೂರು ವರ್ಷಗಳ ನಿಷೇಧವನ್ನು ಬುಧವಾರ ತೆಗೆದುಹಾಕಲಾಗಿದೆ.

ಇಂದು ನಡೆದ ಸಂಘದ ವಿಶೇಷ ಸಾಮಾನ್ಯ ಸಭೆಯಲ್ಲಿ ಕೆಸಿಎ ಈ ನಿಷೇಧವನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಸಂಘದ ಹೇಳಿಕೆ ತಿಳಿಸಿದೆ.

ಕೆಸಿಎ ವಿರುದ್ಧದ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿ ಕ್ರಿಕೆಟಿಗ ಸಲ್ಲಿಸಿದ ಬೇಷರತ್ ಕ್ಷಮೆಯಾಚನೆಯ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಕಳೆದ ಕೇರಳ ಕ್ರಿಕೆಟ್ ಲೀಗ್ (ಕೆಸಿಎಲ್) ಪಂದ್ಯಗಳಿಗೆ ಮೊದಲು ಶ್ರೀಶಾಂತ್ ಮೇಲೆ ನಿಷೇಧ ಹೇರಲಾಗಿತ್ತು ಎಂದು ಅದು ಹೇಳಿದೆ.

ಮಲಯಾಳಂ ಟೆಲಿವಿಷನ್ ಚಾನೆಲ್‌ನಲ್ಲಿ ನಡೆದ ಪ್ಯಾನೆಲ್ ಚರ್ಚೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಸ್ಯಾಮ್ಸನ್‌ರನ್ನು ಕುರಿತು ನೀಡಿದ ಹೇಳಿಕೆಗಾಗಿ ಶ್ರೀಶಾಂತ್‌ಗೆ ಕೆಸಿಎ ಶೋಕಾಸ್ ನೋಟಿಸ್ ನೀಡಿತ್ತು.

ದೂರದರ್ಶನದ ಚರ್ಚೆಯ ಸಮಯದಲ್ಲಿ ಶ್ರೀಶಾಂತ್ ಅವರು ಸ್ಯಾಮ್ಸನ್‌ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು. ಸ್ಯಾಮ್ಸನ್ ಮತ್ತು ಇತರ ಕೇರಳ ಆಟಗಾರರನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದರು. ಕೆಸಿಎ ವಿರುದ್ಧ ಆರೋಪಗಳನ್ನು ಮಾಡಿದ್ದರು.

ವಿಜಯ್ ಹಜಾರೆ ಟ್ರೋಫಿಗಾಗಿ ಕೇರಳ ತಂಡದಿಂದ ಸ್ಯಾಮ್ಸನ್ ಅವರನ್ನು ಕೈಬಿಟ್ಟಿದ್ದು ಭಾರತದ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಯ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದ್ದು, KCA ವಿರುದ್ಧ ಟೀಕೆಗಳು ಕೇಳಿಬಂದಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್