ಆಸ್ಟ್ರೇಲಿಯಾ ತಂಡ 
ಕ್ರಿಕೆಟ್

ಮಹಿಳಾ T20 ವಿಶ್ವಕಪ್: ಇಂಗ್ಲೆಂಡ್ ಮಣಿಸಿ 7ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

2026ರ ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ 7ನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಲಾರ್ಡ್ಸ್: 2026ರ ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ 7ನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಲಾರ್ಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆತಿಥೇಯ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾಕ್ಕೆ 151 ರನ್‌ಗಳ ಗುರಿಯನ್ನು ನೀಡಿತು. ಇಂಗ್ಲೆಂಡ್ ನೀಡಿ ಗುರಿಯನ್ನು ಆಸ್ಟ್ರೇಲಿಯಾ ಸುಲಭವಾಗಿ ಬೆನ್ನಟ್ಟಿತ್ತು. ಇನ್ನು 17 ಎಸೆತ ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 153 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಬೆತ್ ಮೂನಿ ಮತ್ತು ಫೋಬೆ ಲಿಚ್‌ಫೀಲ್ಡ್ ಅದ್ಭುತ ಬ್ಯಾಟಿಂಗ್ ಮಾಡಿದ್ದು ಗೆಲುವಿನ ರೂವಾರಿಗಳಾದರು. ಫೋಬೆ 48 ರನ್ ಬಾರಿಸಿದರೆ ಮೂನಿ 64 ರನ್ ಬಾರಿಸಿ ಔಟಾದರು.

ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ಕಳಪೆ ಆರಂಭವನ್ನು ನೀಡಿತು. ಸ್ಫೋಟಕ ಬ್ಯಾಟ್ಸ್‌ಮನ್‌ಗಳಿಂದ ಸಜ್ಜುಗೊಂಡ ಇಂಗ್ಲೆಂಡ್ ಪ್ರಶಸ್ತಿ ಪಂದ್ಯದಲ್ಲಿ ರನ್ ಗಳಿಸಲು ಹೆಣಗಾಡಿತು.

ನಾಯಕಿ ನ್ಯಾಟ್ ಸಿವರ್-ಬ್ರಂಟ್ 53 ಎಸೆತಗಳಲ್ಲಿ ಅಜೇಯ 58 ರನ್‌ಗಳ ಇನ್ನಿಂಗ್ಸ್ ಆಡಿದರು. ಫ್ರೇಯಾ ಕೆಂಪ್ ಅತ್ಯುತ್ತಮ ಬೆಂಬಲ ನೀಡಿದ್ದು 28 ಎಸೆತಗಳಲ್ಲಿ 44 ರನ್‌ಗಳೊಂದಿಗೆ ಅಜೇಯರಾಗಿ ಉಳಿದರು. ಆಮಿ ಜೋನ್ಸ್ 6 ರನ್‌ಗಳಿಗೆ ಮತ್ತು ಡ್ಯಾನಿ ವ್ಯಾಟ್ 8 ರನ್‌ಗಳಿಗೆ ಔಟಾದರು. ಕಿಮ್ ಗಾರ್ತ್, ಲೂಸಿ ಹ್ಯಾಮಿಲ್ಟನ್ ಮತ್ತು ಜಾರ್ಜಿಯಾ ವೇರ್‌ಹ್ಯಾಮ್ ಆಸ್ಟ್ರೇಲಿಯಾ ಪರ ಬಿಗಿ ಬೌಲಿಂಗ್ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ