ಸ್ಮೃತಿ ಮಂಧಾನಾ 
ಕ್ರಿಕೆಟ್

ಭಾರತೀಯ ಮಹಿಳಾ ತಂಡದ ನಾಯಕತ್ವ ವಹಿಸಿಕೊಳ್ಳಲು ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನಾ ಸಿದ್ಧ!

ನಾಯಕಿಯಾಗಿ ಅವರು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎರಡು ಬಾರಿ WPL ಪ್ರಶಸ್ತಿಗಳಿಗೆ (2024 ಮತ್ತು 2026) ಮುನ್ನಡೆಸಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರೆ ಸ್ಮೃತಿ ಮಂಧನಾ, ಹರ್ಮನ್‌ಪ್ರೀತ್ ಕೌರ್ ಅವರಿಂದ ತಂಡದ ನಾಯಕತ್ವದ ಜವಾಬ್ದಾರಿಯನ್ನು (ಎಲ್ಲ ಮಾದರಿಗಳಲ್ಲಿ) ವಹಿಸಿಕೊಳ್ಳಲು ಸಿದ್ಧ ಎಂದಿದ್ದಾರೆ. ಸದ್ಯ ತಂಡದಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರ್ತಿಯಾಗಿರುವ ಮಹಾರಾಷ್ಟ್ರದ ಈ ಬ್ಯಾಟರ್, ಸದ್ಯ ಉಪನಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹರ್ಮನ್‌ಪ್ರೀತ್ ಭಾರತೀಯ ತಂಡದ ನಾಯಕಿಯಾಗಿ ಹತ್ತು ವರ್ಷಗಳು ಕಳೆದಿವೆ ಮತ್ತು ಇದೀಗ ಅವರ ನಿವೃತ್ತಿಯ ಸುತ್ತ ಮಾತುಗಳು ಕೇಳಿಬರುತ್ತಿವೆ.

ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ, ನಾಯಕತ್ವ ಬದಲಾವಣೆಯ ಮಾತುಕತೆಗಳ ನಡುವೆ ನಾಯಕತ್ವ ಸ್ವೀಕರಿಸುವ ಇಚ್ಛೆಯ ಕುರಿತಾದ ಪ್ರಶ್ನೆಗೆ ಮಂಧಾನ, 'ಹೌದು, ಖಂಡಿತ. ನಾನು ಸಿದ್ಧ' ಎಂದು ಪ್ರತಿಕ್ರಿಯಿಸಿದರು.

ಸ್ಮೃತಿ 4 ODI ಮತ್ತು 18 T20I ಗಳಲ್ಲಿ ಭಾರತದ ಮಹಿಳಾ ತಂಡವನ್ನು ಮುನ್ನಡೆಸಿದ್ದಾರೆ. ನಾಯಕಿಯಾಗಿ ಅವರು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎರಡು ಬಾರಿ WPL ಪ್ರಶಸ್ತಿಗಳಿಗೆ (2024 ಮತ್ತು 2026) ಮುನ್ನಡೆಸಿದ್ದಾರೆ.

ಈಮಧ್ಯೆ, ಕಳೆದ ವರ್ಷ ಭಾರತ ತಂಡವನ್ನು ತಮ್ಮ ಮೊದಲ ಏಕದಿನ ವಿಶ್ವಕಪ್ ಪ್ರಶಸ್ತಿಗೆ ಕೌರ್ ಮುನ್ನಡೆಸಿದ್ದರು. ಈ ವರ್ಷದ ಜೂನ್ ಆರಂಭದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಗುಂಪು ಹಂತದಲ್ಲಿಯೇ ಭಾರತ ಟೂರ್ನಿಯಿಂದ ಹೊರಬಿತ್ತು.

ಭಾರತದ ಟಿ20 ವಿಶ್ವಕಪ್ ಅಭಿಯಾನದ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಮೃತಿ ಮಂಧಾನಾ, ತಂಡವು ಹಿಂದೆ ಮಾಡಿದ ತಪ್ಪುಗಳನ್ನೇ ಪುನರಾವರ್ತಿಸಿದೆ ಮತ್ತು ಅವುಗಳನ್ನು ತಿದ್ದಿಕೊಳ್ಳುವಲ್ಲಿ ವಿಫಲವಾಗಿದೆ. ಇದರಿಂದಾಗಿ ಅಭಿಯಾನವು ಹಳಿ ತಪ್ಪಿದೆ ಎಂದು ಅಭಿಪ್ರಾಯಪಟ್ಟರು. 2028ರ ಮುಂದಿನ ಟಿ20 ವಿಶ್ವಕಪ್‌ಗೆ ಸಿದ್ಧವಾಗಲು ಸ್ಪಷ್ಟವಾದ ಕಾರ್ಯಯೋಜನೆಯ ಅಗತ್ಯವಿದೆ ಎಂದು ಹೇಳಿದರು.

'ಆತ್ಮಾವಲೋಕನ ಮಾಡಿಕೊಳ್ಳುವುದು ಮತ್ತು ತಪ್ಪುಗಳಿಂದ ಪಾಠ ಕಲಿಯುವುದು ಮುಖ್ಯ. ದುರದೃಷ್ಟವಶಾತ್, ನಾವು ನಮ್ಮ ಹಿಂದಿನ ತಪ್ಪುಗಳಿಂದ ಸಾಕಷ್ಟು ಪಾಠ ಕಲಿತಿಲ್ಲ ಮತ್ತು ಅವುಗಳನ್ನೇ ಪುನರಾವರ್ತಿಸುತ್ತಾ ಬಂದಿದ್ದೇವೆ. ಮುಂದಿನ ದಿನಗಳಲ್ಲಿ, ಈ ಮಾದರಿಯನ್ನು ನಾವು ಹೇಗೆ ನಿಭಾಯಿಸಬೇಕು ಮತ್ತು ತಂಡವಾಗಿ ನಾವೇನು ​​ಮಾಡಬೇಕು ಎಂಬುದರ ಕುರಿತು 2028ರ ಟಿ20 ವಿಶ್ವಕಪ್‌ವರೆಗಿನ ಸ್ಪಷ್ಟ ಕಾರ್ಯಯೋಜನೆಯ ಅಗತ್ಯವಿದೆ' ಎಂದು ಅಭಿಪ್ರಾಯಪಟ್ಟರು.

'ನನಗೆ, ಸಕಾರಾತ್ಮಕ ತಂಡದ ಸಂಸ್ಕೃತಿಯನ್ನು ಸೃಷ್ಟಿಸುವುದು ಅತ್ಯಂತ ಮುಖ್ಯ. ಪ್ರತಿಯೊಬ್ಬ ಆಟಗಾರ್ತಿಯು ತಮ್ಮನ್ನು ತಾವು ವ್ಯಕ್ತಪಡಿಸಲು ಮತ್ತು ಅವರು ಯಾರೆಂದು ಭಾವಿಸಲು ಆರಾಮದಾಯಕವಾಗಿರಬೇಕು. ಜನರು ಮೌಲ್ಯಯುತ ಮತ್ತು ವಿಶ್ವಾಸಾರ್ಹರೆಂದು ಭಾವಿಸಿದಾಗ, ಅವರು ಉತ್ತಮವಾಗಿ ಪ್ರದರ್ಶನ ನೀಡುತ್ತಾರೆ' ಎಂದು ಮಂಧಾನಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ–ಚೀನಾ ಸಂಬಂಧ; ಭೂಮಿಯ ಲೋಹಗಳು, ವೀಸಾ, ಹೂಡಿಕೆ; ಕ್ಸಿ-ಜಿನ್ ಪಿಂಗ್-ಪ್ರಧಾನಿ ಮೋದಿ ಮಾತುಕತೆ ಅಜೆಂಡಾ ಏನು?

BRICS ಶೃಂಗಸಭೆ: ದೆಹಲಿಗೆ ಆಗಮಿಸಿದ Vladimir Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ, ಭಾರತ-ರಷ್ಯಾ ಸ್ನೇಹಕ್ಕೆ ಮತ್ತಷ್ಟು ಬಲ..!

'Brand Bengaluru'ಯೋಜನೆಗೆ ಬಿಗ್ ಬೂಸ್ಟ್: ಸಿಲಿಕಾನ್ ಸಿಟಿ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡಲು GBA ಮಾಸ್ಟರ್ ಪ್ಲ್ಯಾನ್!

ಮಧು ಬಂಗಾರಪ್ಪ ದಿನಕ್ಕೊಂದು ಶೂ ಹಾಕ್ತಾರೆ, ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ; ಚಿಂದಿ ಆಯುವವರು ಕೂಡ ಅದನ್ನು ತಗೊಳ್ಳಲ್ಲ- ಶ್ರೀರಾಮುಲು

Lalbaghಗೆ ತಪ್ಪಿದ ಗಂಡಾಂತರ: ನಾಗರಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಸುರಂಗ ರಸ್ತೆ ಮಾರ್ಗ ಬದಲಾವಣೆಗೆ ಮುಂದು..!