ಸರ್ ಗ್ಯಾರಿ ಸೋಬರ್ಸ್ 
ಕ್ರಿಕೆಟ್

ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ Sir Garry Sobers ನಿಧನ, 6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್!

ಪುತ್ರ ಡೇನಿಯಲ್ ಸೋಬರ್ಸ್ ಈ ವಿಷಯವನ್ನು ದೃಢಪಡಿಸಿದ್ದು, ತಮ್ಮ 90ನೇ ಹುಟ್ಟುಹಬ್ಬಕ್ಕೆ ಕೇವಲ 10 ದಿನಗಳು ಬಾಕಿ ಇರುವಾಗಲೇ ಸೋಬರ್ಸ್ ಕೊನೆಯುಸಿರೆಳೆದಿದ್ದಾರೆ.

ಬ್ರಿಡ್ಜ್‌ಟೌನ್: ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಹಾಗೂ ಕ್ರಿಕೆಟ್ ಇತಿಹಾಸದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ಸರ್ ಗಾರ್ಫೀಲ್ಡ್ "ಗ್ಯಾರಿ" ಸೋಬರ್ಸ್ ಅವರು ಶುಕ್ರವಾರ 89ನೇ ವಯಸ್ಸಿನಲ್ಲಿ ನಿಧನರಾದರು.

ಅವರ ಪುತ್ರ ಡೇನಿಯಲ್ ಸೋಬರ್ಸ್ ಈ ವಿಷಯವನ್ನು ದೃಢಪಡಿಸಿದ್ದು, ತಮ್ಮ 90ನೇ ಹುಟ್ಟುಹಬ್ಬಕ್ಕೆ ಕೇವಲ 10 ದಿನಗಳು ಬಾಕಿ ಇರುವಾಗಲೇ ಸೋಬರ್ಸ್ ಕೊನೆಯುಸಿರೆಳೆದಿದ್ದಾರೆ.

ಕ್ರಿಕೆಟ್ ಲೋಕದ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದ ಸೋಬರ್ಸ್, 1954ರ ಮಾರ್ಚ್‌ನಿಂದ 1974ರ ಏಪ್ರಿಲ್‌ವರೆಗೆ ವೆಸ್ಟ್ ಇಂಡೀಸ್ ಪರ 93 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ಅವಧಿಯಲ್ಲಿ ಅವರು 57.78ರ ಸರಾಸರಿಯಲ್ಲಿ 8,032 ರನ್‌ಗಳನ್ನು ಗಳಿಸಿದ್ದು, 26 ಶತಕ ಹಾಗೂ 30 ಅರ್ಧಶತಕಗಳನ್ನು ದಾಖಲಿಸಿದ್ದರು.

ಎಡಗೈ ಬ್ಯಾಟರ್ ಹಾಗೂ ಎಡಗೈ ವೇಗ-ಮಧ್ಯಮ ವೇಗದ ಬೌಲರ್ ಆಗಿದ್ದ ಸೋಬರ್ಸ್, ಟೆಸ್ಟ್ ಕ್ರಿಕೆಟ್‌ನಲ್ಲಿ 235 ವಿಕೆಟ್‌ಗಳನ್ನೂ ಕಬಳಿಸಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಅವರು ಕೇವಲ ಒಂದು ಪಂದ್ಯ ಆಡಿದ್ದು, ಅದರಲ್ಲಿ ಒಂದು ವಿಕೆಟ್ ಪಡೆದಿದ್ದರು.

6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್

1968ರಲ್ಲಿ ನಾಟಿಂಗ್‌ಹ್ಯಾಮ್‌ಶೈರ್ ಪರ ಗ್ಲಾಮೋರ್ಗನ್ ವಿರುದ್ಧದ ಪ್ರಥಮ ದರ್ಜೆ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಅಪರೂಪದ ದಾಖಲೆಯೂ ಅವರ ಹೆಸರಿನಲ್ಲಿದೆ.

ಕ್ರಿಕೆಟ್‌ಗೆ ನೀಡಿದ ಅಪಾರ ಕೊಡುಗೆಯಿಂದಾಗಿ ಸರ್ ಗ್ಯಾರಿ ಸೋಬರ್ಸ್ ಅವರನ್ನು ವಿಶ್ವ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಗೌರವಿಸಲಾಗುತ್ತದೆ. ಅವರ ನಿಧನಕ್ಕೆ ಕ್ರಿಕೆಟ್ ಲೋಕದ ಗಣ್ಯರು, ಮಾಜಿ ಆಟಗಾರರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!