ಗುಜರಾತ್ ಟೈಟನ್ಸ್ ತಂಡದ ಬಸ್ ನಲ್ಲಿ ಬೆಂಕಿ 
ಕ್ರಿಕೆಟ್

IPL 2026: ಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಗುಜರಾತ್ ತಂಡಕ್ಕೆ ಮತ್ತೊಂದು ಆಘಾತ; ಸ್ವಲ್ಪದರಲ್ಲಿ ಬಚಾವ್!

ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು,ಸ್ವಲ್ಪದರಲ್ಲಿ ಆಟಗಾರರು ಬಚಾವ್ ಆಗಿದ್ದಾರೆ. ಎ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ರ ಫೈನಲ್ ಪಂದ್ಯದ ನಿರಾಶಾದಾಯಕ ಸೋಲಿನ ಬಳಿಕ ಗುಜರಾತ್ ಟೈಟಾನ್ಸ್ ತಂಡ ಮತ್ತೊಂದು ಆಘಾತ ಎದುರಿಸಿದ್ದು, ಅವರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು,ಸ್ವಲ್ಪದರಲ್ಲಿ ಆಟಗಾರರು ಬಚಾವ್ ಆಗಿದ್ದಾರೆ. ಎಲ್ಲಾ ಆಟಗಾರರನ್ನು ಯಶಸ್ವಿಯಾಗಿ ಸ್ಥಳಾಂತರಿಸಿದ್ದರಿಂದ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಭಾನುವಾರ ರಾತ್ರಿ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಿಂದ ಹೋಟೆಲ್ ಗೆ ಮರಳುತ್ತಿದ್ದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.

ಬೆಂಕಿಯ ಪರಿಣಾಮವಾಗಿ, ಆಟಗಾರರು ಸುಮಾರು ಒಂದು ಗಂಟೆ ಕಾಲ ರಸ್ತೆ ಬದಿಯಲ್ಲೇ ಕಾಯಬೇಕಾಯಿತು. ನಂತರ ಮತ್ತೊಂದು ಪರ್ಯಾಯ ಬಸ್ ವ್ಯವಸ್ಥೆ ಮಾಡಿ ಎಲ್ಲರನ್ನೂ ಸುರಕ್ಷಿತವಾಗಿ ಹೋಟೆಲ್ ಗೆ ಕಳುಹಿಸಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಫೈನಲ್ ಪಂದ್ಯದಲ್ಲಿ 5 ವಿಕೆಟ್ ಗಳ ಸೋಲು ಕಂಡ ಕೆಲವೇ ಗಂಟೆಗಳಲ್ಲಿ ಗುಜರಾತ್ ಟೈಟನ್ಸ್ ತಂಡಕ್ಕೆ ಈ ಆಘಾತ ಎದುರಾಗಿದೆ. ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಫ್ರಾಂಚೈಸಿ ಖಚಿತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ