ವಿರಾಟ್ ಕೊಹ್ಲಿ 
ಕ್ರಿಕೆಟ್

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ!

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯು ಜೂನ್ 13 ರಂದು ಧರ್ಮಶಾಲಾದಲ್ಲಿ ಆರಂಭವಾಗುತ್ತದೆ. ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದಲ್ಲಿ ಮತ್ತು ಮೂರನೇ ಪಂದ್ಯ ಜೂನ್ 20 ರಂದು ಚೆನ್ನೈನಲ್ಲಿ ನಡೆಯಲಿದೆ.

ನವದೆಹಲಿ: ಭಾರತದ ಬ್ಯಾಟಿಂಗ್ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಗುರುವಾರ ಗಾಯದಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

'hamstring ಗಾಯದಿಂದಾಗಿ ವಿರಾಟ್ ಕೊಹ್ಲಿ ಅವರು ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ' ಎಂದು ಬಿಸಿಸಿಐ ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ.

37 ವರ್ಷ ವಯಸ್ಸಿನಲ್ಲೂ ಅಪ್ರತಿಮ ಫಿಟ್‌ನೆಸ್‌ಗೆ ಹೆಸರುವಾಸಿಯಾಗಿದ್ದ ಕೊಹ್ಲಿ, ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದರು, ಅಲ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸಿದ್ದರು. ಆವೃತ್ತಿಯಲ್ಲಿ 675 ರನ್‌ಗಳನ್ನು ಗಳಿಸಿದರು. ಇದರಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳು ಸೇರಿವೆ.

ಗುಜರಾತ್ ಟೈಟಾನ್ಸ್ (GT) ವಿರುದ್ಧದ ಫೈನಲ್‌ನಲ್ಲಿ ಅವರು ಅಜೇಯ 75 ರನ್ ಗಳಿಸುವ ಮೂಲಕ ಆರ್‌ಸಿಬಿ ಸತತ ಎರಡನೇ ಬಾರಿ ಪ್ರಶಸ್ತಿ ಗೆಲ್ಲಲು ಕಾರಣವಾಗಿದ್ದರು.

ಭಾರತದ ಮಾಜಿ ನಾಯಕ ಇದೀಗ ಭಾರತದ ಪರ ಒಂದೇ ಒಂದು ಸ್ವರೂಪದಲ್ಲಿ ಮಾತ್ರ ಆಡುತ್ತಿರುವುದರಿಂದ, ಕೊಹ್ಲಿ ಅನುಪಸ್ಥಿತಿಯು ಮುಂಬರುವ ಸರಣಿಯ ಹೊಳಪನ್ನು ಕಡಿಮೆ ಮಾಡುತ್ತದೆ. ಕೊಹ್ಲಿ ಅವರ ಅನುಕರಣೀಯ ಫಿಟ್‌ನೆಸ್ ಗಮನಿಸಿದರೆ, ಗಾಯದಿಂದಾಗಿ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಅತ್ಯಂತ ಅಪರೂಪ.

ಅಫ್ಘಾನಿಸ್ತಾನ ವಿರುದ್ಧದ ಸಂಪೂರ್ಣ ಸರಣಿಗೆ ರೋಹಿತ್ ಶರ್ಮಾ ಲಭ್ಯರೇ ಎಂಬುದನ್ನು ಕಾದು ನೋಡಬೇಕಾಗಿದೆ.

ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಕಳೆದ ವರ್ಷ ಟೆಸ್ಟ್ ಪಂದ್ಯಗಳಿಂದ ನಿವೃತ್ತರಾದಾಗಿನಿಂದ, ಅವರ ಏಕದಿನ ಭವಿಷ್ಯದ ಬಗ್ಗೆ ಅಪಾರ ಊಹಾಪೋಹಗಳು ಕೇಳಿಬರುತ್ತಿವೆ.

ಮುಂದಿನ 50 ಓವರ್‌ಗಳ ವಿಶ್ವಕಪ್ 2027ರ ಅಕ್ಟೋಬರ್-ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದ್ದು, ಪಂದ್ಯಾವಳಿಗೆ ಮುಂಚಿತವಾಗಿ ಅವರ ಫಾರ್ಮ್ ಮತ್ತು ಫಿಟ್‌ನೆಸ್‌ಗೆ ಅನುಗುಣವಾಗಿ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗುತ್ತದೆ.

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯು ಜೂನ್ 13 ರಂದು ಧರ್ಮಶಾಲಾದಲ್ಲಿ ಆರಂಭವಾಗುತ್ತದೆ. ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದಲ್ಲಿ ಮತ್ತು ಮೂರನೇ ಪಂದ್ಯ ಜೂನ್ 20 ರಂದು ಚೆನ್ನೈನಲ್ಲಿ ನಡೆಯಲಿದೆ.

ಅಫ್ಘಾನಿಸ್ತಾನ ಸರಣಿಯ ನಂತರ, ಭಾರತದ ಮುಂದಿನ ಏಕದಿನ ಪಂದ್ಯ ಇಂಗ್ಲೆಂಡ್‌ನಲ್ಲಿ ನಡೆಯಲಿದೆ. ಜುಲೈ 14 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳು ನಡೆಯಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುಸ್ತಿಪಟು ವಿನೇಶ್ ಫೋಗಟ್ ಪ್ರಕರಣ; WFIಗೆ ಭಾರೀ ಹಿನ್ನೆಡೆ, ಅರ್ಜಿ ಅನಗತ್ಯ ಎಂದು ವಜಾಗೊಳಿಸಿದ ಸುಪ್ರೀಂ ಕೋರ್ಟ್..!

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು, ಇರಾನ್ ಕಡೆ ಸ್ನೇಹದ ಹಸ್ತ..?

'ನಾನೇರಿದೆತ್ತರಕ್ಕೆ ನೀನೇರಬಲ್ಲೆಯಾ'? ನಿರ್ಗಮನಕ್ಕೂ ಉನ್ನತ ಹುದ್ದೆ ಅಲಂಕರಿಸಿ ವಿರೋಧಿಗಳಿಗೆ ಸೆಡ್ಡು ಹೊಡೆದ 'ರಾಜನೀತಿಜ್ಞ' ಸಿದ್ದರಾಮಯ್ಯ!

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ, ಅಮೆರಿಕಾ ಮಧ್ಯಸ್ಥಿಕೆ..!

ಮುಂದಿನ ಶತಮಾನ ಯಾರಿಗೆ ಸೇರಿದ್ದು? ನಿರ್ಧರಿಸುವುದು R&D ಮೇಲಿನ ಹೂಡಿಕೆ! (ಹಣಕ್ಲಾಸು)

SCROLL FOR NEXT