ದೇವದತ್ ಪಡಿಕ್ಕಲ್ 
ಕ್ರಿಕೆಟ್

ಮಹಾರಾಜ ಟ್ರೋಫಿ 2026 ಹರಾಜು: IPL ಮುಗಿದ ಬೆನ್ನಲ್ಲೇ ಹೊಸ T20 ತಂಡಕ್ಕೆ ಪಡಿಕ್ಕಲ್ ಸೇರ್ಪಡೆ

ಕೆಎಸ್‌ಸಿಎ ಮಹಾರಾಜ ಟಿ20 ಟ್ರೋಫಿಯ ಆಟಗಾರರ ಹರಾಜು ಪ್ರಕ್ರಿಯೆ ಶುಕ್ರವಾರ ನಗರದಲ್ಲಿ ಆರಂಭವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ದೇವದತ್ ಪಡಿಕ್ಕಲ್ ಅವರು ಇದೀಗ ಹೊಸ ತಂಡವನ್ನು ಸೇರಿಕೊಂಡಿದ್ದಾರೆ.

ಬೆಂಗಳೂರು: ಐಪಿಎಲ್ 2026 ಮುಕ್ತಾಯವಾದ ಬೆನ್ನಲ್ಲೇ ಕೆಎಸ್‌ಸಿಎ ಮಹಾರಾಜ ಟಿ20 ಟ್ರೋಫಿ ಇದೇ ಜೂನ್ 20 ರಿಂದ ಆರಂಭವಾಗುತ್ತಿದ್ದು, ಜುಲೈ 12 ರವರೆಗೆ ನಡೆಯಲಿದೆ.

ಕೆಎಸ್‌ಸಿಎ ಮಹಾರಾಜ ಟಿ20 ಟ್ರೋಫಿಯ ಆಟಗಾರರ ಹರಾಜು ಪ್ರಕ್ರಿಯೆ ಶುಕ್ರವಾರ ನಗರದಲ್ಲಿ ಆರಂಭವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ದೇವದತ್ ಪಡಿಕ್ಕಲ್ ಅವರು ಇದೀಗ ಹೊಸ ತಂಡವನ್ನು ಸೇರಿಕೊಂಡಿದ್ದಾರೆ.

ಮಹಾರಾಜ ಟ್ರೋಫಿ ಹರಾಜಿನಲ್ಲಿ ಮೈಸೂರ್ ವಾರಿಯರ್ಸ್​ ಫ್ರಾಂಚೈಸಿ ದೇವದತ್ ಪಡಿಕ್ಕಲ್ ಅವರನ್ನು ಗೆ 2 ಲಕ್ಷ 60 ಸಾವಿರ ರೂ. ನೀಡಿ ತಂಡಕ್ಕೆ ಸೇರಿಸಿಕೊಂಡಿದೆ.

ಮೈಸೂರ್ ವಾರಿಯರ್ಸ್​ ಫ್ರಾಂಚೈಸಿ ಪಡಿಕ್ಕಲ್​ಗೂ ಮೊದಲು ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ವೇಗಿ ವೈಶಾಕ್ ವಿಜಯ್​ಕುಮಾರ್ ಅವರನ್ನು 8.25 ಲಕ್ಷ ನೀಡಿ ತಂಡಕ್ಕೆ ಸೇರಿಸಿಕೊಂಡಿತು.

ಮತ್ತೊಬ್ಬ ಟೀಂ ಇಂಡಿಯಾ ವೇಗಿ ಪ್ರಸಿದ್ಧ ಕೃಷ್ಣ ಅವರು ಸಹ 2.60 ಲಕ್ಷಕ್ಕೆ ಮೈಸೂರ್ ವಾರಿಯರ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಆರ್​ಸಿಬಿಯ ಮಾಜಿ ಆಟಗಾರ ಮನೋಬ್ ಬಾಂಡಗೆ ಅವರನ್ನು 10 ಲಕ್ಷಕ್ಕೆ ಖರೀದಿ ಮಾಡಿದೆ. ಸ್ಫೋಟಕ ಬ್ಯಾಟರ್ ಚೇತನ್ ಎಲ್​ ಆರ್ ಕೂಡ 11.50 ಲಕ್ಷಕ್ಕೆ ಮೈಸೂರು ತಂಡವನ್ನು ಸೇರಿಕೊಂಡಿದ್ದಾರೆ.

ಹರಾಜಿನಲ್ಲಿ ಒಟ್ಟು ಆರು ತಂಡಗಳು ತಲಾ 60 ಲಕ್ಷ ರೂ ಪರ್ಸ್‌ನೊಂದಿಗೆ ಒಟ್ಟು 150 ಆಟಗಾರರಲ್ಲಿ ತಮ್ಮ ಅಗತ್ಯಕ್ಕೆ ತಕ್ಕತೆ ಆಟಗಾರರನ್ನು ಖರೀದಿಸಿ ತಮ್ಮ-ತಮ್ಮ ತಂಡಗಳನ್ನು ಬಲಿಷ್ಠಗೊಳಿಸಿಕೊಳ್ಳಲು ಪ್ರಯತ್ನಿಸಿವೆ. ಒಂದು ತಂಡ ಕನಿಷ್ಠ 16 ಆಟಗಾರರು ಹಾಗೂ ಗರಿಷ್ಠ 18 ಆಟಗಾರರನ್ನು ಖರೀದಿಸಲು ಅವಕಾಶವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ